ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿಧಾನ ಪರಿಷತ್‌ಗೆ?
ಬೆಂಗಳೂರು, ಮೇ 30: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಜೂನ್ 13ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯಲು ಭಾರೀ ಪೈಪೋಟಿ ನಡೆದಿದೆ. ಇದರ ನಡುವೆಯೇ ಮಾಜಿ ಸ್ಪೀಕರ್ ಅವರನ್ನು ಎಂಎಲ್‌ಸಿ ಮಾಡಬೇಕು ಎಂದು ಬೇಡಿಕೆ ಇಡಲಾಗಿದೆ.
ಮಾಜಿ ಸ್ಪೀಕರ್ ಕೆ. ಆರ್. ರಮೇಶ್ ಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ವಿಧಾನಸಭೆಯಲ್ಲಿ 135 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್ ಪಕ್ಷ ಸುಲಭವಾಗಿ 7 ಸದಸ್ಯರನ್ನು ಪರಿಷತ್‌ಗೆ ಆಯ್ಕೆ ಮಾಡಬಹುದು.

ವಿಧಾನ ಪರಿಷತ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ & ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದರು. ಆದರೆ ಪಟ್ಟಿಗೆ ಇನ್ನೂ ರಾಹುಲ್ ಗಾಂಧಿ ಒಪ್ಪಿಗೆ ಸಿಕ್ಕಿಲ್ಲ ಎಂಬ ಮಾಹಿತಿ ಇದೆ.
ರಮೇಶ್ ಕುಮಾರ್ ಆಯ್ಕೆ ಮಾಡಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಿ ಎಂದು ಕೋಲಾರ, ಚಿಕ್ಕಬಳ್ಳಾಪುರ ಎರಡು ಜಿಲ್ಲೆಗಳ ಕಾಂಗ್ರೆಸ್ ನಾಯಕರು ಬೇಡಿಕೆ ಇಟ್ಟಿದ್ದಾರೆ.
ಮೇ 28ರಂದು ಮಾಜಿ ಸಚಿವ ರಮೇಶ್ ಕುಮಾರ್ ಸೇರಿದಂತೆ ಕೋಲಾರ ಜಿಲ್ಲೆಯ ಪ್ರಮುಖ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ರನ್ನು ಗೃಹಕಚೇರಿಯಲ್ಲಿ ಭೇಟಿಮಾಡಿ, ಹಲವು ವಿಚಾರಗಳ ಕುರಿತು ಚರ್ಚಿಸಿದ್ದಾರೆ.
ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, "ರಮೇಶ್ ಕುಮಾರ್ ಅವರನ್ನು ಎಂಎಲ್‌ಸಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದೇವೆ. ಕೋಲಾರ-ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳ ಶಾಸಕರು ಹೋಗಿ ಈ ಕುರಿತು ಬೇಡಿಕೆ ತಿಳಿಸಿದ್ದೇವೆ" ಎಂದು ಹೇಳಿದ್ದಾರೆ.
"ಮಾಜಿ ಸಚಿವ ಶ್ರೀನಿವಾಸ ಗೌಡ ಅವರು ಕೂಡಾ ವಿಧಾನ ಪರಿಷತ್ ಸದಸ್ಯರಾಗಲು ಅರ್ಹರಿದ್ದಾರೆ. ಅವರಿಗೆ ಕೊಟ್ಟರೂ ಸ್ವಾಗತ ಮಾಡುತ್ತೇವೆ. ಆದರೂ ರಮೇಶ್ ಕುಮಾರ್ ಅವರನ್ನು ಎಂಎಲ್‌ಸಿ ಮಾಡಿ ಎಂದು ಹೈಕಮಾಂಡ್ ಬಳಿ ಮನವಿ ಮಾಡಿದ್ದೇವೆ" ಎಂದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಶಾಸಕರಿಗೆ ವಿಧಾನ ಪರಿಷತ್ ಸ್ಥಾನ ನೀಡಬಾರದು ಎಂಬ ಕೂಗು ಕಾಂಗ್ರೆಸ್‌ನಲ್ಲಿದೆ. ಆದರೆ ಹಿರಿತನ ಆಧಾರದ ಮೇಲೆ ರಮೇಶ್ ಕುಮಾರ್ ಎಂಎಲ್‌ಸಿ ಆಗಬಹುದು ಎಂಬ ಮಾತಿದೆ. ಆದರೆ ಈ ಕುರಿತು ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕೋಲಾರದ ಶ್ರೀನಿವಾಸಪುರ ಕ್ಷೇತ್ರದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದ ಕೆ. ಆರ್. ರಮೇಶ್ ಕುಮಾರ್ 2023ರ ಚುನಾವಣೆಯಲ್ಲಿಯೂ ಕಾಂಗ್ರೆಸ್ ಟಿಕೆಟ್ ಪಡೆದಿದ್ದರು. ಆದರೆ ಚುನಾವಣೆಯಲ್ಲಿ 85020 ಮತಗಳನ್ನು ಪಡೆದು, 95463 ಮತಗಳನ್ನು ಪಡೆದ ಜೆಡಿಎಸ್‌ನ ಜಿ. ಕೆ. ವೆಂಕಟರೆಡ್ಡಿ ವಿರುದ್ಧ ಸೋಲು ಕಂಡರು.
ಸಚಿವರಾಗಿ, ಸ್ಪೀಕರ್ ಆಗಿ ಕಾರ್ಯ ನಿರ್ವಹಣೆ ಮಾಡಿರುವ ರಮೇಶ್ ಕುಮಾರ್ ಅಪಾರ ರಾಜಕೀಯ ಅನುಭವ ಹೊಂದಿದ್ದಾರೆ. ಅವರನ್ನು ಪರಿಷತ್‌ಗೆ ಆಯ್ಕೆ ಮಾಡಿ ಕಳಿಸಿದರೆ ಪರಿಷತ್‌ನಲ್ಲಿ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಸರಿಯಾದ ವ್ಯಕ್ತಿ ಸಿಗಲಿದ್ದಾರೆ ಎಂಬ ಲೆಕ್ಕಾಚಾರವಿದೆ.
ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಜೂನ್ 3 ಕೊನೆಯ ದಿನವಾಗಿದೆ. ಇಂದು ಮಧ್ಯಾಹ್ನ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಬೆಂಗಳೂರಿಗೆ ಆಗಮಿಸಲಿದ್ದು, ಸಂಜೆ ಅಥವ ಶುಕ್ರವಾರ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆ ಇದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications