ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಲ್‌ನಲ್ಲಿ ಫಿಕ್ಸಿಂಗ್; ಇಬ್ಬರು ಆಟಗಾರರು ಸಿಸಿಬಿ ವಶಕ್ಕೆ

|
Google Oneindia Kannada News

ಬೆಂಗಳೂರು, ನವೆಂಬರ್ 07 : ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ ಎನ್ನಲಾದ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಸಿಸಿಬಿ ಪೊಲೀಸರು ಇಬ್ಬರು ಆಟಗಾರರನ್ನು ವಶಕ್ಕೆ ಪಡೆದಿದ್ದಾರೆ.

ಸಿಸಿಬಿ ಪೊಲೀಸರು ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿ. ಎಂ. ಗೌತಮ್ ಮತ್ತು ಅಬ್ರಾರ್ ಖಾಜಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. 2019 ಕೆಪಿಎಲ್ ಫೈನಲ್ ಪಂದ್ಯದಲ್ಲಿ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಆರೋಪವಿದೆ.

ಸಿಸಿಬಿ ಬಲೆಗೆ ಬಿದ್ದ ದಡಿಯಾ ಉಮೇಶ, ಸೈಕೋ ಅಂಡ್ ಗ್ಯಾಂಗ್ ಸಿಸಿಬಿ ಬಲೆಗೆ ಬಿದ್ದ ದಡಿಯಾ ಉಮೇಶ, ಸೈಕೋ ಅಂಡ್ ಗ್ಯಾಂಗ್

KPL Fixing Case CCB Detained Two Cricketers

ಬಳ್ಳಾರಿ ಟಸ್ಕರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ನಡುವೆ ಕೆಪಿಎಲ್ ಫೈನಲ್ ಪಂದ್ಯ 2019ರ ಆಗಸ್ಟ್ 31ರಂದು ಮೈಸೂರಿನಲ್ಲಿ ನಡೆದಿತ್ತು. ಇದೇ ಪಂದ್ಯದಲ್ಲಿ ಬೆಟ್ಟಿಂಗ್ ನಡೆದಿದೆ ಎಂಬ ಆರೋಪವಿದ್ದು, ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಲಕ್ಷ್ಮಣ ಕೊಲೆ ಪ್ರಕರಣ : 6 ಆರೋಪಿಗಳು ಸಿಸಿಬಿ ಪೊಲೀಸರ ವಶಕ್ಕೆ ಲಕ್ಷ್ಮಣ ಕೊಲೆ ಪ್ರಕರಣ : 6 ಆರೋಪಿಗಳು ಸಿಸಿಬಿ ಪೊಲೀಸರ ವಶಕ್ಕೆ

ಕೆಪಿಎಲ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಫ್ಯಾಂಥರ್ಸ್ ತಂಡದ ಮಾಲೀಕ ಅಶ್ಪಾಕ್ ಅಲಿ ತಾರ್, ಬಳ್ಳಾರಿ ಟಸ್ಕರ್ಸ್ ತಂಡದ ಡ್ರಮ್ಮರ್ ಭವೇಶ್, ಬೆಂಗಳೂರು ಬ್ಲಾಸ್ಟರ್ ತಂಡದ ಬೌಲಿಂಗ್ ಕೋಚ್ ವಿನು ಪ್ರಸಾದ್ ಹಾಗೂ ಬ್ಯಾಟ್ಸ್‌ಮನ್ ವಿಶ್ವನಾಥನ್ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

 ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ದಾಳಿ

ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ದೆಹಲಿಯ ಇಬ್ಬರು ಬುಕ್ಕಿಗಳ ಬಂಧನಕ್ಕೆ ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಬುಕ್ಕಿಗಳಾದ ಜತ್ತಿನ್, ಸಯ್ಯಾಂ ವಿದೇಶದಲ್ಲಿ ತಲೆ ಮರಿಸಿಕೊಂಡಿದ್ದಾರೆ.

English summary
CCB police probing fixing case in Karnataka Premier League (KPL) match detained two cricketers of Ballari tuskers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X