ರೈತರಿಗೆ ಗುಡ್‌ನ್ಯೂಸ್! ಕರ್ನಾಟಕಕ್ಕೆ ತೆಲಂಗಾಣದಿಂದ ನೀರು ಬಿಡುಗಡೆ: ಕಾವೇರಿ ನೀರಿಗಾಗಿ ಮೇಲ್ಮನವಿ ಸಲ್ಲಿಕೆ: ಸಿಎಂ
ಬೆಂಗಳೂರು: ಬರಗಾಲ ಹಿನ್ನೆಲೆಯಲ್ಲಿ ರಾಜ್ಯದ ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ನೀರಿನ ಭವಣೆ ಉಂಟಾಗಿತ್ತು. ಈ ಸಂಬಂಧ ರಾಜ್ಯ ಸರ್ಕಾರದ ಮನವಿ ಮೇರೆಗೆ ತೆಲಂಗಾಣ ಸರ್ಕಾರವು ಜುರಾಲ ಯೋಜನೆಯಿಂದ 3TMCFT ನೀರನ್ನು ಕರ್ನಾಟಕದ ಕೃಷ್ಣಾ ನದಿಗೆ ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡಿದೆ. ಇತ್ತ ಕಾವೇರಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿರುದ್ಧ ಸಿಎಂ ಡಿಕೆ ಶಿವಕುಮಾರ್ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರ, ಖುದ್ದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡಿದ್ದರು. ಈಗಾಗಳೆ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿದ್ದೇವೆ. ಅಲ್ಲೂ ಸಮಸ್ಯೆ ಆಗಿದ್ದು, ಉತ್ತರ ಕರ್ನಾಟಕ ಭಾಗದಲ್ಲೂ ನೀರಿನ ಬವಣೆ ಉಂಟಾಗಿದೆ. ಆದ್ದರಿಂದ ನೀರು ಬಿಡುಗಡೆಗೆ ಮನವಿ ಮಾಡಿದ್ದರು. ಜೊತೆಗೆ ನೀರಿನ ಭರವಸೆ ಸಹ ಕೊಟ್ಟ ಬಳಿಕ ನಾರಾಯಣಪುರ (ಜುರಾಲ)ದಿಂದ ಕೃಷ್ಣಾ ಜಲಾಶಯಕ್ಕೆ ನೀರು ಬಿಡುಗಡೆ ತೆಲಂಗಾಣ ಒಪ್ಪಿಗೆ ನೀಡುವ ಮೂಲಕ ರಾಜ್ಯದ ಆ ಭಾಗದ ಜಿಲ್ಲೆಗಳ ರೈತರಿಗೆ ಗುಡ್ ನ್ಯೂಸ್ ನೀಡಿದೆ.

ತೆಲಂಗಾಣಕ್ಕೆ ಕರ್ನಾಟಕ ಕೊಟ್ಟ ಭರವಸೆ ಏನು?
ತೆಲಂಗಾಣ ನೀರು ಬಿಡಲು ಪ್ರತಿಯಾಗಿ ಕರ್ನಾಟಕ ಸರ್ಕಾರವು ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿದೆ. ಅಲ್ಲಿಂದ ಅಥವಾ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ (ಆಲಮಟ್ಟಿ/ನಾರಾಯಣಪುರ) ಜುರಾಲ ಯೋಜನೆಗೆ ನೀರು ಹರಿದು ಬರುವಂತೆ ಮಾಡುತ್ತೇವೆ ಎಂದು ನೀರಿನ ಭರವಸೆ ನೀಡಿತು. ಇದಕ್ಕೆ ಒಪ್ಪಿದ ತೆಲಂಗಾಣ ಕರ್ನಾಟಕಕ್ಕೆ ನೀರು ಬಿಡಲು ಒಪ್ಪಿದೆ. ತಮಿಳುನಾಡಿನ ಪದೇ ಪದೇ ಕಾವೇರಿ ಖ್ಯಾತೆ ನಡುವೆ ಕರ್ನಾಟಕ ಹಾಗೂ ತೆಲಂಗಾಣ ಎರಡು ರಾಜ್ಯಗಳ ಮಧ್ಯೆ ನೀರಿನ ಸಾಮರಸ್ಯ, ಒಪ್ಪಂದ ಸಂಬಂಧ, ಹೊಂದಾಣೀಕೆ ಉತ್ತಮ ನಿದರ್ಶನವಾಗಿದೆ.
