KAS Exam ಅಭ್ಯರ್ಥಿಗಳಿಗೆ ಸಿಹಿ ಸುದ್ದಿ: ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಜ.18ಕ್ಕೆ ಸಭೆ
ಬೆಂಗಳೂರು, ಜನವರಿ 17: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಆಡಳಿತ ಸೇವೆ (KAS) 384 ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಯಡವಟ್ಟು ಆಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ ಅವರು ಆದ ಸಮಸ್ಯೆಗಳು ಪರಿಶೀಲಿಸಬೇಕು. ಚರ್ಚಿಸಲು ಸಭೆ ನಡೆಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.
ನಾಳೆ ಶನಿವಾರ ಜನವರಿ 18ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ಮಹತ್ವ ಸಭೆ ನಡೆಯಲಿದೆ. ಸಭೆ ಬಳಿಕ ಮಹತ್ವ ನಿರ್ಧಾರಗಳು ಪ್ರಕಟವಾಗುವ ಸಾಧ್ಯತೆ ಇದೆ. ಕೆಲವರು ಪರೀಕ್ಷೆ ನಡೆಸಿದ ಕರ್ನಾಟಕ ಲೋಕಸೇವಾ ಆಯೋಗವು (KPSC) ಜವಾಬ್ದಾರಿ ಕುರಿತು ಮಾತನಾಡಿದ್ದಾರೆ. ಸರ್ಕಾರ ಪರೀಕ್ಷಾರ್ಥಿಗಳ ಬದುಕಿನ ಜೊತೆಗೆ ಆಡವಾಡುತ್ತಿದೆ ಎಂದು ವಿಪಕ್ಷಗಳು ದೂರಿದ್ದಾರೆ.

ಸದ್ಯ ಸಭೆಯಲ್ಲಿ ಉಂಟಾದ ಲೋಪದೋಷಗಳು, ಸಾಧಕ ಬಾಧಕಗಳ ಕುರಿತು ಅಧಿಕಾರಿಗಳು ಚರ್ಚೆ ನಡೆಲಿಸಲಿದ್ದಾರೆ. ಬಳಿಕ ಮರು ಪರೀಕ್ಷೆ ನಡೆಸುತ್ತಾರೋ ಇಲ್ಲವೋ? ಎಂಬುದರ ಕುರಿತು ಅಥವಾ ಎಲ್ಲ ಪೂರ್ವಭಾವಿ ಪರೀಕ್ಷೆ ಬರೆದವರನ್ನು ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂಬ ಆಗ್ರಹಗಳಿಗೆ ಉತ್ತರ ಸಿಗುವ ಸಾಧ್ಯತೆ ಇದೆ.
ಶನಿವಾರದ ಕೆಪಿಎಎಸ್‌ಸಿ ಪರೀಕ್ಷೆ ಕುರಿತು ಸಭೆಯಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೆಪಿಎಸ್‌ಸಿ ಕಾರ್ಯದರ್ಶಿ ರಣದೀಪ ಚೌಧರಿ, ಡಿಪಿಎಆರ್ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳು ಏರಿದಂತೆ ಸರ್ಕಾರದ ಇನ್ನಿತರ ಅಧಿಕಾರಿಗಳು ಪಾಲ್ಗೊಂಡು ಸಭೆಯಲ್ಲಿ ಚರ್ಚಿಸಿ ಪರಿಶೀಲಿಸಿದ್ದಾರೆ. ನಂತರ ಏನು ಮಾಡಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ. ನಾಳಿನ ಸಭೆ ಪರೀಕ್ಷೆ ಬರೆದು ಪ್ರತಿಭಟಿಸುತ್ತಿರುವ ಪರೀಕ್ಷಾರ್ಥಿಗಳಿಗೆ ಪ್ರಮುಖ ದಿನವಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು (KPSC) ಕೆಎಎಸ್ ಖಾಲಿ ಹುದ್ದೆಗಳಿಗೆ 2024ರ ಆಗಸ್ಟ್ 27ರಂದು ಪೂರ್ವ ಭಾವಿ ಸಭೆ ನಡೆಸಲಾಗಿತ್ತು. ಆದರೆ ಅಂದಿನ ಪತ್ರಿಕೆಯಲ್ಲಿ ಸಾಕಷ್ಟು ಲೋಪದೋಷಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಾಕಷ್ಟು ವಿವಾದ ಉಂಟಾಯಿತು. ಕೊನೆಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಳೆದ ತಿಂಗಳು ಡಿಸೆಂಬರ್ 29ರಂದು ಮರು ಪರೀಕ್ಷೆ ನಡೆಸಿತ್ತು.

ನ್ಯಾಯಕ್ಕಾಗಿ ಪ್ರತಿಭಟನೆ: ಬಿಜೆಪಿ ಬೆಂಬಲ
ಈ ಮರು ಪರೀಕ್ಷೆಯಲ್ಲೂ ಸಹ ಲೋಪದೋಷಗಳು ಉಂಟಾಗಿದ್ದಕ್ಕೆ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಪರೀಕ್ಷಾಧಿಕಾರಿಗಳು ನ್ಯಾಯಕ್ಕಾಗಿ ಸರ್ಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಅವರ ಪ್ರತಿಭಟನೆಗೆ ಬಿಜೆಪಿ ನಾಯಕರು ಬೆಂಬಲಿಸಿದ್ದಾರೆ. ನಾಯಕರಾದ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಎಚ್‌ಡಿ ಕುಮಾರಸ್ವಾಮಿ ಸೇರಿ ಅನೇಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರಲ್ಲದೇ, ಪ್ರತಿಭಟನೆಗೆ ಸಹಕಾರ ನೀಡಿದ್ದಾರೆ.












Click it and Unblock the Notifications