ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬಗ್ಗೆ 'ಮೌನಿ ಬಾಬಾ' ಅಗಿದ್ದು ಯಾಕೆ ಮೋದಿಜಿ?

|
Google Oneindia Kannada News

ಬೆಂಗಳೂರು, ಜೂ. 17: ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಡಜನ್ ಪ್ರಶ್ನೆ ಮುಂದಿಟ್ಟು ಉತ್ತರ ಬಯಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ ಅವರು ಪ್ರಶ್ನೆಗಳ ಸುರಿಮಳೆಗೈದರು. ಪ್ರಧಾನಮಂತ್ರಿಗಳು ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಸಂತೋಷ. ಆದರೆ, ಈ ಸಂದರ್ಭದಲ್ಲಿ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳ ಬಯಸುತ್ತೇನೆ ಎಂದು ಮಾತು ಆರಂಭಿಸಿದರು.

ಮೈಸೂರಿಗೆ ಮೋದಿ; ನಗರದಲ್ಲಿನ ಭದ್ರತೆ ಹೇಗಿದೆ? ಮೈಸೂರಿಗೆ ಮೋದಿ; ನಗರದಲ್ಲಿನ ಭದ್ರತೆ ಹೇಗಿದೆ?

ಪ್ರಶ್ನೆ 1:

ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ (2018 ) ಬೆಂಗಳೂರಿನಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್ ಸರ್ಕಾರ 10 % ಕಮಿಷನ್ ಸರ್ಕಾರ ಎಂದು ಆರೋಪ ಮಾಡಿದ್ರಿ. ಆಗ ಸಿದ್ದರಾಮಯ್ಯ ವಿರುದ್ಧವಾಗಲಿ, ಸಂಪುಟ ಸಚಿವರ ವಿರುದ್ಧ ಯಾವುದೇ ಆರೋಪ ಹಾಗೂ ದೂರು ದಾಖಲಾಗಿರಲಿಲ್ಲ. ಆದರೂ ರಾಜಕೀಯ ಕಾರಣಗಳಿಗೆ ಕಾಂಗ್ರೆಸ್ ಸರ್ಕಾರವನ್ನು 10% ಸರ್ಕಾರ ಎಂದಿದ್ದೀರಿ. ರಾಜ್ಯದಲ್ಲಿರುವ ನಿಮ್ಮ ಸರ್ಕಾರ 40 % ಸರ್ಕಾರ ಎಂದು ವಿಶ್ವವಿಖ್ಯಾತಿ ಪಡೆದಿದ್ದು, ಈ ಅಮೋಘ ಸಾಧನೆ ಬಗ್ಗೆ ನಿಮ್ಮ ಅಭಿಪ್ರಾಯವೇನು?

Kpcc working president Ramalingareddy asks 12 questions to PM Modi

ಪ್ರಶ್ನೆ 02 :

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಒಂದು ವರ್ಷದ ಹಿಂದೆ ನೇರವಾಗಿ ನಿಮಗೆ ಪತ್ರ ಬರೆಯುತ್ತಾರೆ. ಇನ್ನು ಆತ್ಮಹತ್ಯೆಗೂ ಮುನ್ನ ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ 40 % ಕಮಿಷನ್ ಕಿರುಕುಳ ಕುರಿತು ನಿಮ್ಮನ್ನು ಭೇಟಿ ಮಾಡಲು ಪ್ರಯತ್ನಿಸಿ ಸಾಧ್ಯವಾಗದೇ ಪತ್ರ ಬರೆದರೂ ಈ ಭ್ರಷ್ಟಾಚಾರಗಳ ನೀವು ಮೌನಿ ಬಾಬಾ ಆಗಿದ್ದು ಯಾಕೆ?

ಪ್ರಶ್ನೆ 03:

ಪಿಎಸ್ಐ, ಸಹಾಯಕ ಪ್ರಾಧ್ಯಪಕರು, ಅರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವಾಡುತ್ತಿದೆ. ಆದರೂ ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ನಿಮಗೆ ನಿಮ್ಮ ಸಚಿವರ ಭ್ರಷ್ಟಾಚಾರ ಕಾಣಿಸುತ್ತಿಲ್ಲವೇ? ಭ್ರಷ್ಟಾಚಾರ ವಿರುದ್ಧದ ಹೋರಾಟ ಎಂದರೆ, ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದೇ ?

