ಕೆಪಿಎಲ್ನಲ್ಲಿ ಫಿಕ್ಸಿಂಗ್; ಇಬ್ಬರು ಆಟಗಾರರು ಸಿಸಿಬಿ ವಶಕ್ಕೆ
ಬೆಂಗಳೂರು, ನವೆಂಬರ್ 07 : ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ ಎನ್ನಲಾದ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಸಿಸಿಬಿ ಪೊಲೀಸರು ಇಬ್ಬರು ಆಟಗಾರರನ್ನು ವಶಕ್ಕೆ ಪಡೆದಿದ್ದಾರೆ.
ಸಿಸಿಬಿ ಪೊಲೀಸರು ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿ. ಎಂ. ಗೌತಮ್ ಮತ್ತು ಅಬ್ರಾರ್ ಖಾಜಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. 2019 ಕೆಪಿಎಲ್ ಫೈನಲ್ ಪಂದ್ಯದಲ್ಲಿ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಆರೋಪವಿದೆ.

ಬಳ್ಳಾರಿ ಟಸ್ಕರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ನಡುವೆ ಕೆಪಿಎಲ್ ಫೈನಲ್ ಪಂದ್ಯ 2019ರ ಆಗಸ್ಟ್ 31ರಂದು ಮೈಸೂರಿನಲ್ಲಿ ನಡೆದಿತ್ತು. ಇದೇ ಪಂದ್ಯದಲ್ಲಿ ಬೆಟ್ಟಿಂಗ್ ನಡೆದಿದೆ ಎಂಬ ಆರೋಪವಿದ್ದು, ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೆಪಿಎಲ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಫ್ಯಾಂಥರ್ಸ್ ತಂಡದ ಮಾಲೀಕ ಅಶ್ಪಾಕ್ ಅಲಿ ತಾರ್, ಬಳ್ಳಾರಿ ಟಸ್ಕರ್ಸ್ ತಂಡದ ಡ್ರಮ್ಮರ್ ಭವೇಶ್, ಬೆಂಗಳೂರು ಬ್ಲಾಸ್ಟರ್ ತಂಡದ ಬೌಲಿಂಗ್ ಕೋಚ್ ವಿನು ಪ್ರಸಾದ್ ಹಾಗೂ ಬ್ಯಾಟ್ಸ್ಮನ್ ವಿಶ್ವನಾಥನ್ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ದೆಹಲಿಯ ಇಬ್ಬರು ಬುಕ್ಕಿಗಳ ಬಂಧನಕ್ಕೆ ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಬುಕ್ಕಿಗಳಾದ ಜತ್ತಿನ್, ಸಯ್ಯಾಂ ವಿದೇಶದಲ್ಲಿ ತಲೆ ಮರಿಸಿಕೊಂಡಿದ್ದಾರೆ.
-
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications