ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿಯಿಂದ 440 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

|
Google Oneindia Kannada News

ಬೆಂಗಳೂರು, ಜ.22 : ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ಕರ್ನಾಟಕ ಲೋಕಸೇವಾ ಆಯೋಗ 'ಎ' ಮತ್ತು 'ಬಿ' ಶ್ರೇಣಿಯ 440 ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ­ಗಾಗಿ ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನ ಫೆಬ್ರವರಿ 20.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕಾರ್ಯದರ್ಶಿ ಮನೋಜ್‌ ಕುಮಾರ್‌ ಮೀನಾ ಅವರು ಈ ಕುರಿತ ಅಧಿಸೂಚನೆ ಹೊರಡಿಸಿದ್ದಾರೆ. ಏಪ್ರಿಲ್‌ 19ರಂದು ಪೂರ್ವಭಾವಿ ಪರೀಕ್ಷೆ ನಡೆಯ­ಲಿದ್ದು, ಆನ್‌ಲೈನ್‌ ಮೂಲಕ ಫೆಬ್ರುವರಿ 20ರ ರಾತ್ರಿ 11.45ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ ಕಲ್ಪಿಸಲಾಗಿದೆ.

KPSC

ವಯೋಮಿತಿ : ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಠ 21 ಗರಿಷ್ಠ 35 ವರ್ಷ. 2ಎ/2ಬಿ/3ಎ/3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷ. ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. [ಸರ್ಕಾರ, ರಾಜಭವನದ ನಡುವೆ ಕೆಪಿಎಸ್ ಸಿ ಗುದ್ದಾಟ]

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭಾರತೀಯ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದ ಸ್ನಾತಕ/ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದ್ದು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಯಾವುದೇ ಪದವಿ ಪರೀಕ್ಷೆಗೆ ಹಾಜರಾಗಿದ್ದರೂ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಯನ್ನು ಬರೆಯಬಹುದಾಗಿದೆ.

ಪರೀಕ್ಷಾ ಶುಲ್ಕ : ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರಿಗೆ 25 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಇತರ ಅಭ್ಯರ್ಥಿಗಳಿಗೆ 300 ರೂ. ಪರೀಕ್ಷಾ ಶುಲ್ಕವಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಜ್ಯದಲ್ಲಿರುವ ಗಣಕೀಕೃತ ಅಂಚೆ ಕಚೇರಿಗಳಲ್ಲಿ ಮಾತ್ರ ಶುಲ್ಕ ಪಾವತಿ ಮಾಡಲು ಅವಕಾಶವಿದೆ. ಶುಲ್ಕ ಪಾವತಿ ಮಾಡಲು ಕೊನೆಯ ದಿನ ಫೆಬ್ರವರಿ 21. [ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]

KPSC invites

ವಯೋಮಿತಿ ಸಡಿಲಿಕೆ : ಮಾಜಿ ಸೈನಿಕರಿಗೆ, ಅಂಗ­ವಿ­ಕರಿಗೆ ಮತ್ತು ವಿಧವೆಯರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ವಿವರಗಳಿಗೆ ಆಯೋಗದ ವೆಬ್‌ಸೈಟ್‌ಗೆ (http://kpsc.kar.nic.in/) ಭೇಟಿ ನೀಡಬಹುದು. [ನೇಮಕಾತಿ ಆದೇಶ ನೋಡಲು ಇಲ್ಲಿ ಕ್ಲಿಕ್ ಮಾಡಿ]

English summary
Karnataka Public Service Commission (KPSC)invited online applications for 440 posts of gazetted probationers for Group A and B. The last date for filling applications is February 20. For details visit KPSC website http://KPSC.kar.nic.in.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X