ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ
ಬೆಂಗಳೂರು, ಮಾ.4 : ಕರ್ನಾಟಕ ಲೋಕಸೇವಾ ಆಯೋಗ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಸ್ಪರ್ಧಾರ್ತಕ ಪರೀಕ್ಷೆಗಳ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 22, 2015.
ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ 5, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ 5, ತೋಟಗಾರಿಕಾ ಇಲಾಖೆಯಲ್ಲಿ 7, ಆಯುಷ್ ಇಲಾಖೆಯಲ್ಲಿ 90, ಉದ್ಯೋಗ ಮತ್ತು ತರಬೇತಿ ಇಲಾಖೆಯಲ್ಲಿ 5, ಕರ್ನಾಟಕ ರಾಜ್ಯ ವಿಮಾ ಯೋಜನೆಯಲ್ಲಿ 1 ಸೇರಿದಂತೆ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಕಾರ್ಯ ಆರಂಭವಾಗಿದ್ದು, ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಮಾರ್ಚ್ 22. ಅರ್ಜಿಯ ಶುಲ್ಕವನ್ನು ಪಾವತಿ ಮಾಡಲು ಮಾರ್ಚ್ 23 ಕೊನೆಯ ದಿನ. 2015ರ ಮೇ ತಿಂಗಳಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]
ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಕಳುಹಿಸುವ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ. ಅರ್ಜಿಯಲ್ಲಿ ಅಭ್ಯರ್ಥಿಗಳೂ ತಪ್ಪು ಮಾಹಿತಿ ನೀಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಅರ್ಜಿ ಶುಲ್ಕ : ಸಾಮಾನ್ಯ ವರ್ಗ, ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳಿಗೆ 300 ರೂ., ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ 1, ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 25 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು http://kpsc.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ONLINE APPLICATIONS FOR TECHNICAL/NON TECHNICAL/BACKLOG/ASST DIRECTOR OF TOWN PLANNING POSTS NOTIFICATION DT. 21-2-2015 ಅನ್ನು ಕ್ಲಿಕ್ ಮಾಡಿದರೆ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇತರ ಮಾಹಿತಿ ಲಭ್ಯವಾಗುತ್ತದೆ.

ಅರ್ಜಿ ಸಲ್ಲಿಕೆ ಸೇರಿದಂತೆ ಇತರ ಮಾಹಿತಿಗಳನ್ನು ಪಡೆಯಲು ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ದೂರವಾಣಿ ಸಂಖ್ಯೆಗೂ ಹೀಗಿವೆ. 080-30574957, 080-30574901, 080-22343137, 080-22343139, 080-30574917 080-30574938












Click it and Unblock the Notifications