ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಿನಾಂಕ ಮರು ನಿಗದಿ; ಫೆ.28ರಂದು ನಡೆಯಲಿದೆ ಎಫ್‌ಡಿಎ ಪರೀಕ್ಷೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 2: ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಪರೀಕ್ಷೆಯನ್ನು ಇದೇ ಫೆ.28ರಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ.

ಈ ಕುರಿತು ಮಂಗಳವಾರ ಪ್ರಕಟಣೆ ಹೊರಡಿಸಿರುವ ಕೆಪಿಎಸ್ಸಿ, ಫೆ.28ರ ಭಾನುವಾರ ಎಫ್‌ಡಿಎ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ.

ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಭಾನುವಾರದ ಪರೀಕ್ಷೆ ಮುಂದೂಡಿಕೆಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಭಾನುವಾರದ ಪರೀಕ್ಷೆ ಮುಂದೂಡಿಕೆ

ಜ.24ರಂದು ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ, ಕೆಪಿಎಸ್ಸಿ ಕಚೇರಿಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಖಚಿತ ಮಾಹಿತಿಯ ಮೇರೆಗೆ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕ ಹುದ್ದೆಯ 1,114 ಪೋಸ್ಟ್ ಗಳಿಗೆ 3 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

KPSC FDA 2021 First Division Assistant Exams Has Been Rescheduled On Feb 28

ಜ.24ರ ಎಫ್‌ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಮೇಲೆ ಕೆಪಿಎಸ್ಸಿ ಮೇಲೆ ಅಭ್ಯರ್ಥಿಗಳು ಮುಗಿಬಿದ್ದಿದ್ದರು. ಭ್ರಷ್ಟ ಅಧಿಕಾರಿಗಳು ಕೆಪಿಎಸ್ಸಿ ಕಚೇರಿಯಲ್ಲೆ ಇದ್ದಾರೆ ಎಂದು ಟೀಕಿಸಿದ್ದರು. ಅಲ್ಲದೆ ಎಫ್‌ಡಿಎ ಪರೀಕ್ಷೆಯನ್ನು ಆನ್‌ಲೈನ್‌ ಮೂಲಕ ನಡೆಸಬೇಕೆಂದು ಒತ್ತಾಯಿಸಿದ್ದರು.

Recommended Video

ರಾಜ್ಯ ರಾಜಕೀಯದಲ್ಲಿ 'ಡಿನ್ನರ್' ಪಾಲಿಟಿಕ್ಸ್..! | Oneindia Kannada

ದಿನಾಂಕ ಮರು ನಿಗದಿ ಕುರಿತು ಕರ್ನಾಟಕ ಲೋಕಸೇವಾ ಆಯೋಗ ಕಾರ್ಯದರ್ಶಿ ಜಿ.ಸತ್ಯವತಿ, ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪರೀಕ್ಷೆಗೆ ದಿನಾಂಕ ಮರು ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ.

English summary
The Karnataka Public Service Commission has decided to conduct a First Division Assistant (FDA) Exam on February 28, which was postponed due to question paper leaks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X