ಬಿಜೆಪಿ ವೈಫಲ್ಯಗಳು, ಕಾಂಗ್ರೆಸ್‌ನ ಹೆಜ್ಜೆಗಳು: ನವ ಸಂಕಲ್ಪ ಚಿಂತನಾ ಶಿಬಿರಕ್ಕೆ ಇಂದು ಚಾಲನೆ
ಬೆಂಗಳೂರು, ಜೂ.2: ಇತ್ತೀಚೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ವತಿಯಿಂದ ರಾಜಸ್ಥಾನದ ಉದಯಪುರದಲ್ಲಿ ನಡೆದ ನವ ಸಂಕಲ್ಪ ಚಿಂತನಾ ಶಿಬಿರದ ಮಾದರಿಯಲ್ಲಿಯೇ ಕೆಪಿಸಿಸಿ ಸಹ ಜೂನ್ 2 ಮತ್ತು 3ರಂದು ನವಸಂಕಲ್ಪ ಶಿಬಿರ ಏರ್ಪಡಿಸಿದೆ.
ಬೆಂಗಳೂರಿನ ಸಾದಹಳ್ಳಿ ಗೇಟ್ ಬಳಿ ಇರುವ ಸ್ವಿಸ್ ಸಿಟಿಯ ಕ್ಲಾರ್ಕ್ಸ್ ಎಕ್ಸಾಟಿಕ ದಲ್ಲಿ ಗುರುವಾರ ಬೆಳಗ್ಗೆ ದಿನಗಳ ನವಸಂಕಲ್ಪ ಶಿಬಿರದ ಉದ್ಘಾಟನೆ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ವಿಧಾನಸಭಾ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಎಐಸಿಸಿ ಪದಾಧಿಕಾರಿಗಳು, ಪಕ್ಷದ ಹಿರಿಯ ನಾಯಕರುಗಳು, ಕೆಪಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ.
ನವಸಂಕಲ್ಪ ಚಿಂತನ ಶಿಬಿರ:
"ರಾಷ್ಟ್ರದುದ್ದಗಲದ 400ಕ್ಕೂ ಹೆಚ್ಚಿನ ಕಾಂಗ್ರೆಸ್ ನಾಯಕರು ರಾಜಸ್ಥಾನದ ಉದಯಪುರದಲ್ಲಿ ಮೂರು ದಿನಗಳ ಕಾಲ ನವ ಸಂಕಲ್ಪ ಚಿಂತನಾ ಶಿಬಿರ ಕಾರ್ಯಕ್ರಮದಲ್ಲಿ ಹಲವು ವಿಚಾರವಾಗಿ ಚರ್ಚೆ ಮಾಡಿದ್ದೆವು. ಅಲ್ಲಿ ಸಾಕಷ್ಟು ಮಂದಿ ನಮಗೆ ಮಾರ್ಗದರ್ಶನ ನೀಡಿದ್ದಾರೆ. ಅದೇ ಮಾದರಿಯಲ್ಲಿ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಈ ಸಭೆಯಲ್ಲಿ ರಾಷ್ಟ್ರಮಟ್ಟದಲ್ಲಿ ಆಗಿರುವ ಚರ್ಚೆ ಹಾಗೂ ತೀರ್ಮಾನಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಅನೇಕ ವಿಚಾರಗಳ ಬಗ್ಗೆ ರಾಜ್ಯ ನಾಯಕರ ಜತೆ ಚರ್ಚೆ ಮಾಡಲಾಗುವುದು," ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಆರ್ಥಿಕ ವ್ಯವಹಾರಗಳ ಸಮಿತಿಗೆ ವೀರಪ್ಪ ಮೋಯ್ಲಿ ಅವರು ಅಧ್ಯಕ್ಷರಾಗಿದ್ದರೆ ರಾಜೀವ್ ಗೌಡ ಆವರು ಅಡ್ಮಿನರ್ ಆಗಿದ್ದಾರೆ. ಇನ್ನು ರೆಹಮಾನ್ ಖಾನ್ ಅವರ ಅಧ್ಯಕ್ಷತೆಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಮಿತಿ ಮಾಡಲಾಗಿದೆ. ರಾಜ್ಯದ ಸಂಘಟನೆ ಸಂಘಟನೆ ಸಮಿತಿಯ ಅಧ್ಯಕ್ಷತೆಯನ್ನು ಬಿ.