"ತಮಿಳುನಾಡಿಗೆ ಕಾವೇರಿ ನೀರು: ಕರ್ನಾಟಕದಿಂದ ಮೇಲ್ಮನವಿ: ಡಿಕೆಶಿ
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಹಿನ್ನಡೆ ಆಗಿದೆ. ಎರಡು ಬಾರಿಯು ಹದಿನೈದು ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶಿಸಿತ್ತು. ಅಲ್ಲಿಂದ ತಮಿಳುನಾಡಿಗೆ ತಕ್ಕಮಟ್ಟಿನ ನೀರು ಬಿಡಲಾಗುತ್ತಿದೆ. ಇದೀಗ ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ' ಕಾವೇರಿ ನದಿ ನೀರು ಹಂಚಿಕೆ ಸಂಬಂಧ ರಾಜ್ಯ ಸರ್ಕಾರವು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ" ಎಂದು ತಿಳಿಸಿದರು.
ಚಿತ್ರದುರ್ಗದ ಸಿರಿಗೆರೆ ಮಠದ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾವು ನೀರಿದ್ದರೆ ಬಿಡುತ್ತೇವೆ. ಆದರೆ ನಮಗೂ ಒಳಹರಿವು ನಿಂತುಹೋಗಿದೆ. ಮಳೆ ಕೂಡ ಬರುತ್ತಿಲ್ಲ. ಈ ವಿಚಾರದಲ್ಲಿ ನಮ್ಮ ಮೇಲೆ ಸಾಕಷ್ಟು ಒತ್ತಡವಿದೆ. ನೀರಿನ ಪರಿಸ್ಥಿತಿಯನ್ನು ಪರಿಶೀಲಿಸಿ, ನೀರಾವರಿ ಸಚಿವರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ತಿಳಿಸುತ್ತೇನೆ" ಎಂದು ಹೇಳಿದರು.
ಬರಗಾಲ: ರೈತರ ಹಿತ ಕಾಪಾಡಲಿದೆ ಸರ್ಕಾರ
"ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಯಾವ ರೀತಿಯಲ್ಲಿ ನೆರವು ನೀಡಬೇಕು ಹಾಗೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯಾವ ರೀತಿಯ ಸಹಕಾರ ಅಗತ್ಯವಿದೆ ಎಂಬುದರ ಕುರಿತು ರೂಪುರೇಷೆ ಸಿದ್ಧಪಡಿಸಬೇಕಾಗಿದೆ. ಈ ವಿಚಾರಗಳ ಕುರಿತು ಹಾಗೂ ಸರ್ಕಾರ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಲಿದೆ. ಸರ್ವಪಕ್ಷ ನಿಯೋಗದೊಂದಿಗೆ ಕೇಂದ್ರ ಸರ್ಕಾರದ ಗಮನ ಸೆಳೆಯುವ ವಿಚಾರದಲ್ಲಿ ವಿರೋಧ ಪಕ್ಷದ ನಾಯಕರು ಸಹಕಾರ ನೀಡುತ್ತಿರುವುದಕ್ಕೆ ಅಭಿನಂದನೆ' ತಿಳಿಸಿದರು.
