ದೂರದಿಂದಲೇ ಹಾರೈಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ!
ಬೆಂಗಳೂರು, ಮೇ 13: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇದೇ ಮೇ 15 ರಂದು 58ನೇ ವಸಂತಕ್ಕೆ ಕಾಳಿಡುತ್ತಿದ್ದಾರೆ. ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಅವರು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ತೀರ್ಮಾನ ಮಾಡಿದ್ದು, ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
Recommended Video
ಅಭಿಮಾನಿಗಳಿಗೆ ಕೈಮುಗಿದು ಮನವಿ ಮಾಡಿಕೊಂಡ ಡಿ ಕೆ ಶಿವಕುಮಾರ್ | D K Shivakumar
ಊರಲ್ಲಿ ಇಲ್ಲದಿರುವುದರಿಂದ ಮೇ 15 ರಂದು ಜನ್ಮದಿನದ ಶುಭಾಶಯ ಕೋರಲು ಯಾರೂ ಬರಬಾರದೆಂದು ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ನಾನು ಅನಿವಾರ್ಯ ಕಾರಣಗಳಿಂದ ಮೇ 14 ರಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ಇರುವುದಿಲ್ಲ. ಹೀಗಾಗಿ ನಾಯಕರಾಗಲಿ, ಪಕ್ಷದ ಕಾರ್ಯಕರ್ತರಾಗಲಿ, ಅಭಿಮಾನಿ ಬಂಧುಗಳಾಗಲಿ, ಕನಕಪುರ ಕ್ಷೇತ್ರದವರಾಗಲಿ ಯಾರೂ ಕೂಡ ಸದಾಶಿವನಗರ ನಿವಾಸಕ್ಕಾಗಲಿ, ಪಕ್ಷದ ಕಚೇರಿಗಾಗಲಿ ಬರುವುದು ಬೇಡ.

ಯಾರೂ ಇದನ್ನು ತಪ್ಪಾಗಿ ಭಾವಿಸಬಾರದು. ದೂರದಿಂದಲೇ ನನ್ನನ್ನು ಹಾರೈಸಿ, ಆಶೀರ್ವಾದ ಮಾಡಿ. ಯಾವುದೇ ಕಾರಣಕ್ಕೂ ಭೇಟಿ ಮಾಡುವುದು ಬೇಡ. ಮೇ 18ರ ಬಳಿಕ ನಾನೇ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.












Click it and Unblock the Notifications