ಕೆಪಿಎಸ್‌ಸಿ ಪರೀಕ್ಷೆ ಕೀ ಉತ್ತರಗಳು ಪ್ರಕಟ
ಬೆಂಗಳೂರು, ನವೆಂಬರ್ 04 : ಕರ್ನಾಟಕ ಲೋಕಸೇವಾ ಆಯೋಗ 2015ರ ಅಕ್ಟೋಬರ್‌ನಲ್ಲಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಕೀ ಉತ್ತರಕ್ಕೆ ಆಕ್ಷೇಪಣೆಗಳಿದ್ದರೆ ನವೆಂಬರ್ 11ರೊಳಗೆ ಸಲ್ಲಿಸಬಹುದಾಗಿದೆ.
ಕೆಪಿಎಸ್‌ಸಿ http://kpsc.kar.nic.in/ ವೆಬ್‌ಸೈಟ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿದೆ. ನಿಗದಿತ ನಮೂನೆಯಲ್ಲಿ ಸಲ್ಲಿಸದ ಮತ್ತು ನವೆಂಬರ್ 11ರ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. [ಕೀ ಉತ್ತರ ಇಲ್ಲಿದೆ]

ಅಕ್ಟೋಬರ್ 3ರಂದು ಕರ್ನಾಟಕ ಆಹಾರ ನಾಗರೀಕ ಸರಬರಾಜು ನಿಗಮ (ನಿ) ದಲ್ಲಿನ ಹಿರಿಯ ಸಹಾಯಕರು ಮತ್ತು ಕಿರಿಯ ಸಹಾಯಕರ ಹುದ್ದೆಗಳ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಮತ್ತು ಅಕ್ಟೋಬರ್ 4ರಂದು ಕರ್ನಾಟಕ ರಾಜ್ಯದ ಸಿವಿಲ್ ಸೇವೆಯಡಿಯ ಸಹಾಯಕರು/ಪ್ರಥಮ ದರ್ಜೆ ಸಹಾಯಕರ ಹಾಗೂ ಕರ್ನಾಟಕ ಆಹಾರ ನಾಗರೀಕ ಸರಬರಾಜು ನಿಗಮ (ನಿ) ದಲ್ಲಿನ ಹಿರಿಯ ಸಹಾಯಕರ ಹುದ್ದೆಗಳ ಪರೀಕ್ಷೆ ನಡೆದಿತ್ತು. [ಕೆಪಿಎಸ್ಸಿ: ಕನ್ನಡ ಕಡ್ಡಾಯ, ಇತರ ನಿಯಮಾವಳಿಗಳೇನು?]
ಆಕ್ಷೇಪಣೆ ಸಲ್ಲಿಸಲು ವಿಳಾಸ : ಕೀ ಉತ್ತರಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಆಕ್ಷೇಪಣೆಗಳನ್ನು ಪುಷ್ಠೀಕರಿಸುವ ಆಧಾರಗಳುಳ್ಳ ಪುಸ್ತಕಗಳ ಹೆಸರು, ಲೇಖಕರ ಹೆಸರು, ವಿಷಯ, ಪ್ರಶ್ನೆ ಪತ್ರಿಕೆಯ ಶ್ರೇಣಿ, ಪ್ರಶ್ನೆ ಸಂಖ್ಯೆ ಮುಂತಾದ ವಿವರಗಳನ್ನು ಸಲ್ಲಿಸಬೇಕು.
ಆಕ್ಷೇಪಣೆಯನ್ನು ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು- 01 ಇವರಿಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿರುವ ನಿಗದಿತ ನಮೂನೆಯಲ್ಲಿ (ದ್ವಿಪ್ರತಿಯಲ್ಲಿ) ಸಲ್ಲಿಸಬಹುದು.












Click it and Unblock the Notifications