KPTCL Result 2023 : ಜ.3ಕ್ಕೆ ಎಇ, ಜೆಇ, ಜ್ಯೂನಿಯರ್ ಅಸಿಸ್ಟೆಂಟ್ ಪರೀಕ್ಷೆ ಫಲಿತಾಂಶ ಬಿಡುಗಡೆ
ಬೆಂಗಳೂರು, ಜನವರಿ 03: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕ ಪರೀಕ್ಷೆಯ ಫಲಿತಾಂಶವು ಇಂದು ಜನವರಿ 3ರ ಮಂಗಳವಾರದಂದು ಪ್ರಕಟವಾಗಲಿದೆ.
ಈ ಕುರಿತು ಮಾಹಿತಿ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್ ಅವರು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ನಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ನಡೆದ ಪರೀಕ್ಷೆಗಳ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಕಳೆದ ವಾರ ಬೆಳಗಾವಿಯ ವಿಧಾನಸಭೆ ಕಲಾಪದಲ್ಲಿ ತಿಳಿಸಿದ್ದರು.
ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಪರೀಕ್ಷೆಗಳನ್ನು ಐದು ತಿಂಗಳ ಹಿಂದಷ್ಟೇ ನಡೆಸಲಾಗಿತ್ತು. ಇದೀಗ ಆ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ಫಲಿತಾಂಶ ಬಿಡುಗಡೆ ಆಗಲಿದೆ.

ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್, ಕಿರಿಯ ಸಹಾಯಕ ಹುದ್ದೆಗಳಿಗೆ ನೇಮಕಾತಿಯನ್ನು ಆಪ್ಟಿಟ್ಯೂಡ್ ಪರೀಕ್ಷೆಯನ್ನು ನಡೆಸಿ, ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಮೀಸಲಾತಿ ನಿಯಮಗಳನ್ನು ಅನುಸರಿಸಿ ಬಳಿಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಕನಿಷ್ಠ ಶೇ.35ರಷ್ಟು ಅಂಕಗಳನ್ನು ಗಳಿಸುವುದು ಕಡ್ಡಾಯ. ಕನಿಷ್ಠ ಅಂಕ ಪಡೆದವರು ಮಾತ್ರ ಅರ್ಹತೆ ಪಡೆಯುತ್ತಾರೆ. ಆದರೆ ವರ್ಗಾವಾರು ಮೀಸಲಾತಿ, ಮೆರಿಟ್ ಆಧಾರದ ಮೇಲೆಯೇ ಅಂತಿಮ ಅಭ್ಯರ್ಥಿ ಆಯ್ಕೆ ನಡೆಯಲಿದೆ ಎಂದು ಕೆಪಿಟಿಸಿಎಲ್ ತಿಳಿಸಿದೆ.












Click it and Unblock the Notifications