ಸಚಿವ ಸ್ಥಾನ ನನಗೂ ಬೇಕು ಎಂದ ಚಿಂತಾಮಣಿ ಶಾಸಕ ಕೃಷ್ಣಾ ರೆಡ್ಡಿ
ಬೆಂಗಳೂರು, ಮೇ 22: ನನಗೂ ಸಚಿವ ಸ್ಥಾನ ಕೊಡಬೇಕು, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಚಿಂತಾಮಣಿ ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಹೇಳಿದ್ದಾರೆ.
ದೇವನಗಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿಯವರು ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಬಗ್ಗೆ ನನಗೆ ಗೊತ್ತಿಲ್ಲ ಆದರೆ ನನಗೆ ಸಚಿವ ಸ್ಥಾನವನ್ನು ನೀಡಬೇಕು ನನಗೂ ಸಚಿವ ಸ್ಥಾನ ನೀಡಬೇಕು ನಾನೂ ಕೂಡ ಆಕಾಂಕ್ಷಿ ಎಂದು ಹೇಳಿದ್ದಾರೆ.

ಕಳೆದ 10 ವರ್ಷಗಳಿಂದ ಜೆಡಿಎಸ್ ಪಕ್ಷಕ್ಕಾಗಿ ದುಡಿದಿದ್ದೇನೆ, ಈಗ ಕಾಲ ಕೂಡಿ ಬಂದಿದೆ ಎಚ್‌ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲಿದ್ದಾರೆ. ನನಗೂ ಸಚಿವ ಸ್ಥಾನ ನೀಡುತ್ತಾರೆ ಎನ್ನುವ ಭರವಸೆ ಇದೆ. ಅಭಿವೃದ್ಧಿ ದೃಷ್ಟಿಯಿಂದ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಎಂದು ಒತ್ತಾಯಿಸಿದ್ದಾರೆ.












Click it and Unblock the Notifications