ಕಸ್ತೂರಿ ರಂಗನ್ ವರದಿ ನೀರ್ಣಯ: ವಿಪಕ್ಷದಿಂದ ಸಹಮತ
"ಕಸ್ತೂರಿ ರಂಗನ್ ವರದಿ ಹಾಗೂ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ವಿಚಾರದಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಣಯಕ್ಕೆ ವಿವಿಧ ಪಕ್ಷಗಳ ನಾಯಕರು ಸಹಮತ ವ್ಯಕ್ತಪಡಿಸಿದ್ದಾರೆ. ಸರ್ಕಾರ ರೈತರ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ನಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೇವೆ. ರಾಜ್ಯದ ಜನರು ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ಆ ನಂಬಿಕೆ ಉಳಿಸಿಕೊಂಡು ಜನಹಿತ ಕಾಪಾಡುವ ಕೆಲಸ ಮಾಡುತ್ತಿದ್ದೇವೆ ಎಂದರು.
ಗ್ಯಾರಂಟಿ ಯೋಜನೆಗಳು ಬಡವರ ಪರ
ಗ್ಯಾರಂಟಿ ಯೋಜನೆಗಳ ಪರಿಷ್ಕೃರಣೆ ಪ್ರಶ್ನೆಗೆ ಸಿಎಂ, "ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸಿ, ಸೌಲಭ್ಯಗಳನ್ನು ಬಡವರಿಗೆ ಮಾತ್ರ ನೀಡುವಂತೆ ಬಿಜೆಪಿ ಶಾಸಕ ಸುರೇಶ್ ಗೌಡ ಸೇರಿದಂತೆ ಕೆಲವು ವಿರೋಧ ಪಕ್ಷಗಳ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿವಿಧ ನಾಯಕರಿಗೆ ತಮ್ಮದೇ ಆದ ಅಭಿಪ್ರಾಯಗಳಿವೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಲವು ಕೇಂದ್ರ ಸಚಿವರು ಹಾಗೂ ನಾಯಕರು ಈ ಹಿಂದೆ ಹೇಳಿದ್ದರೂ, ರಾಜ್ಯ ಸರ್ಕಾರ ಮಾತ್ರ ಬಡವರ ಪರವಾಗಿ ನೆರವು ನೀಡುವ ಕಾರ್ಯವನ್ನು ಮುಂದುವರಿಸಲಿದೆ" ಎಂದು ಸ್ಪಷ್ಟಪಡಿಸಿದರು. .
ಕೆಪಿಎಸ್‌ಸಿ ಪರೀಕ್ಷೆ: ಅರ್ಹರಿಗೆ ನ್ಯಾಯ ಸಿಗಬೇಕು
"ಕೆಪಿಎಸ್‌ಸಿ ನೇಮಕಾತಿ ಹಾಗೂ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕಾನೂನು ಚೌಕಟ್ಟನ್ನು ಪರಿಶೀಲಿಸಲಾಗುವುದು. ಪರೀಕ್ಷೆ ನಡೆಸುವ ಅಧಿಕಾರಿಗಳು ಹಾಗೂ ಸದಸ್ಯರು ಯಾವುದೇ ಒತ್ತಡಕ್ಕೆ ಒಳಗಾಗದೆ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದು ಮುಖ್ಯ. ಒತ್ತಡಗಳನ್ನು ಮೀರಿ ಸ್ಪರ್ಧಾತ್ಮಕವಾಗಿ ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸಿರುವವರಿಗೆ ನ್ಯಾಯ ಸಿಗಬೇಕು. ಪರೀಕ್ಷೆ ಮತ್ತು ಸಂದರ್ಶನವನ್ನು ಪರಿಶುದ್ಧವಾಗಿ ನಡೆಸುವುದು ಸಂಬಂಧಪಟ್ಟವರ ಜವಾಬ್ದಾರಿ. ಹಿಂದೆ ನಡೆದಿರುವ ಹಲವು ಘಟನೆಗಳ ಹಿನ್ನೆಲೆಯಲ್ಲಿ ಈ ಬಗ್ಗೆ ಕೆಲವರು ಸಲಹೆಗಳನ್ನು ನೀಡಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಎಲ್ಲವನ್ನೂ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು' ಎಂದು


Click it and Unblock the Notifications
