Dhruva Narayan: KPCC ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್. ಧ್ರುವನಾರಾಯಣ ಹೃದಯಾಘಾತದಿಂದ ನಿಧನ
ಬೆಂಗಳೂರು, ಮಾರ್ಚ್ 11: ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್. ದ್ರುವನಾರಾಯಣ ಹೃದಯಾಘಾತದಿಂದ ಶನಿವಾರ ಮೈಸೂರಿನಲ್ಲಿ ನಿಧನರಾದರು.

"ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಧ್ರುವ ನಾರಾಯಣ ಅವರಿಗಿರಲಿಲ್ಲ, ಬಹಳ ಆಕ್ಟೀವ್ ಆಗಿದ್ದವರು. ತೀವ್ರ ರಕ್ತಸ್ರಾವದಿಂದ ಅವರು ಸಾವನ್ನಪ್ಪಿದ್ದಾರೆ" ಎಂದು ಅವರ ನೆರೆಮನೆಯವರೂ ಆಗಿರುವ ಡಾ.ಮಂಜುನಾಥ್ ಹೇಳಿದ್ದಾರೆ.
ರಂಗಸ್ವಾಮಿ ಧ್ರುವನಾರಾಯಣ ಅವರು ಲೋಕಸಭೆಯ ಮಾಜಿ ಸಂಸದರು. ಭಾರತದ 15 ಮತ್ತು 16 ನೇ ಲೋಕಸಭೆಯ ಸದಸ್ಯರಾಗಿದ್ದರು. ಕರ್ನಾಟಕದ ಚಾಮರಾಜನಗರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಧ್ರುವನಾರಾಯಣ ಅವರು ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹಗ್ಗವಾಡಿ ಗ್ರಾಮದಲ್ಲಿ ಜನಿಸಿದರು. ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಧ್ರುವನಾರಾಯಣ ಅವರು ವಿದ್ಯಾರ್ಥಿ ನಾಯಕರಾಗಿ ರಾಜಕೀಯ ಪಯಣ ಆರಂಭಿಸಿದ್ದರು. 1983ರಲ್ಲಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಸೇರಿದರು. 1984 ರಲ್ಲಿ, ಅವರು ಬೆಂಗಳೂರಿನ ಹೆಬ್ಬಾಳದ ಕೃಷಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು. ಅದೇ ವರ್ಷದಲ್ಲಿ, ಅವರು ಬೆಂಗಳೂರು ನಗರದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರೂ ಆಗಿದ್ದರು. 1986 ರಲ್ಲಿ ಅವರು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.
1999 ರಲ್ಲಿ, ಅವರು ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸಂತೇರ್ಮರಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದರು, ಅವರು ಸೋತರು. 2004ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡರು. ಅವರ 2008ರಲ್ಲಿ ಕೊಳ್ಳೇಗಾಲ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ 11,800 ಮತಗಳ ಅಂತರದಿಂದ ಗೆದ್ದರು. ಇದಾದ ಬಳಿಕ ಚಾಮರಾಜನಗರ ಕ್ಷೇತ್ರದಿಂದ 4,020 ಮತಗಳ ಅಂತರದಿಂದ 15ನೇ ಲೋಕಸಭೆಗೆ ಆಯ್ಕೆಯಾದರು. 2014ರಲ್ಲಿ ಮತ್ತೊಮ್ಮೆ 1,41,182 ಮತಗಳ ಅಂತರದಿಂದ ಗೆದ್ದು 16ನೇ ಲೋಕಸಭೆಗೆ ಸಂಸದರಾಗಿ ಆಯ್ಕೆಯಾದರು. 2019 ರಲ್ಲಿ, ಧ್ರುವನಾರಾಯಣ ಅವರು 17 ನೇ ಲೋಕಸಭೆ ಚುನಾವಣೆಯಲ್ಲಿ ಶ್ರೀನಿವಾಸ ಪ್ರಸಾದ್ ವಿರುದ್ಧ 12,716 ಮತಗಳ ಅಂತರದಿಂದ ಪರಾಭವಗೊಂಡರು.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, 'ನಗುಮುಖದ ಗೆಳೆಯ, ನಮ್ಮ ನಾಯಕ ಮತ್ತು ಕಾಂಗ್ರೆಸ್‌ನ ಅತ್ಯಂತ ಸಮರ್ಪಿತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಧ್ರುವನಾರಾಯಣ ಅವರ ನಿಧನ ಸರಿಪಡಿಸಲಾಗದ ನಷ್ಟವನ್ನು ಮಾಡಿದೆ. ಇದನ್ನು ವಿವರಿಸಲು ಯಾವುದೇ ಪದಗಳಿಲ್ಲ' ಎಂದು ತಿಳಿಸಿದ್ದಾರೆ.
No words can describe the irrepairable loss of our ever smiling friend, our leader & easily the most dedicated foot soldier of Congress, Sh. Dhruvanarayan.
— Randeep Singh Surjewala (@rssurjewala) March 11, 2023
Dedicated to the cause of poor, an avid champion of downtrodden, we will miss u forever my friend. RIP
ओम् शांति🙏 pic.twitter.com/JTlN9Hrxmz
ಧ್ರವ ನಾರಾಯಣ ಸಾವಿಗೆ ಕಂಬನಿ ಮಿಡಿದಿರುವ ಕೆಪಿಸಿಸಿ, 'ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು, ಮಾಜಿ ಸಂಸದರು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಶ್ರೀಯುತ ಧೃವ ನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ. ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೊರಕಲಿ' ಎಂದು ಹೇಳಿದೆ.
ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು, ಮಾಜಿ ಸಂಸದರು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಶ್ರೀಯುತ ಧೃವ ನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ. ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೊರಕಲಿ. pic.twitter.com/rU6gDhdn38
— Karnataka Congress (@INCKarnataka) March 11, 2023
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ 'ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್.ನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್.ನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
— Siddaramaiah (@siddaramaiah) March 11, 2023
ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ.
1/2 pic.twitter.com/R2vaxxWpCq
ಧ್ರುವ ನಾರಾಯಣ ಅವರ ಸಾವಿಗೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 'ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಶ್ರೀ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ' ಎಂದು ಹೇಳಿದ್ದಾರೆ.\
ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಶ್ರೀ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— Basavaraj S Bommai (@BSBommai) March 11, 2023
ಓಂ ಶಾಂತಿಃ pic.twitter.com/GetGPVmGmM
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ












Click it and Unblock the Notifications