ಪ್ರಶ್ನೆ 04:

2022 ರ ವೇಳೆಗೆ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ನೀವು ಹೇಳಿದ್ದ ಮಾತು ನೆನಪಿದೆಯೇ? ರೈತರ ಆದಾಯದ ಬದಲು 700 ರೂ. ಇದ್ದ ರಸಗೊಬ್ಬರ 2 ಸಾವಿರ ಮುಟ್ಟಿದೆ. ಯಂತ್ರೋಪರಣಗಳ ಬಳಕೆ ವೆಚ್ಚ ಡಬಲ್ ಆಗಿರುವುದರ ಬಗ್ಗೆ ಏನು ಹೇಳುತ್ತೀರಿ ಮೋದಿಯವರೇ?

Kpcc working president Ramalingareddy asks 12 questions to PM Modi

ಪ್ರಶ್ನೆ 05:

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ನೀವು ಹೇಳಿದ್ದಿರಿ, ಆದರೆ ರಾಜ್ಯದಲ್ಲಿ ಹಿಜಾಬ್, ಆಜಾನ್, ಹಲಾಲ್, ಆರ್ಥಿಕ ಜಿಹಾದ್ ಹೆಸರಿನಲ್ಲಿ ಅಲ್ಪ ಸಂಖ್ಯಾತರ ಮೇಲೆ ನಿಮ್ಮ ಸಂಘಪರಿವಾರದವರೇ ಕೋಮು ದೌರ್ಜನ್ಯ ನಡೆಯುತ್ತಿದ್ದು, ಈ ವಿಚಾರದಲ್ಲಿ ನಿಮ್ಮ ನಿಲುವೇನು?

ಪ್ರಶ್ನೆ 06:

ಡಬಲ್ ಇಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯಲ್ಲಿ ತೇಲಿಸಲಿದೆ ಎಂದು ಬೀಗಿದ್ದಿರಿ ಅಲ್ಲವೇ? ರಾಜ್ಯದಲ್ಲಿ ನಿಮ್ಮ ಸರ್ಕಾರದ 5 ಸಾಧನೆ ಪಟ್ಟಿ ನೀಡುವಿರಾ?

ಪ್ರಶ್ನೆ 07:

ಕೋವಿಡ್ ಸಮಯದಲ್ಲಿ ನೀವು ಹೇಳಿದಂತೆ ಜಾಗಟೆ ಬಾರಿಸಿ, ಚಪ್ಪಾಳೆ ಹೊಡೆದು, ದೀಪ ಹಚ್ಚಿದೆವು. ಆದರೆ ತುರ್ತು ಸಮಯದಲ್ಲಿ ಆಕ್ಸಿಜನ್ ಪೂರೈಸದೇ ರಾಜ್ಯದ ಚಾಮರಾಜನಗರದಲ್ಲಿ 34 ಮಂದಿ ಪ್ರಾಣ ನುಂಗಿದ್ದು ಯಾಕೆ? ಆಕ್ಸಿಜನ್, ರೆಮಿಡಿಸಿವಿಯರ್, ಬೆಡ್, ವೆಂಟಿಲೇಟರ್ ಸಿಗಲಿಲ್ಲ. ಕಡೆಗೆ ಸ್ಮಾಶಾನದಲ್ಲೂ ಜಾಗಸಿಗಲಿಲ್ಲ. ಆಕ್ಸಿಜನ್ ಕೊರತೆಯಿಂದ ಯಾರೂ ಸತ್ತೇ ಇಲ್ಲ ಎಂದು ನಿಮಗೆ ಸುಳ್ಳು ವರದಿ ಕೊಟ್ಟ ನಿಮ್ಮ ಸರ್ಕಾರದ ವಿರುದ್ಧ ಕ್ರಮ ಇಲ್ಲ ಯಾಕೆ?

