Heavy Rain: ರಾಜ್ಯದ ಹಲವೆಡೆ ಭಾರಿ ಮಳೆ; ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ರಾಜ್ಯದ ಹಲವು ಕಡೆಗಳಲ್ಲಿ ಮಳೆ ಚುರುಕು ಪಡೆದುಕೊಳ್ಳುತ್ತಿದೆ. ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರ ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮೈಸೂರು, ಕೋಲಾರ, ಚಿತ್ರದುರ್ಗ, ಕೊಡಗು, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದೆ. ಯಾದಗಿರಿ, ಬೆಳಗಾವಿ, ಹಾವೇರಿ, ಬೀದರ್ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಮಳೆಯಾಗುತ್ತಿದ್ದರೂ ನದಿಗಳು ಹರಿಯುವಂತೆ ಮಳೆಯಾಗದ ಕಾರಣ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದರೆ ಮಾತ್ರ ಜಲಾಶಯಗಳಿಗೆ ನೀರುವ ಬರುವ ಸಾಧ್ಯತೆ ಇದೆ. ರಾಜ್ಯದ ಜಲಾಶಯಗಳ ಒಟ್ಟು ಗರಿಷ್ಠ ಸಂಗ್ರಹ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು ಮೇ 2ರಂದು 291.97 ಟಿಎಂಸಿ ನೀರು ಸಂಗ್ರಹದಲ್ಲಿದೆ.
ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 539.97 ಮೀಟರ್ / 41.87 ಟಿಎಂಸಿ
ಒಳಹರಿವು: 0
ಹೊರಹರಿವು: 6244 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 535.37 ಮೀಟರ್ / 51.18 ಟಿಎಂಸಿ
ಒಳಹರಿವು: 0
ಹೊರಹರಿವು: 6461 ಕ್ಯೂಸೆಕ್ಸ್
ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 579.72 ಮೀಟರ್ / 9.60 ಟಿಎಂಸಿ
ಒಳಹರಿವು: 0
ಹೊರಹರಿವು: 678 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2859.00 ಅಡಿ / 8.50 ಟಿಎಂಸಿ
ಇಂದಿನ ನೀರಿನ ಮಟ್ಟ: 2831.90 ಅಡಿ / 3.44 ಟಿಎಂಸಿ
ಒಳಹರಿವು: 115 ಕ್ಯೂಸೆಕ್ಸ್
ಹೊರಹರಿವು: 100 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2898.95 ಅಡಿ / 19.26 ಟಿಎಂಸಿ
ಒಳಹರಿವು: 66 ಕ್ಯೂಸೆಕ್ಸ್
ಹೊರಹರಿವು: 320 ಕ್ಯೂಸೆಕ್ಸ್
ಕೆಆರ್ ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ: 124.80 ಅಡಿ / 49.45ಟಿಎಂಸಿ
ಇಂದಿನ ನೀರಿನ ಮಟ್ಟ: 95.89 ಅಡಿ / 20.51 ಟಿಎಂಸಿ
ಒಳಹರಿವು: 151 ಕ್ಯೂಸೆಕ್ಸ್
ಹೊರಹರಿವು: 1643 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2264.28 ಅಡಿ / 9.05 ಟಿಎಂಸಿ
ಒಳಹರಿವು: 379 ಕ್ಯೂಸೆಕ್ಸ್
ಹೊರಹರಿವು: 800 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2115.45 ಅಡಿ / 29.32 ಟಿಎಂಸಿ
ಒಳಹರಿವು: 129 ಕ್ಯೂಸೆಕ್ಸ್
ಹೊರಹರಿವು: 3613 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1584.24 ಅಡಿ / 6.84 ಟಿಎಂಸಿ
ಒಳಹರಿವು: 368 ಕ್ಯೂಸೆಕ್ಸ್
ಹೊರಹರಿವು: 327 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2120.13 ಅಡಿ / 17.26 ಟಿಎಂಸಿ
ಒಳಹರಿವು: 0
ಹೊರಹರಿವು: 172 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2055.06 ಅಡಿ / 12.88 ಟಿಎಂಸಿ
ಒಳಹರಿವು: 0
ಹೊರಹರಿವು: 194 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 508.91 ಮೀಟರ್ / 25.11 ಟಿಎಂಸಿ
ಒಳಹರಿವು: 25 ಕ್ಯೂಸೆಕ್ಸ್
ಹೊರಹರಿವು: 878 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 488.45 ಮೀಟರ್ / 18.79 ಟಿಎಂಸಿ
ಒಳಹರಿವು: 0
ಹೊರಹರಿವು: 0
ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2136.85 ಅಡಿ / 27.78 ಟಿಎಂಸಿ
ಒಳಹರಿವು: 0 ಕ್ಯೂಸೆಕ್ಸ್
ಹೊರಹರಿವು: 145 ಕ್ಯೂಸೆಕ್ಸ್












Click it and Unblock the Notifications