KRS Dam: ಬೇಸಿಗೆಯಲ್ಲೂ ಮಳೆ! ರಾಜ್ಯದ ಜಲಾಶಯಗಳಲ್ಲಿ ಎಷ್ಟಿದೆ ನೀರು?

ರಾಜ್ಯದಲ್ಲಿ ಬೇಸಿಗೆ ಕಾಲ ಆರಂಭವಾಗಿದೆ. ಬೇಸಿಗೆಯಲ್ಲೂ ರಾಜ್ಯದ ಹಲವು ಕಡೆಗಳಲ್ಲಿ ಈಗಾಗಲೇ ಮೊದಲ ಮಳೆಯ ದರ್ಶನವಾಗಿದ್ದು ಈ ಬಾರಿ ಪೂರ್ವ ಮುಂಗಾರು ಜೋರಾಗಿರಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಮಾರ್ಚ್ ಮೂರು ಮತ್ತು ನಾಲ್ಕನೇ ವಾರದಲ್ಲಿ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ಕೊಟ್ಟಿದೆ.

ಮಳೆಯ ಮುನ್ಸೂಚನೆ ಇದ್ದರೂ, ರಾಜ್ಯದಲ್ಲಿ ತಾಪಮಾನ ದಿನದಿಂದ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲೂ ಕೂಡ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದ್ದರೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೂಡ ತಾಪಮಾನ ಹೆಚ್ಚಾಗಿದ್ದು ಜನ ಹೈರಾಣಾಗಿದ್ದಾರೆ.

Krs almatti hemavathi and karnataka dam water details

ರಾಜ್ಯದಲ್ಲಿ ಈ ಬಾರಿ ಉತ್ತಮ ಮುಂಗಾರು

ರಾಜ್ಯದಲ್ಲಿ ಈ ಬಾರಿ ಮುಂಗಾರು ವಾಡಿಕೆಯಂತೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆಗಲಿದ್ದು ಮಾರ್ಚ್ ಕೊನೆಯ ವಾರದಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್, ಮೇ, ಜೂನ್ ತಿಂಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಹಿಂಗಾರು ದುರ್ಬಲವಾಗಿರಲಿದೆ ಎಂದು ಹೇಳಿದೆ.

ಎಲ್‌ ನಿನೋ ಪ್ರಭಾವ ಕಡಿಮೆಯಾಗಿ ಲಾ ನಿನಾ ರೂಪುಗೊಳ್ಳುತ್ತಿರುವ ಕಾರಣ ಈ ಬಾರಿ ಉತ್ತಮ ಮಳೆಯನ್ನು ನಿರೀಕ್ಷೆ ಮಾಡಬಹುದು. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಿಗೆ ಬೇಸಿಗೆಯಲ್ಲೇ ಮಳೆಯ ದರ್ಶನವಾಗಿದೆ. ಗುರುವಾರ ಕೂಡ ರಾಜ್ಯದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

ಬೇಸಿಗೆ ಆರಂಭವಾದ ಬಳಿಕ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದೆ. ಆದರೂ ಈ ಬಾರಿ ಬೇಸಿಗೆಯಲ್ಲಿ ನೀರಿನ ಅಭಾವ ಇರುವುದಿಲ್ಲ ಎಂದು ನಿರೀಕ್ಷೆ ಮಾಡಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಗರಿಷ್ಠ ಸಂಗ್ರಹ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು ಮಾರ್ಚ್ 14ರಂದು 441.40 ಟಿಎಂಸಿ ನೀರು ಸಂಗ್ರಹದಲ್ಲಿದೆ. ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಎನ್ನುವ ಡಿಟೈಲ್ಸ್ ಇಲ್ಲಿದೆ ನೋಡಿ.

ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 545.59 ಮೀಟರ್ / 71.73 ಟಿಎಂಸಿ
ಒಳಹರಿವು: 683 ಕ್ಯೂಸೆಕ್ಸ್
ಹೊರಹರಿವು: 7127 ಕ್ಯೂಸೆಕ್ಸ್

ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 545.59 ಮೀಟರ್ / 77.53 ಟಿಎಂಸಿ
ಒಳಹರಿವು: 0
ಹೊರಹರಿವು: 5614 ಕ್ಯೂಸೆಕ್ಸ್

ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 584.78 ಮೀಟರ್ / 15.41 ಟಿಎಂಸಿ
ಒಳಹರಿವು: 0
ಹೊರಹರಿವು: 1324 ಕ್ಯೂಸೆಕ್ಸ್

ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2859.00 ಅಡಿ / 8.50 ಟಿಎಂಸಿ
ಇಂದಿನ ನೀರಿನ ಮಟ್ಟ: 2834.76 ಅಡಿ / 3.62 ಟಿಎಂಸಿ
ಒಳಹರಿವು: 96 ಕ್ಯೂಸೆಕ್ಸ್
ಹೊರಹರಿವು: 100 ಕ್ಯೂಸೆಕ್ಸ್

ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2900.88 ಅಡಿ / 20.27 ಟಿಎಂಸಿ
ಒಳಹರಿವು: 87 ಕ್ಯೂಸೆಕ್ಸ್
ಹೊರಹರಿವು: 475 ಕ್ಯೂಸೆಕ್ಸ್

ಕೆಆರ್ ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ: 124.80 ಅಡಿ / 49.45ಟಿಎಂಸಿ
ಇಂದಿನ ನೀರಿನ ಮಟ್ಟ: 110.62 ಅಡಿ / 32.35 ಟಿಎಂಸಿ
ಒಳಹರಿವು: 196 ಕ್ಯೂಸೆಕ್ಸ್
ಹೊರಹರಿವು: 3811 ಕ್ಯೂಸೆಕ್ಸ್

ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2271.73 ಅಡಿ / 12.54 ಟಿಎಂಸಿ
ಒಳಹರಿವು: 90 ಕ್ಯೂಸೆಕ್ಸ್
ಹೊರಹರಿವು: 1500 ಕ್ಯೂಸೆಕ್ಸ್

ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2136.50 ಅಡಿ / 47.23 ಟಿಎಂಸಿ
ಒಳಹರಿವು: 96 ಕ್ಯೂಸೆಕ್ಸ್
ಹೊರಹರಿವು: 3684 ಕ್ಯೂಸೆಕ್ಸ್

ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1600.46 ಅಡಿ / 22.12 ಟಿಎಂಸಿ
ಒಳಹರಿವು: 0
ಹೊರಹರಿವು: 9033 ಕ್ಯೂಸೆಕ್ಸ್

ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2138.13 ಅಡಿ / 26.01 ಟಿಎಂಸಿ
ಒಳಹರಿವು: 0
ಹೊರಹರಿವು: 106 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2059.06 ಅಡಿ / 15.83 ಟಿಎಂಸಿ
ಒಳಹರಿವು: 0
ಹೊರಹರಿವು: 194 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 512.27 ಮೀಟರ್ / 42.80 ಟಿಎಂಸಿ
ಒಳಹರಿವು: 0
ಹೊರಹರಿವು: 1122 ಕ್ಯೂಸೆಕ್ಸ್

ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 490.36 ಮೀಟರ್ / 25.46 ಟಿಎಂಸಿ
ಒಳಹರಿವು: 283 ಕ್ಯೂಸೆಕ್ಸ್
ಹೊರಹರಿವು: 283 ಕ್ಯೂಸೆಕ್ಸ್

ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2137.70 ಅಡಿ / 28.49 ಟಿಎಂಸಿ
ಒಳಹರಿವು: 0 ಕ್ಯೂಸೆಕ್ಸ್
ಹೊರಹರಿವು: 705 ಕ್ಯೂಸೆಕ್ಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+