KPSC Recruitment: 20 ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳಿದ್ದರೆ ಕಂಪ್ಯೂಟರ್‌ನಲ್ಲಿ ಪರೀಕ್ಷೆ- ಇಲ್ಲಿದೆ ಮಾಹಿತಿ
ಬೆಂಗಳೂರು, ಜನವರಿ 9: ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ 'ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ' (ಸಿಬಿಆರ್‌ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಿರ್ಧರಿಸಿದೆ ಎಂದು 'ಪ್ರಜಾವಾಣಿ' ವರದಿ ಮಾಡಿದೆ.
20 ಸಾವಿರಕ್ಕಿಂತಲೂ ಕಡಿಮೆ ಅಭ್ಯರ್ಥಿಗಳು ಹಾಜರಾಗುವ ಪರೀಕ್ಷೆಗಳನ್ನು ಕಂಪ್ಯೂಟರ್‌ನಲ್ಲಿ ನಡೆಸಲಾಗುವುದು ಎಂದು ಕೆಪಿಎಸ್‌ಇ ಹೇಳಿದೆ.
'ಸಿಬಿಆರ್‌ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶವಿದೆ. ಆ ಹಿನ್ನೆಲೆಯಲ್ಲಿ ಜ.7 ರಂದು ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಅಣಕು ಪರೀಕ್ಷೆ ಯಶಸ್ವಿಯಾಗಿದೆ. ಆದ್ದರಿಂದ ಇದೇ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ' ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ಡಿ. 3 ರಂದು ನಡೆದ ಆಯೋಗದ ಸಭೆಯಲ್ಲಿ ಇದನ್ನು ತೀರ್ಮಾನಿಸಲಾಗಿತ್ತು. ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲು ಡಿ.22 ರಂದು ಅಧಿಸೂಚನೆ ಹೊರಡಿಸಲಾಗಿತ್ತು.
660 ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟಿಸಿದ ಕೆಪಿಸಿಸಿ
ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ (ಎಇ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ 8ರಂದು ಕೆಪಿಎಸ್‌ಇ ಪ್ರಕಟಿಸಿದೆ. ಸಂದರ್ಶನ ಮುಗಿದ 24 ಗಂಟೆಯೊಳಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಮೂಲಕ ಕೆಪಿಎಸ್ ದಾಖಲೆ ಬರೆದಿದೆ. ಈ ಹಿಂದೆ 24 ಗಂಟೆಯೊಳಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರಲಿಲ್ಲವೆಂದು ತಿಳಿದುಬಂದಿದೆ. ನೇಮಕಾತಿಯಲ್ಲಿ ಹಗರಣ ಹಾಗೂ ವಿಳಂಬದ ಮೂಲಕ ಕೆಪಿಎಸ್‌ಇ ಅಪಖ್ಯಾತಿ ಹೊಂದಿದೆ. ಆದರೆ, ಈಗ ಸಂದರ್ಶನ ಮುಗಿದ ಕೇವಲ 24 ಗಂಟೆಗಳ ಬಳಿಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (KPTCL) ವಿವಿಧ ಹುದ್ದೆಗಳಿಗೆ ಅರ್ಹತೆ ಪಡೆಯಲು ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಜನವರಿ 3 ರಂದು ಪ್ರಕಟಗೊಂಡಿದೆ. ಈ ಪರೀಕ್ಷೆಯು ಬೆಸ್ಕಾಂ, ಸೆಸ್ಕ್, ಹೆಸ್ಕಾಂ, ಮೆಸ್ಕಾಂ ಮತ್ತು ಜೆಸ್ಕಾಂಗಳ ಆಡಳಿತ ವ್ಯಾಪ್ತಿಯ ಕಚೇರಿಗಳಲ್ಲಿ ಖಾಲಿ ಇರುವ 1,492 ವಿವಿಧ ಹುದ್ದೆಗಳ ನೇಮಕಾತಿಗೆ ನಡೆದಿತ್ತು.












Click it and Unblock the Notifications