Kpcc working president Ramalingareddy asks 12 questions to PM Modi

ಪ್ರಶ್ನೆ 08

ಕಾಂಗ್ರೆಸ್ ಪ್ರತಿಭಟನೆಯಿಂದ ಕೋವಿಡ್ ಸೋಂಕು ಹರಡುತ್ತದೆ ಎಂದು ನಿಮ್ಮ ಸಚಿವ ಸುಧಾಕರ್ ಹೇಳುತ್ತಿದ್ದಾರೆ. ನೀವು ಬೆಂಗಳೂರಿನ ಕೊಮ್ಮಘಟ್ಟದಲ್ಲಿ 50 ಸಾವಿರ ಜನರನ್ನು ಸೇರಿಸಿ ಸಾರ್ವಜನಿಕ ಸಭೆ ಮಾಡುತ್ತಿದ್ದೀರಿ, 12 ಸಾವಿರಕ್ಕೂ ಹೆಚ್ಚು ಜನರ ಜತೆ ಮೈಸೂರಿನಲ್ಲಿ ಯೋಗ ಮಾಡಲಿದ್ದೀರಿ, ನಿಮ್ಮ ಈ ಕಾರ್ಯಕ್ರಮಗಳಿಂದ ಕೊರೋನಾ ಹರಡುವುದಿಲ್ಲವೇ?

ಪ್ರಶ್ನೆ -09:

ಸಚಿವ ಸುಧಾಕರ್ ಅವರೇ ಮಾಸ್ಕ್ ಇಲ್ಲದೆ ಮಕ್ಕಳ ಜತೆ ಇದ್ದಾರೆ. ಇದು ಸರಿಯೇ ?

ಪ್ರಶ್ನೆ- 10:

ಬೆಂಗಳೂರಿನಲ್ಲಿ 8 ಸಚಿವರಿದ್ದು, ಅವರು ಪ್ರಧಾನಿ ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ನೋಡಿಕೊಳ್ಳಲಿ ತಪ್ಪಿಲ್ಲ. ಆದರೆ ನಗರದಲ್ಲಿ ಲಕ್ಷಾಂತರ ರಸ್ತೆಗುಂಡಿಗಳು ಬಿದ್ದಾಗ, ನೆರೆ ಬಂದಾಗ ಈ ಸಚಿವರುಗಳು ತಮ್ಮ ಕ್ಷೇತ್ರ ಬಿಟ್ಟು ಹೊರಗೆ ಬರಲಿಲ್ಲ. ಏನು ಹೇಳುತ್ತೀರಿ ?

Kpcc working president Ramalingareddy asks 12 questions to PM Modi

ಪ್ರಶ್ನೆ-11:

ಮೇಕೆದಾಟು ಹಾಗೂ ಮಹದಾಯಿ ನಮ್ಮ ರಾಜ್ಯಕ್ಕೆ ಅಗತ್ಯವಿರುವ ಎರಡು ಪ್ರಮುಖ ನೀರಾವರಿ ಯೋಜನೆ. ಈ ಯೋಜನೆಗೆ ಯಾವಾಗ ಅನುಮತಿ ಕೊಡಿಸುವಿರಿ? ಈ ಬಗ್ಗೆ ನಿಮ್ಮ ಸ್ಪಷ್ಟ ನಿಲುವು ತಿಳಿಸಿ.

ಪ್ರಶ್ನೆ -12:

ಚುನಾವಣೆ ಸಂದರ್ಭದಲ್ಲಿ ಮತಬ್ಯಾಂಕ್ ಸೆಳೆಯಲು ಮೋದಿ ಅವರು ಬಸವಣ್ಣ, ಅಂಬೇಡ್ಕರ್, ಬುದ್ಧ, ಭಗತ್ ಸಿಂಗ್, ನಾರಾಯಣ ಗುರು, ಕನಕದಾಸರು, ಮಹಾವೀರರು ಸೇರಿದಂತೆ ಮಹನೀಯರ ಜಪ ಮಾಡುತ್ತೀರಿ. ಆದರೆ, ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಲ್ಲಿ ಈ ಮಹನೀಯರಿಗೆ ಅಪಮಾನ ಮಾಡಿದ್ದು, ಈ ಬಗ್ಗೆ ನಿಮ್ಮ ಸಬುಬೂ ಏನು?

English summary
KPcc working president Ramalingareddy asks 12 questions to PM Modi know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X