ಕೆ. ಹರಿಪ್ರಸಾದ್ ಹಾಗೂ ಸಂಚಾಲಕರಾಗಿ ನಾಸಿರ್ ಹುಸೇನ್ ಅವರನ್ನು ನೇಮಿಸಲಾಗಿದೆ. ಕೃಷಿ ಕ್ಷೇತ್ರದ ಸಮಿತಿಯಲ್ಲಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ಅವರು ನೇಮಿಸಲಾಗಿದೆ. ಯುವಕರು, ಮಹಿಳೆಯರು, ಶಿಕ್ಷಣ ಹಾಗೂ ಉದ್ಯೋಗ ಸಮಿತಿಗೆ ಅಧ್ಯಕ್ಷರಾಗಿ ಕೃಷ್ಣ ಭೈರೇಗೌಡ ಹಾಗೂ ಸಂಚಾಲಕರಾಗಿ ಶರತ್ ಬಚ್ಚೇಗೌಡ ಅವರನ್ನು ನೇಮಿಸಲಾಗಿದೆ. ರಾಜಕೀಯ ವ್ಯವಹಾರಗಳು, ಎಐಸಿಸಿ ಕಾರ್ಯಕ್ರಮಗಳ ಜಾರಿ ಸಮಿತಿಯ ಅಧ್ಯಕ್ಷರಾಗಿ ಡಾ.ಜಿ. ಪರಮೇಶ್ವರ್ ಹಾಗೂ ಸಂಚಾಲಕರಾಗಿ ಜಿ.ಸಿ ಚಂದ್ರಶೇಖರ್ ಅವರನ್ನು ನೇಮಿಸಲಾಗಿದೆ. ಪ್ರತಿ ಸಮಿತಿಯಲ್ಲಿ 20-25 ಸದಸ್ಯರನ್ನು ನೇಮಿಸಲಾಗುವುದು.
ಈ ಸಭೆಗೆ ಸುಮಾರು 500 ಜನರಿಗೆ ಆಹ್ವಾನ ನೀಡಲಾಗುವುದು. ಪರಾಜಿತ ಅಭ್ಯರ್ಥಿಗಳು, ಶಾಸಕರು, ಪರಿಷತ್ ಸದಸ್ಯರು, ಸಂಸದರು, ಮುಂಚೂಣಿ ಘಟಕಗಳ ಮುಖಂಡರು ಹಾಗೂ ನಾಯಕಿಯರಿಗೆ ಆಹ್ವಾನ ನೀಡಲಾಗಿದೆ.

ಈ ಸದಸ್ಯರನ್ನು 6 ಸಮಿತಿಗಳಾಗಿ ವಿಭಾಗ ಮಾಡಿದ್ದು , ಅವು ಚರ್ಚೆ ಮಾಡಿ ಪಕ್ಷಕ್ಕೆ ಸಲಹೆ ಸೂಚನೆಗಳನ್ನು ನೀಡಲಾಗುವುದು. ಎಐಸಿಸಿ ಅವರು ಕೊಟ್ಟಿರುವ ಕಾರ್ಯಕ್ರಮವನ್ನು ನಾನು ಹಾಗೂ ಸಿದ್ದರಾಮಯ್ಯನವರು ಎಲ್ಲರಿಗೂ ತಿಳಿಸುತ್ತೇವೆ. ಪಕ್ಷ ಮುಂದಿನ ದಿನಗಳಲ್ಲಿ ಹೇಗೆ ಸಾಗಬೇಕು, ಅದಕ್ಕಾಗಿ ಯಾವ ಕಾರ್ಯಕ್ರಮ ರೂಪಿಸಬೇಕು ಎಂದು ತೀರ್ಮಾನಿಸಲಾಗುವುದು. ರಾಜ್ಯದ ಎಲ್ಲ ಕಾರ್ಯಕರ್ತರಿಗೂ ಪಕ್ಷದ ಸಂಘಟನೆಗಳಿಗೆ ಸಂಬಂಧಿಸಿದಂತೆ ಸಲಹೆ ನೀಡುವುದಿದ್ದರೆ ಜೂ.2ರ ಒಳಗೆ ಬರವಣಿಗೆ ಮೂಲಕ ಕಳುಹಿಸಿಕೊಡಬೇಕು.
ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳು, ರಾಜ್ಯಕ್ಕೆ ಆಗಿರುವ ಅನ್ಯಾಯ ಹಾಗೂ ರಾಜ್ಯದಲ್ಲಿ ಧೃವೀಕರಣದ ಪ್ರಯತ್ನಗಳು ಸೇರಿದಂತೆ ಎಲ್ಲ ಪ್ರಮುಖ ವಿಚಾರಗಳ ಬಗ್ಗೆ ಮುಕ್ತವಾಗಿ ಚರ್ಚೆ ಮಾಡಲಾಗುವುದು.' ಎಂದರು.
Recommended Video












Click it and Unblock the Notifications