ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಮೇಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ ಕೆಪಿಸಿಸಿ

|
Google Oneindia Kannada News

Recommended Video

ರಮೇಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ ಕೆಪಿಸಿಸಿ | Oneindia Kannada

ಬೆಂಗಳೂರು, ಜನವರಿ 04 : ರಮೇಶ್ ಜಾರಕಿಹೊಳಿ ಅವರು ಏನೇ ಸಮಸ್ಯೆ, ಗೊಂದಲಗಳು ಇದ್ದರೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬಳಿ ಚರ್ಚೆ ನಡೆಸಲಿ ಎಂದು ಕೆಪಿಸಿಸಿ ಖಡಕ್ ಸೂಚನೆ ನೀಡಿದೆ. ರಮೇಶ್ ಜಾರಕಿಹೊಳಿ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರ ಜೊತೆ ಯಾವ ಶಾಸಕರು ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡಿರುವ ಕೆಪಿಸಿಸಿ ಅಸಮಾಧಾನದ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಂಡಿದೆ. ರಮೇಶ್ ಜಾರಕಿಹೊಳಿ ಅವರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸ್ನೇಹಿತನ ಪತ್ರ!ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸ್ನೇಹಿತನ ಪತ್ರ!

ಗೊಂದಲಗಳಿದ್ದರೆ ನೇರವಾಗಿ ಹೈಕಮಾಂಡ್, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಜೊತೆ ಚರ್ಚೆ ನಡೆಸಲಿ. ಎಲ್ಲೆಲ್ಲೋ ಹೇಳಿಕೆ ಕೊಟ್ಟು ಗೊಂದಲ ಸೃಷ್ಟಿ ಮಾಡುವುದು ಬೇಡ ಎಂದು ಪಕ್ಷ ಸ್ಪಷ್ಟವಾಗಿ ರಮೇಶ್ ಜಾರಕಿಹೊಳಿ ಅವರಿಗೆ ಸೂಚಿಸಿದೆ.

ಮಾಧ್ಯಮಗಳ ವಿರುದ್ಧ ರಮೇಶ್ ಜಾರಕಿಹೊಳಿ ಗರಂಮಾಧ್ಯಮಗಳ ವಿರುದ್ಧ ರಮೇಶ್ ಜಾರಕಿಹೊಳಿ ಗರಂ

ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ರಮೇಶ್ ಜಾರಕಿಹೊಳಿ ಅವರು ಪೌರಾಡಳಿತ ಸಚಿವರಾಗಿದ್ದರು. ಸಂಪುಟ ಪುನಾರಚನೆ ಮಾಡುವಾಗ ಅವರನ್ನು ಕೈ ಬಿಡಲಾಗಿದೆ. ಈ ಬೆಳವಣಿಗೆ ಬಳಿಕ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ.....

'ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಎಲ್ಲೂ ಹೋಗಲ್ಲ''ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಎಲ್ಲೂ ಹೋಗಲ್ಲ'

ಪಕ್ಷದ ನಾಯಕರ ವಿರುದ್ಧ ಗರಂ

ಪಕ್ಷದ ನಾಯಕರ ವಿರುದ್ಧ ಗರಂ

ಸಂಪುಟ ಪುನಾರಚನೆ ಆದ ಬಳಿಕ ರಮೇಶ್ ಜಾರಕಿಹೊಳಿ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಯಾರ ಕೈಗೂ ಸಿಗದೆ, ಯಾರ ಮಾತನ್ನೂ ಆಲಿಸದೆ ಮೈತ್ರಿ ಸರ್ಕಾರದ ಸ್ಥಿರತೆ ಬಗ್ಗೆ ಉಹಾಪೋಹಕ್ಕೆ ಕಾರಣವಾಗಿದ್ದಾರೆ. ಆದ್ದರಿಂದ, ಕೆಪಿಸಿಸಿ ಅವರ ವಿರುದ್ಧ ಕಠಿಣ ನಿಲುವು ತಳೆದಿದೆ.

ಸತೀಶ್ ಜಾರಕಿಹೊಳಿ ಮಾಹಿತಿ

ಸತೀಶ್ ಜಾರಕಿಹೊಳಿ ಮಾಹಿತಿ

ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕ್‌ಗೆ ಭೇಟಿ ನೀಡಿದ ಬಳಿಕ ರಮೇಶ್ ಜಾರಕಿಹೊಳಿ ಅವರ ಮುಂದಿನ ನಡೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಅವರು ಈ ಕುರಿತು ಪಕ್ಷದ ನಾಯಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪಕ್ಷ ತನ್ನ ನಿರ್ಧಾರವನ್ನು ಕೈಗೊಂಡಿದೆ.

ಪಕ್ಷದಲ್ಲಿ ಉಳಿಯುವುದಿಲ್ಲ

ಪಕ್ಷದಲ್ಲಿ ಉಳಿಯುವುದಿಲ್ಲ

ರಮೇಶ್ ಜಾರಕಿಹೊಳಿ ಅವರು ಪಕ್ಷದಲ್ಲಿ ಉಳಿಯುವುದಿಲ್ಲ ಎಂಬ ಸೂಚನೆ ನಾಯಕರಿಗೆ ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿರುವ ಅವರು ಅವರ ಮಾತನ್ನು ಕೇಳುವ ಸ್ಥಿತಿಯಲ್ಲಿಲ್ಲ. ಆದ್ದರಿಂದ ಪಕ್ಷ ಅವರ ವಿರುದ್ಧ ಕಠಿಣ ನಿಲುವನ್ನು ತಳೆದಿದೆ.

ದಿನೇಶ್ ಗುಂಡೂರಾವ್ ಹೇಳಿಕೆ

ದಿನೇಶ್ ಗುಂಡೂರಾವ್ ಹೇಳಿಕೆ

'ರಮೇಶ್ ಜಾರಕಿಹೊಳಿ ಕಾಂಗ್ರೆಸ್‌ನ ಕಟ್ಟಾಳು. ನಾನು ಮತ್ತು ರಮೇಶ್ ಇಬ್ಬರೂ ಒಟ್ಟಿಗೆ 5 ಬಾರಿ ಶಾಸಕರಾಗಿದ್ದೇವೆ. ಅವರು ದಯಮಾಡಿ ಬೇರೆಯವರ ಮಾತನ್ನು ಕೇಳುವುದು ಬೇಡ. ರಾಜಕೀಯವಾಗಿ ಮುಗಿಸುವಂತಹ ಜನರಿದ್ದಾರೆ. ತಲೆ ಕೆಡಿಸುವವರೂ ಸುತ್ತಲೂ ಇದ್ದಾರೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂದಿನ ನಡೆ ಇನ್ನೂ ನಿಗೂಢ

ಮಂದಿನ ನಡೆ ಇನ್ನೂ ನಿಗೂಢ

ರಮೇಶ್ ಜಾರಕಿಹೊಳಿ ಅವರ ಮುಂದಿನ ನಡೆ ಏನು? ಎಂಬುದು ಇನ್ನೂ ನಿಗೂಢವಾಗಿದೆ. ಗೋಕಾಕ್‌ನಲ್ಲಿರುವ ಅವರು ಮುಂದಿನ ನಿರ್ಧಾರವನ್ನು ತಿಳಿಸಲು 4 ದಿನ ಕಾಲಾವಕಾಶ ಕೋರಿದ್ದಾರೆ. ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ.

English summary
Karnataka Pradesh Congress Committee warned former minister Ramesh Jarakiholi. Ramesh Jarakiholi upset with party leaders after he dropped from H.D.Kumaraswamy cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X