• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿದ್ದರಾಮಯ್ಯ ಸರ್ಕಾರದ ಯೋಜನೆ ಬಗ್ಗೆ ತನಿಖೆಗೆ ಸಿಎಂ ಆದೇಶ

|

ಬೆಂಗಳೂರು, ಸೆಪ್ಟೆಂಬರ್ 10 : ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ ಯೋಜನೆ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ. ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಮತ್ತು ಕೃಷ್ಣ ಬೈರೇಗೌಡರು ಕೃಷಿ ಸಚಿವರಾಗಿದ್ದಾಗ ಸರ್ಕಾರ 'ಕೃಷಿ ಭಾಗ್ಯ' ಯೋಜನೆ ಜಾರಿಗೆ ತಂದಿತ್ತು. ಈ ಯೋಜನೆ ಬಗ್ಗೆ ತನಿಖೆ ನಡೆಸುವಂತೆ ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ರೈತರಿಗಾಗಿ ಸಿದ್ದರಾಮಯ್ಯ ಸರ್ಕಾರದ ಕೊಡುಗೆ ಕೃಷಿ ಭಾಗ್ಯ

ಕೃಷಿ ಭಾಗ್ಯ ಯೋಜನೆಗೆ ಸರ್ಕಾರ 921.2 ಕೋಟಿ ರೂ. ಖರ್ಚು ಮಾಡಿದೆ. ಆದರೆ, ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಹಲವಾರು ದೂರುಗಳ ಬಂದ ಹಿನ್ನಲೆಯಲ್ಲಿ ತನಿಖೆಗೆ ಆದೇಶ ನೀಡಲಾಗಿದೆ. ಎರಡು ತಿಂಗಳಿನಲ್ಲಿ ವರದಿ ನೀಡಲು ಸೂಚಿಸಲಾಗಿದೆ.

ಕಲಬುರಗಿ ರೈತರಿಗೆ ನೆಮ್ಮದಿ ತಂದ ಕೃಷಿಭಾಗ್ಯ

ಕೃಷಿ ಭಾಗ್ಯ ಯೋಜನೆಯಡಿ 131 ತಾಲೂಕುಗಳಲ್ಲಿ 2,15,130 ಕೃಷಿ ಹೊಂಡ ನಿರ್ಮಾಣ ಮಾಡಲಾಗಿದೆ ಎಂದು ದಾಖಲೆಗಳು ಹೇಳುತ್ತಿವೆ. 2014-15, 2017-18ರ ಅವಧಿಯಲ್ಲಿ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ.

ಒಣಗುವ ಬೆಳೆಗಳಿಗೆ ಕಾಯಕಲ್ಪ ಕಲ್ಪಿಸಿದ ಕೃಷಿ ಭಾಗ್ಯ

ಮಳೆಯಾಶ್ರಿತ ಪ್ರದೇಶದ ರೈತರ ಜೀವನೋಪಾಯ ಉತ್ತಮಪಡಿಸಲು ಕರ್ನಾಟಕ ಸರ್ಕಾರ ಕೃಷಿಭಾಗ್ಯ ಯೋಜನೆ ಜಾರಿಗೆ ತಂದಿತ್ತು. ಯೋಜನೆಯಡಿ ಮಳೆ ನೀರು ಸಂಗ್ರಹಣೆ ಮತ್ತು ಸಂರಕ್ಷಿತ ನೀರಾವರಿಗೆ ವಿಶೇಷ ಪ್ಯಾಕೇಜ್ ರೂಪಿಸಲಾಗಿತ್ತು. ಕೃಷಿಹೊಂಡ ನಿರ್ಮಾಣ ಮಾಡಲು ಶೇ 50ರಷ್ಟು ಸಹಾಯಧನ ನೀಡಲಾಗಿತ್ತು.

ಮೊದಲ ಹಂತದಲ್ಲಿ ರಾಜ್ಯದ 23 ಜಿಲ್ಲೆಗಳ 105 ತಾಲೂಕುಗಳಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗಿತ್ತು. ಮಿಷನ್ ಮೋಡ್ ಮಾದರಿಯಲ್ಲಿ ಹಂತ ಹಂತವಾಗಿ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಯೋಜನೆ ಜಾರಿಗೆ ತರಲಾಗಿತ್ತು.

ಕರ್ನಾಟಕ ಸರ್ಕಾರದ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಲು ಕೃಷಿ ಇಲಾಖೆ ಸಚಿವರಾಗಿದ್ದ ಕೃಷ್ಣ ಬೈರೇಗೌಡರು ಸಂಪರ್ಕಕ್ಕೆ ಸಿಕ್ಕಿಲ್ಲ. ಕುಟುಂಬದ ಜೊತೆ ಅವರು ಪ್ರವಾಸಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

English summary
Karnataka Chief Minister B.S.Yediyurappa ordered for probe on irregularity in Krishi Bhagya scheme that introduced during Siddaramaiah govt and krishna byregowda as agriculture minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X