ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಮುಖ್ಯ ಪರೀಕ್ಷೆ: ಪ್ರಶ್ನೆ ಪತ್ರಿಕೆ ಕುರಿತು ಸ್ಪಷ್ಟನೆಗಳು
ಬೆಂಗಳೂರು, ಮೇ 06: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆ ಕುರಿತು ಗೊಂದಲ ಉಂಟಾಗಿದೆ. ಪ್ರಶ್ನೆ ಪತ್ರಿಕೆಯ ಸೀಲ್ ಆಗಿದ್ದ ಬಂಡಲ್‌ನ ಕವರ್ ತೆರೆದ ಸ್ಥಿತಿಯಲ್ಲಿದ್ದ ಬಗ್ಗೆ ಅಭ್ಯರ್ಥಿಗಳು ಕೆಪಿಎಸ್‌ಸಿ ಕಾರ್ಯದರ್ಶಿಗೆ ಪತ್ರವನ್ನು ಬರೆದು ದೂರು ನೀಡಿದ್ದಾರೆ.
ಈಗ ಕೆಪಿಎಸ್‌ಸಿ ಈ ವಿವಾದದ ಕುರಿತು ಸ್ಪಷ್ಟನೆಯನ್ನು ನೀಡಿದೆ. ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಇಂತಹ ವದಂತಿ, ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದೆಂದು ತಿಳಿಸಿದೆ. ವಿವರವಾದ ಪತ್ರಿಕಾ ಪ್ರಕಟಣೆಯಲ್ಲಿ ಕೆಪಿಎಸ್‌ಸಿ ಹಲವು ಅಂಶಗಳನ್ನು ಉಲ್ಲೇಖಿಸಿದೆ.

ಕೆಪಿಎಸ್‌ಸಿ ಸ್ಪಷ್ಟನೆಗಳು: ಆಯೋಗದ ವತಿಯಿಂದ ದಿನಾಂಕ 05/05/2025ರಂದು ನಡೆಸಲಾದ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ಮುಖ್ಯ ಪರೀಕ್ಷೆಯ ಪಬಂಧ ಪತ್ರಿಕೆಯ ಪರೀಕ್ಷೆಯ ಸಂದರ್ಭದಲ್ಲಿ ಬೆಂಗಳೂರಿನ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಕಸ್ತೂರ ಬಾ ನಗರ, ಮೈಸೂರು ರಸ್ತೆ ಇಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸಾಧ್ಯತೆಯ ಬಗ್ಗೆ ಕೆಲವು ಸಮೂಹ ಮಾಧ್ಯಮಗಳು ವರದಿ ಮಾಡಿವೆ.
ಈ ವಿಷಯದ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಪರೀಕ್ಷಾ ಉಪ ಕೇಂದ್ರದ ಮೇಲ್ವಿಚಾರಕರು ಮತ್ತು ಆಯೋಗದಿಂದ ನಿಯೋಜಿತರಾದ ಸ್ಥಳೀಯ ನಿರೀಕ್ಷಣಾಧಿಕಾರಿಗಳಿಂದ ವಿಸ್ತ್ರತವಾದ ವರದಿಗಳನ್ನು ಪಡೆಯಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ಪ್ರೊಬೇಷನರಿ ಪರೀಕ್ಷೆಗಳೂ ಸೇರಿದಂತೆ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಡೆಸುವಾಗ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗದಂತೆ ಮತ್ತು ಪರೀಕ್ಷಾ ಗೌಪ್ಯತೆಯನ್ನು ಕಾಪಾಡುವ ಮತ್ತು ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಹಾಗೂ ದುರಾಚಾರ ಪ್ರಕರಣಗಳು ನಡೆಯದಂತೆ ತಡೆಯಲು ಹಲವು ಹಂತಗಳ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿರುತ್ತದೆ.
ಅದರಂತೆಯೇ ಈ ಪರೀಕ್ಷೆಯಲ್ಲಿಯೂ ಸಹ ಪ್ರಶ್ನೆ ಪತ್ರಿಕೆಯ ಭದ್ರತೆಗಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಮೊಹರು ಮಾಡಿದ ಪೆಟ್ಟಿಗೆ, ಮೊಹರು ಮಾಡಿದ ಲೋಹದ ಟ್ರಂಕ್, ಮೊಹರು ಮಾಡಿದ ಟ್ಯಾಂಪರ್ ಎವಿಡೆಂಟ್ ಕವರ್‌ಗಳನ್ನು ಇತ್ಯಾದಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಅದರೊಂದಿಗೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸುವಾಗ ಅವು ಹಾನಿಯಾಗದಂತೆ ಸಂರಕ್ಷಿಸಲು ನೀರು ನಿರೋಧಕ ಪ್ಲಾಸ್ಟಿಕ್ ಕವರ್‌ಗಳನ್ನು ದ್ರವ ಪದಾರ್ಥಗಳಿಂದ ಸುರಕ್ಷಿತವಾಗಿ ಸಂರಕ್ಷಿಸುವ ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸಲಾಗಿದ್ದು, ಅದು ಟ್ಯಾಂಪರ್ ಎವಿಡೆಂಟ್ ಕವರ್ ಆಗಿರುವುದಿಲ್ಲ.
