ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಭಾನುವಾರದ ಪರೀಕ್ಷೆ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಜನವರಿ 23: ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ ದಿಢೀರ್ ಮುಂದೂಡಿದೆ. ಪರೀಕ್ಷೆಯ ಪ್ರಶ್ನೆಪತ್ರಿಕೆಯು ಸೋರಿಕೆಯಾಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಅದು ತಿಳಿಸಿದೆ.

ಪ್ರಶ್ನೆ ಪತ್ರಿಕೆಗಳ ಸೋರಿಕೆ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಜ. 23ರ ಶನಿವಾರ ಕಡ್ಡಾಯ ಕನ್ನಡ ಭಾಷೆಯ ಪರೀಕ್ಷೆ ಮತ್ತು ಜ.24ರಂದು (ಭಾನುವಾರ) ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿತ್ತು.

KPSC Postponed FDA Examination After Question Paper Leaked

ಆದರೆ ಭಾನುವಾರ ನಡೆಯಬೇಕಿದ್ದ ಎರಡು ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಶನಿವಾರವೇ ಕೆಲವು ದುಷ್ಕರ್ಮಿಗಳ ಕೈಗೆ ದೊರಕಿರುವ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ. ಈ ಪರೀಕ್ಷೆಗಳ ದಿನಾಂಕವನ್ನು ಮರುನಿಗದಿ ಮಾಡಿ ಪ್ರಕಟಿಸಲಾಗುವುದು ಎಂದು ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ. ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2019-20ನೇ ಸಾಲಿನ 1136 ಹುದ್ದೆಗಳ ಭರ್ತಿಗಾಗಿ ಲಿಖಿತ ಪರೀಕ್ಷೆಗಳು ನಡೆಯುತ್ತಿದ್ದು, 3,74,124 ಮಂದಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು. ಕೋವಿಡ್ ಕಾರಣದಿಂದ ಪರೀಕ್ಷೆಗಳನ್ನು ಈ ಹಿಂದೆ ಮುಂದೂಡಲಾಗಿತ್ತು. ಈಗ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮತ್ತೆ ಪರೀಕ್ಷೆಯನ್ನು ಮುಂದೂಡಲಾಗಿದೆ.

Recommended Video

ರಾಜ್ಯದಲ್ಲಿ ಗಣಿಗಾರಿಕೆ ಅವಶ್ಯಕತೆ ಇದೆ, ಆದ್ರೆ illegal mining ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- CM BSY | Oneindia Kannada

ಭಾನುವಾರ ನಡೆಯಬೇಕಿದ್ದ ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 24 ಲಕ್ಷ ರೂ ನಗದು, ಪ್ರಶ್ನೆಪತ್ರಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ವಿಚಾರನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

English summary
KPSC has postponed the FDA exam to be held on January 24 after question paper reported leaked. CCB police arrested 4 people regarding question paper leak.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X