Industry: ರಾಜ್ಯದ ಈ ಜಿಲ್ಲೆಯಲ್ಲಿ ₹315 ಕೋಟಿ ಹೂಡಿಕೆ ಯೋಜನೆಗೆ ಭೂಮಿಪೂಜೆ, 550 ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್
ಕೋಲಾರ, ಫೆಬ್ರವರಿ 20: ಕೋಲಾರ ಜಿಲ್ಲೆಯ ವ್ಯಾಪ್ತಿಯಲ್ಲಿ ಜರ್ಮನಿ ಮೂಲದ ಪ್ರತಿಷ್ಠಿತ ಕ್ರೋನ್ಸ್ ಕಂಪನಿಯು ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ₹315 ಕೋಟಿ ವೆಚ್ಚ ಹೂಡಿಕೆ ಮಾಡುತ್ತಿದೆ. ಇಲ್ಲಿ ನಿರ್ಮಿಸಲಿರುವ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ತಲೆ ಎತ್ತಲಿದೆ. ಈ ಯೋಜನೆ ಸಾಕಾರಕ್ಕೆ, ಕಾಮಗಾರಿ ಶುರುವಿಗೆ ಗುರುವಾರ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಗುರುವಾರ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಅಗತ್ಯಗಳಿಗೆ ಬೇಕಾಗುವ ಬಾಟ್ಲಿಂಗ್ ಮತ್ತು ಶುದ್ಧೀಕರಣ ಸಾಧನಗಳ ತಯಾರಿಕೆಗೆ ದೇಶದಲ್ಲಿ ಅಪಾರ ಬೇಡಿಕೆ ಇದೆ. ಇದನ್ನು ಮನಗಂಡು ಕ್ರೋನ್ಸ್, ರಾಜ್ಯದಲ್ಲಿ ಈ ಸ್ಥಾವರ ಆರಂಭಿಸಲು ಮುಂದಾಗಿದೆ. ಇದರಿಂದ ಬಂಡವಾಳ ಹೂಡಿಕೆಯ ಜತೆಗೆ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯೂ ಆಗಲಿದೆ. ವೇಮಗಲ್ ಕೈಗಾರಿಕಾ ಪ್ರದೇಶವು ಬೆಂಗಳೂರಿಗೆ ಕೂಡ ಹತ್ತಿರದಲ್ಲಿ ಇರುವುದರಿಂದ ಮತ್ತಷ್ಟು ಅನುಕೂಲವಾಗಲಿದೆ ಎಂದಿದ್ದಾರೆ.

ತಾವು ಮೂರು ತಿಂಗಳ ಹಿಂದೆ ಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಜರ್ಮನಿಯಲ್ಲಿ ರೋಡ್-ಶೋ ನಡೆಸಿದಾಗ, ಅಲ್ಲಿ ಕ್ರೋನ್ಸ್ ಕಂಪನಿಯ ಕೇಂದ್ರ ಕಚೇರಿಗೆ ಭೇಟಿ ನೀಡಿ, ವ್ಯವಸ್ಥೆಯನ್ನು ವೀಕ್ಷಿಸಿದ್ದೆ. ಪ್ರಿಸಿಷನ್ ಎಂಜಿನಿಯರಿಂಗ್ ಮತ್ತು ನಾವೀನ್ಯತೆಗಳಿಗೆ ಹೆಸರು ಮಾಡಿರುವ ಕಂಪನಿಯು ಭಾರತದಲ್ಲಿನ ತನ್ನ ನೂತನ ಉತ್ಪಾದನಾ ಸ್ಥಾವರವನ್ನು ಆರಂಭಿಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.
ಜರ್ಮನಿಯಲ್ಲಿ ಏನಿದೆಯೋ ಅವೆಲ್ಲವೂ ನಮ್ಮಲ್ಲೂ ಬರಬೇಕು. ಇದಕ್ಕಾಗಿ ಸರ್ಕಾರ ಎಲ್ಲ ಬೆಂಬಲವನ್ನೂ ಕೊಡಲು ಬದ್ಧವಾಗಿದೆ ಎಂದು ಹೇಳಿದ್ದೇವೆ. ಆ ಪ್ರಕಾರ ಇವತ್ತು ಈ ಸಂಸ್ಥೆ ನಿರ್ಮಾಣಕ್ಕೆ ನಾಂದಿಯಾಗಿದೆ ಎಂದು ಅವರು ಹೇಳಿದರು.

ಅಧಿಕ ಹೂಡಿಕೆ, ನೂರಾರು ಉದ್ಯೋಗ ಸೃಷ್ಟಿ
ಈ 315 ಕೋಟಿ ರೂಪಾಯಿ ಹಣ ಹಂತ ಹಂತವಾಗಿ ಹೂಡಿಕೆ ಆಗಲಿದೆ. ಇದರಿಂದ 550 ಮಂದಿಗೆ ಉದ್ಯೋಗ ಸಿಗಲಿದೆ. ನಿಮಿಷಕ್ಕೆ ನೂರಾರು ಬಾಟಲಿ ಉತ್ಪಾದಿಸುವ ಯಂತ್ರಗಳನ್ನು ಇಲ್ಲಿ ಉತ್ಪಾದಿಸಲಾಗುತ್ತದೆ. ಸ್ಥಳೀಯ ಹಾಗೂ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ನೀಡಬೇಕೆಂದೂ ಸಚಿವರು ಕ್ರೋನ್ಸ್ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು. ಇದನ್ನು ಆದ್ಯತೆ ಮೇಲೆ ಮಾಡಬೇಕು ಎಂದೂ ಅವರು ಕೋರಿದರು.