ಸದರಿ ಪರೀಕ್ಷೆಯ ಪರೀಕ್ಷಾ ಉಪಕೇಂದ್ರಕ್ಕೆ ವಿತರಿಸಲಾದ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಪೆಟ್ಟಿಗೆಗಳು, ಟ್ರಂಕ್‌ಗಳು ಮತ್ತು ಟ್ಯಾಂಪರ್ ಎವಿಡೆಂಟ್ ಕವರಳಲ್ಲಿನ ಎಲ್ಲಾ ಭದ್ರತಾ ಮೊಹರುಗಳು ಕ್ರಮಬದ್ಧವಾಗಿಯೇ ಇರುವುದು ಕಂಡುಬಂದಿರುತ್ತದೆ. ಇದನ್ನು ಅಭ್ಯರ್ಥಿಗಳು, ಉಪ ಕೇಂದ್ರದ ಮೇಲ್ವಿಚಾರಕರು, ಸ್ಥಳೀಯ ನಿರೀಕ್ಷಣಾಧಿಕಾರಿಗಳು ಮತ್ತು ಕೊಠಡಿ ಸಂವೀಕ್ಷಕರು ಖಚಿತಪಡಿಸಿದ್ದಾರೆ. ಸದರಿ ಉಪ ಕೇಂದ್ರಕ್ಕಾಗಿ ಕೊನೆಯ ಪದರದ ಪ್ಲಾಸ್ಟಿಕ್ ಕವರ್‌ಗಳಲ್ಲಿ ಅಳವಡಿಸಲಾದ ಪ್ರಶ್ನೆ ಸಹಿತ ಉತ್ತರ ಪುಸ್ತಿಕೆಗಳ ಸಂಖ್ಯೆ ಇತರ ಕೇಂದ್ರಗಳಿಗೆ ಸಾಮಾನ್ಯವಾಗಿ ವಿತರಿಸಲಾದ ಪ್ರಶ್ನೆ ಪತ್ರಿಕೆಗಳಿಗಿಂತ ದುಪ್ಪಟ್ಟಾಗಿತ್ತು.
ಮೇಲೆ ತಿಳಿಸಿದ ಅಂಶಗಳ ಹಿನ್ನೆಲೆಯಲ್ಲಿ ಸದರಿ ಪ್ರಕರಣವನ್ನು ಪರಿಶೀಲಿಸಲಾಗಿ ಪ್ರಶ್ನೆಪತ್ರಿಕೆಗಳ ಗೌಪ್ಯತೆ ಮತ್ತು ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ಅವುಗಳನ್ನು ಬಹುಪದರಗಳುಳ್ಳ ಪ್ಯಾಕ್‌ನಲ್ಲಿರಿಸಿ ಮೊಹರು ಮಾಡಲಾಗಿರುತ್ತದೆ. ಹಾಗಾಗಿ, ಸದರಿ ಉಪಕೇಂದ್ರದ 2 ಕೊಠಡಿಗಳಲ್ಲಿ ಟ್ಯಾಂಪರ್ ಎವಿಡೆಂಟ್ ಎನ್ವಲಪ್ ಒಳಗಿನ ದ್ರವ ಪದಾರ್ಥಗಳಿಂದ ಸಂರಕ್ಷಿಸಲು ಪ್ಯಾಕ್ ಮಾಡಲಾಗಿದ್ದ ಪ್ಲಾಸ್ಟಿಕ್ ಕವರ್‌ಗಳು ಮಾತ್ರ ಪ್ಯಾಕಿಂಗ್ ಅಥವಾ ಸಾಗಣೆಯ ಸಮಯದಲ್ಲಿ ಯಾಂತ್ರಿಕವಾಗಿ ಹರಿದಿರಬಹುದಾದ ಸಾಧ್ಯತೆ ಇರುತ್ತದೆಯೇ ಹೊರತು ಇತರೆ ಯಾವುದೇ ರೀತಿಯ ಲೋಪಗಳುಂಟಾಗಿರುವುದಿಲ್ಲ.
ಇನ್ನುಳಿದಂತೆ ಆಯೋಗವು ನಡೆಸಿದ ಇತರೆ ಯಾವುದೇ ಪರೀಕ್ಷಾ ಉಪ ಕೇಂದ್ರಗಳಿಂದ ಈ ರೀತಿಯ ಯಾವುದೇ ವರದಿಗಳು ಸ್ವೀಕೃತವಾಗಿರುವುದಿಲ್ಲ. ಪರೀಕ್ಷಾ ಗೌಪ್ಯ ಸಾಮಗ್ರಿಗಳ ಗೌಪ್ಯತೆ, ಸುರಕ್ಷತೆ ಮತ್ತು ಭದ್ರತೆಯನ್ನು ಕಾಪಾಡುವಲ್ಲಿ ಆಯೋಗವು ಅತ್ಯಂತ ಜವಾಬ್ದಾರಿಯುತವಾಗಿ ಕಾಳಜಿ ವಹಿಸುವುದಲ್ಲದೆ, ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಯತ್ನಿಸುತ್ತಿದೆ ಎಂಬ ಅಂಶವನ್ನು ಪುನರುಚ್ಚರಿಸುತ್ತಾ, ಸಾಮಾಜಿಕ ಮತ್ತು ಸಮೂಹ ಮಾಧ್ಯಮದಲ್ಲಿ ಭಿತ್ತರಗೊಳ್ಳುತ್ತಿರುವ ವಿಷಯವು ಸತ್ಯಕ್ಕೆ ದೂರವಾದುದ್ದಾಗಿದ್ದು, ಇತರ ಅಭ್ಯರ್ಥಿಗಳು ಇದರಿಂದ ಯಾವುದೇ ರೀತಿಯಲ್ಲಿಯೂ ಹತಾಶರಾಗಬಾರದೆಂದು ಮತ್ತು ಇಂತಹ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದೆಂದು ಈ ಮೂಲಕ ತಿಳಿಸಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications