ಕೆಪಿಎಂಇ ತಿದ್ದುಪಡಿ ವಿಧೇಯಕ ಮಂಡನೆ, ಪ್ರಮುಖ ಅಂಶಗಳು

ಬೆಂಗಳೂರು, ನವೆಂಬರ್ 21 : ಕರ್ನಾಟಕದಲ್ಲಿ ನಾಲ್ಕು ದಿನಗಳ ಕಾಲ ಬಹು ಚರ್ಚಿತವಾಗಿದ್ದ 'ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017' ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ.

ಮಂಗಳವಾರ ಸಂಜೆ ವಿಧಾನಸಭೆಯಲ್ಲಿ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ವಿಧೇಯಕ ಮಂಡನೆ ಮಾಡಿದರು. ವೈದ್ಯರ ಪ್ರತಿಭಟನೆ ಹಿನ್ನಲೆಯಲ್ಲಿ ವಿಧೇಯಕಕ್ಕೆ ಕೆಲವು ತಿದ್ದುಪಡಿಗಳನ್ನು ಮಾಡಲಾಗಿದೆ.

KPME amendment bill 2017 tabled in assembly session

ತಿದ್ದುಪಡಿ ವಿಧೇಯಕದಲ್ಲೇನಿದೆ?

* ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ದರಪಟ್ಟಿ ಪ್ರದರ್ಶನ ಕಡ್ಡಾಯ

* ನಿಗದಿತ ಅವಧಿಯೊಳಗೆ ಹೆಚ್ಚಿಗೆ ಕಾಯಿಸದೇ ರೋಗಿಗಳೊಂದಿಗೆ ಸಮಾಲೋಚನೆ ಮಾಡಬೇಕು

* ಸಮಾಲೋಚನಾ ಕೊಠಡಿಯೊಳಗೆ ರೋಗಿಯ ಸಂಬಂಧಿ ಅಥವಾ ಸ್ನೇಹಿತರಿಗೆ ಅವಕಾಶ ನೀಡಬೇಕು

* ಸರ್ಕಾರಿ ಯೋಜನೆಯಡಿ ನೀಡುವ ಚಿಕಿತ್ಸೆಗಳಿಗೆ ಸರ್ಕಾರವೇ ದರ ನಿಗದಿ ಮಾಡಲಿದೆ

* ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕುಂದುಕೊರತೆ ದೂರು ಪ್ರಾಧಿಕಾರ ರಚನೆ

* ಸಮಿತಿಯಲ್ಲಿ ಡಿಎಚ್ ಓ, ಜಿಲ್ಲಾ ಆಯುಷ್ ಅಧಿಕಾರಿ, ಭಾರತೀಯ ವೈದ್ಯಕೀಯ ಸಂಸ್ಥೆಯ ಓರ್ವ ಪ್ರತಿನಿಧಿ, ಜಿಲ್ಲಾ ಮಟ್ಟದ ಮಹಿಳಾ ಪ್ರತಿನಿಧಿ ಇರುತ್ತಾರೆ

* ಖಾಸಗಿ ಆಸ್ಪತ್ರೆಗಳ ವೆಬ್ ಸೈಟ್ ನಲ್ಲಿ ಕಡ್ಡಾಯವಾಗಿ ದರ ಪ್ರಕಟಿಸಬೇಕು

* ದೂರು ಪ್ರಾಧಿಕಾರದಲ್ಲಿ ವಾದಿಸಲು ಅವಕಾಶವಿದೆ. ಜೈಲು ಶಿಕ್ಷೆ ಇಲ್ಲ

* ಸಂಬಂಧಪಟ್ಟ ಆರೋಪಿತ ವೈದ್ಯರು ಅಥವಾ ಸಂಸ್ಥೆ ವಕೀಲರನ್ನು ನೇಮಿಸಿಕೊಳ್ಳಬಹುದು

* ತುರ್ತು ಚಿಕಿತ್ಸಾ ಸಮಯದಲ್ಲಿ ಮುಂಗಡ ಹಣಕ್ಕೆ ರೋಗಿಗಳ ಸಂಬಂಧಪಟ್ಟವರಿಂದ ಒತ್ತಾಯ ಮಾಡುವಂತಿಲ್ಲ

* ಚಿಕಿತ್ಸೆ ಫಲಕಾರಿಯಾಗದೇ ರೋಗಿ ಸತ್ತರೆ ಬಾಕಿ ಹಣಕ್ಕೆ ಒತ್ತಾಯ ಮಾಡುವಂತಿಲ್ಲ

* ಆಯಾ ಆಸ್ಪತ್ರೆಗಳ ಚಿಕಿತ್ಸಾ ದರ ಪಟ್ಟಿಯನ್ನು ಆಯಾ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು

* ಸರ್ಕಾರಿ ಯೋಜನೆಗಳಡಿ ನೀಡುವ ಸರ್ಕಾರ ನಿಗದಿಪಡಿಸುವ ಚಿಕಿತ್ಸಾ ದರದ ಪಟ್ಟಿಯನ್ನು
ವೆಬ್ ಸೈಟ್ ಮತ್ತು ಆಸ್ಪತ್ರೆಗಳೆರಡಲ್ಲೂ ಪ್ರದರ್ಶಿಸಬೇಕು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+