ವೇಮಗಲ್ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಆದ್ಯತೆ, ನೀಡಲಾಗುವುದು. ಕರ್ನಾಟಕವನ್ನು ಉತ್ಪಾದನಾ ವಲಯದಲ್ಲಿ ಯಾವ ರೀತಿ ಅಭಿವೃದ್ಧಿ ಮಾಡಬೇಕು ಎಂಬುದರ ಬಗ್ಗೆಯೂ ಸದ್ಯದಲ್ಲೇ ಪರಿಣಿತರ ಚರ್ಚೆ ಕೂಡ ಮಾಡಲಾಗುವುದು ಎಂದು ತಿಳಿಸಿದರು. ಇದರೊಂದಿಗೆ CSR ಹಣ ಕೂಡ ಸ್ಥಳೀಯರ ಅಭಿವೃದ್ಧಿಗೆ ಬಳಸುವಂತೆ ಸಚಿವರು ಸಂಬಂಧಪಟ್ಟ ಕಂಪೆನಿಯ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಕೈಗಾರಿಕೆ ಯೋಜನೆ ಅನುಮೋದನೆಗೆ ನೀತಿ
ನಮ್ಮಲ್ಲಿ ನೂತನ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗಿದೆ. ಉದ್ದಿಮೆಗಳಿಗೆ ಬಂಡವಾಳದ ಮೇಲೆ ಸಹಾಯಧನ ಅಥವಾ ಉತ್ಪಾದನೆಗೆ ತಕ್ಕ ಪ್ರೋತ್ಸಾಹನ ಭತ್ಯೆ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶ ಕೊಡಲಾಗಿದೆ. ಜೊತೆಗೆ ಅಗತ್ಯ ಅನುಮೋದನೆಗಳನ್ನು ತ್ವರಿತ ಗತಿಯಲ್ಲಿ ನೀಡಲು ಪರಿಷ್ಕೃತ ಏಕಗವಾಕ್ಷಿ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ಜಾರಿಗೆ ತರಲಾಗಿದೆ.
ಕ್ರೋನ್ಸ್ ಕಂಪನಿಯು ನಮ್ಮಲ್ಲಿ ಮುಂಬರುವ ದಿನಗಳಲ್ಲಿ ಅಪಾರ ಹೂಡಿಕೆ ಮಾಡುವ ನಿರೀಕ್ಷೆ ಇದೆ. ಈ ಕಂಪನಿಯು ಆಹಾರ ಮತ್ತು ಪಾನೀಯ ಕ್ಷೇತ್ರಗಳಲ್ಲಿ ಕಳೆದ 23 ವರ್ಷಗಳಿಂದಲೂ ಭಾರತದಲ್ಲಿ ನಲೆ ಹೊಂದಿದೆ. ಕಂಪನಿಯ ಡಿಜಿಟಲ್ ವಿಭಾಗದ ಕೇಂದ್ರ ಕಚೇರಿಯು ಬೆಂಗಳೂರಿನಲ್ಲೇ ಇದೆ.
ರಾಜ್ಯದ ಆರ್ಥಿಕ ಬೆಳವಣಿಗೆಗೆ ಕೊಡುಗೆ
ಇದು ಕಂಪನಿಯ ಸಾಫ್ಟ್ವೇರ್ ಅಭಿವೃದ್ಧಿ, ಐಟಿ ಭದ್ರತೆ ಮತ್ತು ಡಿಜಿಟಲ್ ಪರಿಹಾರಗಳಿಗೆ ಬಲ ತುಂಬಿದೆ. ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಉತ್ಪಾದನಾ ಘಟಕವು ಭಾರತದಲ್ಲಿ ಕಂಪನಿಯ ಸ್ಥಾನಮಾನಗಳನ್ನು ಮತ್ತಷ್ಟು ಬಲಪಡಿಸಿ, ರಾಜ್ಯದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕ್ರೋನ್ಸ್ ಆಡಳಿತ ಮಂಡಳಿ ನಿರ್ದೇಶಕರಾದ ರೊಲ್ಫ್ಸ್ ಗೋಲ್ಡ್ ಬ್ರೋನರ್, ಮಾರ್ಕಸ್ ವಿಂಟರ್, ಯೋಜನಾ ನಿರ್ದೇಶಕ ಡೇವಿಡ್ ಕ್ರಿಮ್ಮರ್, ಕ್ರೋನ್ಸ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಹರೀಶ ಹನುಗೋಡು, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ, ಕೆಐಎಡಿಬಿ ಸಿಇಒ ಡಾ.ಮಹೇಶ ಅವರು ಭೂಮಿಯಲ್ಲಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications