ಬಗರ್ ಹುಕುಂ ಅರ್ಜಿ ವಿಲೇವಾರಿಗೆ 6 ತಿಂಗಳ ಗಡುವು, ಶೀಘ್ರವೇ ಆಪ್ ಬಿಡುಗಡೆ: ಕೃಷ್ಣ ಬೈರೇಗೌಡ

ಬೆಂಗಳೂರು ಅಕ್ಟೋಬರ್ 09: ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಸಲ್ಲಿಕೆಯಾಗಿರುವ ನಮೂನೆ 50, 53, 57 ಅರ್ಜಿಗಳನ್ನು ಮುಂದಿನ ಆರು ತಿಂಗಳಲ್ಲಿ ಸಂಪೂರ್ಣವಾಗಿ ಬಾಕಿ ಉಳಿಸದಂತೆ ಸಂಪೂರ್ಣ ವಿಲೇವಾರಿ ಮಾಡಬೇಕು. ಜೊತೆಗೆ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ನೀಡುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಕಂದಾಯ ಇಲಾಖೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಆನ್‌ಲೈನ್ ಮೂಲಕ ನಡೆಸಯಿತು. ಈ ವೇಳೆ ಸಲ್ಲಿಕೆಯಾದ ಅರ್ಜಿ ವಿಲೇವಾರಿ ಬಗ್ಗೆ ಮಾತನಾಡಿದರು.

Krishna Byre Gowda Instructed for disposal application of under Bagar Hukum scheme in 6 month

ಸಭೆಯಲ್ಲಿ ಕೃಷ್ಣ ಬೈರೇಗೌಡರು ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ವಿಲೇವಾರಿ ಆಗದೇಬ ಬಾಕಿ ಉಳಿದ ಬಗರ್ ಹುಕುಂ ಅರ್ಜಿಗಳ ಬಗ್ಗೆ ಗಮನ ಸೆಳೆದರು. ಅರ್ಜೀ ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳು ವಿಲೇವಾರಿಯಾಗದ ಕಾರಣ ರೈತರು ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ. ಇದು ಸರಿಯಲ್ಲ ಎಂದು ತಿಳಿಸಿದರು.

ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ಮುಂದಿನ 6 ತಿಂಗಳಲ್ಲಿ ಸಂಪೂರ್ಣವಾಗಿ ಬಾಕಿ ಉಳಿಸದಂತೆ ವಿಲೇವಾರಿ ಮಾಡಿ ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಸೂಚಿಸಿದರು.

ಅಧಿಕಾರಿಗಳು ಬಗರ್ ಹುಕುಂ ಅರ್ಜಿ ವಿಲೇವಾರಿ ಸಂಬಂಧಿಸಿದಂತೆ ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು. ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ರಾಜ್ಯದ ಜನ ಸಾಕಷ್ಟು ನಿರೀಕ್ಷೆಗಳೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದೆ. ಆ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.

Krishna Byre Gowda Instructed for disposal application of under Bagar Hukum scheme in 6 month

ಈ ಅರ್ಜಿ ವಿಲೇವಾರಿಗೆ ಮೊಬೈಲ್ ಆಪ್

ಇಲಾಖೆ ವ್ಯಾಪ್ತಿಯಲ್ಲಿ ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯವಾಗಿದೆ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದೆ. ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ.

ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅಲ್ಲದೆ, ಶೀಘ್ರ ಪ್ರಕ್ರಿಯೆಗೂ ಸಹಕಾರಿಯಾಗುವ ಆಪ್ ಸಿದ್ಧಪಡಿಸಲಾಗಿದೆ.

ಸರ್ಕಾರಿ ಕಚೇರಿಗೆ ಅಲೆಯುವುದು ತಪ್ಪಲಿದೆ

ಈ ಮೊಬೈಲ್ ಆಪ್ ಶೀಘ್ರದಲ್ಲೇ ಅಧಿಕಾರಿಗಳ ಕೈಸೇರಲಿದೆ. ಇದರ ಅನುಷ್ಠಾನ ಬಳಿಕ ಅಧಿಕಾರಿಗಳು ತ್ವರಿತಗತಿಯಲ್ಲಿ ಬಹರ್ ಹುಕುಂ ಅರ್ಜಿ ವಿಲೇವಾರಿಗೊಳಿಸಬಹುದು. ಅಲ್ಲದೆ, ಅರ್ಜಿ ವಿಲೇವಾರಿಯಾದ ನಂತರ ಅರ್ಹ ಫಲಾನುಭವಿಗಳಿಗೆ ಇ-ಸಾಗುವಳಿ ಚೀಟಿಯನ್ನೂ ತಂತ್ರಾಂಶದ ಮೂಲಕವೇ ಒದಗಿಸಬಹುದು. ಜನರಿಗೂ ಅನುಕೂಲವಾಗಲಿದೆ. ಇದರಿಂದ ಸರ್ಕಾರಿ ಕಚೇರಿಗೆ ರೈತರು ಅಲೆಯುವುದು ತಪ್ಪಲಿದೆ ಎಂದು ಸಚಿವರು ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+