ಅವಧಿ ಮೀರಿದ ಎಲ್ಲಾ ಪ್ರಕರಣಗಳನ್ನೂ ಮುಂದಿನ 6 ತಿಂಗಳಲ್ಲಿ ಇತ್ಯರ್ಥಗೊಳಿಸಿ: ಗಡುವು ನೀಡಿದ ಕೃಷ್ಣ ಬೈರೇಗೌಡ
ಬೆಂಗಳೂರು ಜನವರಿ 13: ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಸಮಯದ ಗಡುವನ್ನು ನಿಗದಿಗೊಳಿಸಿದರು.
ಸೋಮವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆಗೆ ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ ಹೆಚ್ಚಿನ ಕಾಲ ಇಟ್ಟುಕೊಳ್ಳುವಂತಿಲ್ಲ ಎಂಬ ಕಾನೂನಿದೆ. ಆದರೆ, ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ವೇಳೆ ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ 60 ಸಾವಿರಕ್ಕೂ ಅಧಿಕ ಪ್ರಕರಣಗಳಿದ್ದವು. ಈ ಎಲ್ಲಾ ಪ್ರಕರಣಗಳನ್ನೂ ಮುಂದಿನ ಒಂದು ವರ್ಷದಲ್ಲಿ ಇತ್ಯರ್ಥಗೊಳಿಸಿ, ಸರ್ಕಾರಿ ಕಚೇರಿಗಳಿಗೆ ಜನರ ಅನಗತ್ಯ ಅಲೆದಾಟಕ್ಕೆ ಬ್ರೇಕ್ ಹಾಕಬೇಕು ಎಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ದೇಶವಾಗಿತ್ತು ಎಂದು ನೆನೆದರು.

ಆದರೆ, "ಒಂದೂವರೆ ವರ್ಷ ಕಳೆದರೂ ನಮ್ಮ ಈ ಉದ್ದೇಶ ಈಡೇರಿಲ್ಲ. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ಉಪ-ವಿಭಾಗಾಧಿಕಾರಿಗಳನ್ನು ನೇಮಕ ಮಾಡಿದರೂ ಸಹ ಶೇ.55ರಷ್ಟು ಪ್ರಕರಣಗಳನ್ನು ಮಾತ್ರ ವಿಲೇ ಮಾಡಲಾಗಿದೆ. ಎಸಿ ನ್ಯಾಯಾಲಯಗಳಲ್ಲಿ ಇನ್ನೂ 29,000ಕ್ಕೂ ಅಧಿಕ ಪ್ರಕರಣಗಳು ಬಾಕಿ ಇವೆ. ಇದರಿಂದ ಜನ ಸಾಮಾನ್ಯರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಮುಂದಿನ ಮುಂದಿನ ಆರು ತಿಂಗಳೊಳಗಾಗಿ ಈ ಎಲ್ಲಾ ಪ್ರಕರಣಗಳನ್ನು ಅಧಿಕಾರಿಗಳು ನ್ಯಾಯಯುತ ವಿಲೇಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಭಿಯಾನ ಮಾದರಿಯಲ್ಲಿ ಕೆಲಸಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.
ಆರು ತಿಂಗಳಲ್ಲಿ ಎಲ್ಲಾ ಪ್ರಕರಣಗಳನ್ನೂ ತಹಬದಿಗೆ ತರಬೇಕು ಎಂಬುದು ಸರ್ಕಾರದ ಸಂಕಲ್ಪ. ಒಂದು ವರ್ಷದಲ್ಲಿ ಆಗಬೇಕಾದ ಕೆಲಸ ಎರಡು ವರ್ಷ ಆದ್ರೂ ಆಗಿಲ್ಲ ಅಂದ್ರೆ ಸರ್ಕಾರಕ್ಕೆ ನಿಮಗೆ ಶೋಭೆ ತರಲ್ಲ. ಹೀಗಾಗಿ ಈ ವಾರದಿಂದಲೇ ರೆಗ್ಯುಲರ್ ಎಸಿಗಳು ತಿಂಗಳೊಂದಕ್ಕೆ 200 ರಿಂದ 250 ಪ್ರಕರಣಗಳನ್ನು ವಿಲೇ ಮಾಡಿದರೆ, ವಿಶೇಷ ಉಪ-ವಿಭಾಗಾಧಿಕಾರಿಗಳು ಕನಿಷ್ಟ 70 ರಿಂದ 100 ಪ್ರಕರಣಗಳನ್ನು ವಿಲೇಗೊಳಿಸಬೇಕು. ಆರು ತಿಂಗಳ ನಂತರವೂ ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು. ಅಲ್ಲದೆ, ಈ ಸಂಬಂಧ ಪ್ರತೀ ತಿಂಗಳೂ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗುವುದು" ಎಂದು ಎಚ್ಚರಿಸಿದರು.
ನ್ಯಾಯಾಲಯಗಳ ತಕರಾರು ಪ್ರಕರಣಗಳ ವಿಲೇವಾರಿಯ ಜೊತೆಗೆ ಪೋಡಿ ದುರಸ್ಥಿ, ನಮೂನೆ 3-9 ಮಿಸ್ಮ್ಯಾಚ್ ಹಾಗೂ ಫೌತಿ ಖಾತೆ ಆಂದೋಲನ ಉಪ ವಿಭಾಗಾಧಿಕಾರಿಗಳ ಮಟ್ಟದಲ್ಲೇ ನಡೆಯಬೇಕು. ಹೀಗಾಗಿ ಅಧಿಕಾರಿಗಳು ಜನರ ಸಮಸ್ಯೆ ಹಾಗೂ ತಮ್ಮ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಕೆಲಸಗಳನ್ನೂ ಅಭಿಯಾನ ಮಾದರಿಯಲ್ಲಿ ನಡೆಸಬೇಕು ಎಂದು ಅವರು ಕಿವಿಮಾತು ಹೇಳಿದರು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications