KPCL Exam: ಕೆಪಿಸಿಎಲ್ ಪರೀಕ್ಷೆ ರದ್ದುಪಡಿಸಿದ ಸುಪ್ರೀಂ ಕೋರ್ಟ್: ಮರು ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದ KEA
ಬೆಂಗಳೂರು, ನವೆಂಬರ್ 20: ಕರ್ನಾಟಕ ವಿದ್ಯುತ್ ನಿಗಮದಲ್ಲಿ (KPCL) ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹೊಸದಾಗಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ.
ಕರ್ನಾಟಕ ವಿದ್ಯುತ್ ನಿಗಮದ ಖಾಲಿ ಹುದ್ದೆಗಳ ನೇಮಕಾತಿಗಾಗಿ (KPCL Exam 2025) ಡಿಸೆಂಬರ್ 27 ಮತ್ತು 28ರಂದು ಮರು ಪರೀಕ್ಷೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ಬಿಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗಿತ್ತು ಇತ್ಯಾದಿ ಮಾಹಿತಿಯನ್ನು ನಮೂದಿಸಬೇಕು ಎಂದು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕರು ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.

ಅಧಿಸೂಚನೆಯ ಪ್ರಕಾರ, ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಮುಂದಿನ ಹಂತವಾದ KPCL ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್ ಮತ್ತು ಇತರ ತಾಂತ್ರಿಕ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಕೆಇಎ ಅಧಿಕೃತವಾಗಿ ಪ್ರಕಟಿಸಿದೆ. ವೇಳಾಪಟ್ಟಿ ವಿವರ ಮುಂದಿದೆ.
ಮೊದಲ ದಿನ ಪರೀಕ್ಷೆ ಡಿಸೆಂಬರ್ 27 ರಂದು ನಡೆಯಲಿದೆ. ಅಂದು ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ. ತಲಾ ವಿಷಯಕ್ಕೆ100 ಅಂಕ ಇದ್ದು, ಓಎಂಆರ್ ವಿಧಾನದಲ್ಲಿ ಇರುತ್ತದೆ ಎಂದು ಕೆಇಎ ತಿಳಿಸಿದೆ.
ಡಿಸೆಂಬರ್ 27ರ ಮೊದಲ ದಿನ ಈ ಹುದ್ದೆಗಳಿಗೆ ಪರೀಕ್ಷೆ
* ಕಿರಿಯ ಮೇಲ್ವಿಚಾರಕ ಹುದ್ದೆ
* ಸಹಾಯಕ ಇಂಜಿನಿಯರ್ ಸಿವಿಲ್
* ಸಹಾಯಕ ಇಂಜಿನಿಯರ್ ಎಲೆಕ್ಟ್ರಿಕಲ್
* ಸಹಾಯಕ ಇಂಜಿನಿಯರ್ ಮೆಕ್ಯಾನಿಕಲ್
* ಸಹಾಯಕ ಇಂಜಿನಿಯರ್ ಇನ್ಸ್ಟ್ರುಮೆಂಟೇಷನ್
ಡಿಸೆಂಬರ್ 28ರ ಈ ಹುದ್ದೆಗಳಿಗೆ ಪರೀಕ್ಷೆ-100 ಅಂಕ (ಬೆ 10 ರಿಂದ ಮ. 12ಗಂಟೆವರೆಗೆ)
* ಕೆಮಿಸ್ಟ್
* ಕಿರಿಯ ಇಂಜಿನಿಯರ್ ಸಿವಿಲ್
* ಕಿರಿಯ ಇಂಜಿನಿಯರ್ ಎಲೆಕ್ಟ್ರಿಕಲ್
* ಕಿರಿಯ ಇಂಜಿನಿಯರ್ ಎಲೆಕ್ಟ್ರಾನಿಕ್ಸ್
ಅದೇ ದಿನ ಡಿಸೆಂಬರ್ 28ರಂದು ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ (100 ಅಂಕ) ನಡೆಯಲಿದೆ. ಕನ್ನಡ ಭಾಷಾ ಪರೀಕ್ಷೆಯಲ್ಲಿ 35 ಅಂಕಗಳನ್ನು ಪಡೆಯುವುದು ಕಡ್ಡಾಯ. ಇಲ್ಲದಿದ್ದರೆ ಅಭ್ಯರ್ಥಿಗಳನ್ನು ಅರ್ಹರೆಂದು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು KEA ವೆಬ್‌ಸೈಟ್ https://cetonline.karnataka.gov.in/kea/kpcl2023 ಗೆ ಭೇಟಿ ನೀಡಬೇಕು.












Click it and Unblock the Notifications