ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್; ಬೆಳಗಾವಿ ಫ್ಯಾಂಥರ್ಸ್ ಕೋಚ್ ಬಂಧನ

|
Google Oneindia Kannada News

ಬೆಂಗಳೂರು, ಡಿಸೆಂಬರ್ 04 : ಕೆಪಿಎಲ್‌ ಫೈನಲ್ ಪಂದ್ಯದಲ್ಲಿ ನಡೆದ ಮ್ಯಾಚ್ ಫಿಕ್ಸಿಂಗ್ ಹಗರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದಾರೆ. ಬೆಳಗಾವಿ ಫ್ಯಾಂಥರ್ಸ್‌ ತಂಡದ ಕೋಚ್ ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.

ಬೆಳಗಾವಿ ಫ್ಯಾಂಥರ್ಸ್‌ ತಂಡದ ಕೋಚ್ ಸುಧೀಂದ್ರ ಶಿಂಧೆಯನ್ನು ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ. ಸೋಮವಾರ ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಶಿಂಧೆ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

ಕೆಪಿಎಲ್ ಫಿಕ್ಸಿಂಗ್ ಹಗರಣ; ಬುಕ್ಕಿ ಸಯ್ಯಂ ಬಂಧಿಸಿದ ಸಿಸಿಬಿ ಕೆಪಿಎಲ್ ಫಿಕ್ಸಿಂಗ್ ಹಗರಣ; ಬುಕ್ಕಿ ಸಯ್ಯಂ ಬಂಧಿಸಿದ ಸಿಸಿಬಿ

KPL Match Fixing Case Belagavi Panthers Coach Arrested

ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ಬಂಧಿತರು ವಿಚಾರಣೆ ವೇಳೆ ಬೆಳಗಾವಿ ಫ್ಯಾಂಥರ್ಸ್‌ ತಂಡದ ಕೋಚ್ ಸುಧೀಂದ್ರ ಶಿಂಧೆ ಹೆಸರು ಹೇಳಿದ್ದರು. ಆದ್ದರಿಂದ, ಅವರ ನಿವಾಸದ ಮೇಲೆ ಸಿಸಿಬಿ ದಾಳಿ ಮಾಡಿತ್ತು.

ಕೆಪಿಎಲ್‌ನಲ್ಲಿ ಫಿಕ್ಸಿಂಗ್; ಇಬ್ಬರು ಆಟಗಾರರು ಸಿಸಿಬಿ ವಶಕ್ಕೆ ಕೆಪಿಎಲ್‌ನಲ್ಲಿ ಫಿಕ್ಸಿಂಗ್; ಇಬ್ಬರು ಆಟಗಾರರು ಸಿಸಿಬಿ ವಶಕ್ಕೆ

ಬೆಳಗಾವಿ ಫ್ಯಾಂಥರ್ಸ್ ತಂಡದ ಮಾಲೀಕ ಅಲಿ ಅಶ್ಫಕ್ ತಾರ್‌ರನ್ನು ಹಿಂದೆಯೇ ಸಿಸಿಬಿ ಬಂಧಿಸಿತ್ತು. ಮ್ಯಾಚ್ ಫಿಕ್ಸಿಂಗ್ ಮಾಡಲು ಸುಧೀಂದ್ರ ಶಿಂಧೆ ಸಹಾಯ ಮಾಡಿದ್ದಾರೆ ಎಂಬ ಮಾಹಿತಿಯನ್ನು ಅವರು ನೀಡಿದ್ದರು. ಸುಧೀಂದ್ರ ಶಿಂಧೆಯನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗುತ್ತದೆ.

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಆರೋಪಿಗಳನ್ನು ದೋಷಮುಕ್ತಗೊಳಿಸಿದ ಹೈಕೋರ್ಟ್ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಆರೋಪಿಗಳನ್ನು ದೋಷಮುಕ್ತಗೊಳಿಸಿದ ಹೈಕೋರ್ಟ್

ಸುಧೀಂದ್ರ ಶಿಂಧೆ ಕೆಎಸ್‌ಸಿಎ ಆಡಳಿತ ಮಂಡಳಿ ಸದಸ್ಯರು ಹೌದು. ಆಟಗಾರರ ಜೊತೆ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಪ್ರಕರಣದಲ್ಲಿ ಶಿಂಧೆ ಪಾತ್ರವೇನು ಎಂಬುದನ್ನು ತಿಳಿದುಕೊಳ್ಳಲು ಸಿಸಿಬಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

English summary
CCB police arrested Sudhindra Shinde Karnataka Ranji player and coach of Belagavi Panthers. CCB probing KPL match fixing case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X