KPSC: ದೆಹಲಿ ಜೆನ್‌ಜೀ ಹೋರಾಟದ ಬೆನ್ನಲ್ಲೇ ಕರ್ನಾಟಕ ಲೋಕಸೇವಾ ಆಯೋಗದ ಸರ್ಜರಿಗೆ ಮುಂದಾದ ಸರ್ಕಾರ

KPSC: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಜೆನ್‌ಜೀ ಹೋರಾಟದ ಮೊದಲ ಹಂತ ಮುಕ್ತಾಯವಾಗಿದೆ. ಈ ಹೋರಾಟವು ಕೇಂದ್ರ ಎನ್‌ಡಿಎ ಬಿಜೆಪಿ ಸರ್ಕಾರಕ್ಕೆ ಮಾತ್ರವಲ್ಲ; ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೂ ಎಚ್ಚರಿಕೆಯ ಗಂಟೆಯಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ಮೊದಲಿನಿಂದಲೂ ವಿವಾದದ ಕೇಂದ್ರ ಬಿಂದುವೇ ಆಗಿದೆ. ಇದೀಗ ಈ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡಿದೆ. ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ ಮಾಡುವುದಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಹೇಳಿದೆ.

ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಸೇವಾ ಆಯೋಗವು 2026ರ ಜುಲೈ 26ರಂದು ತುರ್ತು ಸಭೆ ನಡೆಸಿದೆ. ಸಾರ್ವಜನಿಕರ ವಿಶ್ವಾಸವನ್ನು ಕಾಪಾಡುವ ಉದ್ದೇಶದಿಂದ ಹಾಗೂ ಆರೋಪಗಳ ಗಂಭೀರತೆಯನ್ನು ಮನಗಂಡು ಆಯೋಗವು ಕೆಳಕಂಡ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ಅವರು ತಿಳಿಸಿದ್ದಾರೆ.

KPSC

KPSC: ಪ್ರಾಥಮಿಕ ಮಾಹಿತಿಯ ಪರಿಶೀಲನೆ

2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು, ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಹಾಗೂ 2026ರ ಜುಲೈ 25ರಂದು ಪೊಲೀಸ್ ಇಲಾಖೆ ನೀಡಿರುವ ಪ್ರಾಥಮಿಕ ಮಾಹಿತಿ ವರದಿಯನ್ನು (FIR) ಆಯೋಗವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಂದುವರಿದು ಆಂತರಿಕ ತನಿಖಾ ಉಪಸಮಿತಿ ರಚನೆ ಮಾಡುವುದಾಗಿ ಹೇಳಲಾಗಿದೆ. ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಆಯೋಗದ ಹಿರಿಯ ಸದಸ್ಯರ ಅಧ್ಯಕ್ಷತೆಯಲ್ಲಿ ಆಂತರಿಕ ತನಿಖಾ ಉಪಸಮಿತಿಯನ್ನು ರಚಿಸಲಾಗಿದೆ.

KPSC: ಒಂದು ವಾರದಲ್ಲಿ ವರದಿ ಸಲ್ಲಿಕೆ

ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತ ಹಾಗೂ ಸಂಬಂಧಿತ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ವಾಸ್ತವಾಂಶಗಳ ಕುರಿತ ವಿವರವಾದ ವರದಿಯನ್ನು ಒಂದು ವಾರದೊಳಗೆ ಆಯೋಗಕ್ಕೆ ಸಲ್ಲಿಸುವಂತೆ ಉಪಸಮಿತಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೆ ತನಿಖೆಗೆ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ತನಿಖಾ ಕಾರ್ಯಕ್ಕೆ ಅಗತ್ಯವಾದ ಆಡಳಿತಾತ್ಮಕ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಲು ಕೆಪಿಎಸ್‌ಸಿ ಕಾರ್ಯದರ್ಶಿಯನ್ನು ಹಾಗೂ ಅಗತ್ಯ ಕಾನೂನು ಸಲಹೆ ನೀಡಲು ಕಾನೂನು ವಿಭಾಗದ ಮುಖ್ಯಸ್ಥರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ.

ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ

ಆಂತರಿಕ ತನಿಖಾ ಉಪಸಮಿತಿ ತನ್ನ ಅಂತಿಮ ವರದಿಯನ್ನು ಸಲ್ಲಿಸುವವರೆಗೆ, 2026ರ ಜುಲೈ 17ರಂದು ಪ್ರಕಟಿಸಲಾಗಿದ್ದ ಪಶುವೈದ್ಯಾಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿಯ ಜಾರಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ಆಯೋಗವು ನಿರ್ಧರಿಸಿದೆ. ಆಯೋಗವು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಬದ್ಧವಾಗಿದ್ದು, ತನಿಖಾ ವರದಿಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+