KRS Dam: ರಾಜ್ಯದಲ್ಲಿ ಬೇಸಿಗೆ ಆರಂಭ; ಪ್ರಮುಖ ಜಲಾಶಯಗಳಲ್ಲಿ ಎಷ್ಟಿದೆ ನೀರು?
ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಕರಾವಳಿ ಭಾಗಕ್ಕೆ ಶಾಖದ ಅಲೆ ಎಚ್ಚರಿಕೆ ನೀಡಿದ್ದು ಬಿಸಿಲಿನ ಝಳ ಆರಂಭದಲ್ಲೇ ತೀವ್ರವಾಗಿದೆ. ಯುಗಾದಿ ವೇಳೆಗೆ ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮತ್ತಷ್ಟು ಹೆಚ್ಚಲಿದೆ. ಫೆಬ್ರವರಿಯಲ್ಲೇ ವಾಡಿಕೆಗಿಂತ ತಾಪಮಾನ ಹೆಚ್ಚಾಗಿದ್ದು ಆತಂಕ ಮೂಡಿಸಿದೆ. ಕಳೆದ ವರ್ಷ ಉತ್ತಮವಾಗಿ ಮಳೆಯಾಗಿದ್ದರಿಂದ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು, ಈ ಬಾರಿ ಬೇಸಿಗೆಯಲ್ಲಿ ನೀರಿನ ಅಭಾವ ಕಾಡುವುದಿಲ್ಲ ಎಂದು ಅಂದಾಜು ಮಾಡಲಾಗಿತ್ತು.
ಡಿಸೆಂಬರ್ ಕೊನೆಯ ವಾರದವರೆಗೂ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದರಿಂದ ಜಲಾಶಯಗಳ ನೀರಿನ ಮಟ್ಟ ಕಾಪಾಡಿಕೊಳ್ಳಲು ಸಹಕಾರಿಯಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಬೇಸಿಗೆ ಆರಂಭಕ್ಕೆ ಮುನ್ನ ಜಲಾಶಯಗಳಲ್ಲಿ ಹೆಚ್ಚಿನ ಮಟ್ಟದ ನೀರು ಸಂಗ್ರಹವಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಗರಿಷ್ಠ ಸಂಗ್ರಹ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು ಫೆ. 28ರಂದು 491.18 ಟಿಎಂಸಿ ನೀರು ಸಂಗ್ರಹದಲ್ಲಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿ ಇಲ್ಲಿದೆ.
ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 546.63 ಮೀಟರ್ / 80.76 ಟಿಎಂಸಿ
ಒಳಹರಿವು: 0
ಹೊರಹರಿವು: 5354 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 548.37 ಮೀಟರ್ / 86.15 ಟಿಎಂಸಿ
ಒಳಹರಿವು: 0
ಹೊರಹರಿವು: 7468 ಕ್ಯೂಸೆಕ್ಸ್
ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 586.51 ಮೀಟರ್ / 17.83 ಟಿಎಂಸಿ
ಒಳಹರಿವು: 0
ಹೊರಹರಿವು: 1654 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2859.00 ಅಡಿ / 8.50 ಟಿಎಂಸಿ
ಇಂದಿನ ನೀರಿನ ಮಟ್ಟ: 2836.89 ಅಡಿ / 3.843 ಟಿಎಂಸಿ
ಒಳಹರಿವು: 106 ಕ್ಯೂಸೆಕ್ಸ್
ಹೊರಹರಿವು: 100 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2901.66 ಅಡಿ / 20.788 ಟಿಎಂಸಿ
ಒಳಹರಿವು: 142 ಕ್ಯೂಸೆಕ್ಸ್
ಹೊರಹರಿವು: 380 ಕ್ಯೂಸೆಕ್ಸ್
ಕೆಆರ್ ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ: 124.80 ಅಡಿ / 49.45ಟಿಎಂಸಿ
ಇಂದಿನ ನೀರಿನ ಮಟ್ಟ: 113.06 ಅಡಿ / 34.911 ಟಿಎಂಸಿ
ಒಳಹರಿವು: 255 ಕ್ಯೂಸೆಕ್ಸ್
ಹೊರಹರಿವು: 3767 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2275.09 ಅಡಿ / 14.324 ಟಿಎಂಸಿ
ಒಳಹರಿವು: 95 ಕ್ಯೂಸೆಕ್ಸ್
ಹೊರಹರಿವು: 900 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2140.66 ಅಡಿ / 51.48 ಟಿಎಂಸಿ
ಒಳಹರಿವು: 56 ಕ್ಯೂಸೆಕ್ಸ್
ಹೊರಹರಿವು: 3575 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1607.62 ಅಡಿ / 33.12 ಟಿಎಂಸಿ
ಒಳಹರಿವು: 0
ಹೊರಹರಿವು: 7363 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2138.36 ಅಡಿ / 26.14 ಟಿಎಂಸಿ
ಒಳಹರಿವು: 0
ಹೊರಹರಿವು: 99 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2060.57 ಅಡಿ / 17.03 ಟಿಎಂಸಿ
ಒಳಹರಿವು: 0
ಹೊರಹರಿವು: 2241 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 513.24 ಮೀಟರ್ / 49.33 ಟಿಎಂಸಿ
ಒಳಹರಿವು: 0
ಹೊರಹರಿವು: 13067 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 490.55 ಮೀಟರ್ / 18.282 ಟಿಎಂಸಿ
ಒಳಹರಿವು: 10343 ಕ್ಯೂಸೆಕ್ಸ್
ಹೊರಹರಿವು: 12135 ಕ್ಯೂಸೆಕ್ಸ್
ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2138.60 ಅಡಿ / 29.28 ಟಿಎಂಸಿ
ಒಳಹರಿವು: 0 ಕ್ಯೂಸೆಕ್ಸ್
ಹೊರಹರಿವು: 695 ಕ್ಯೂಸೆಕ್ಸ್












Click it and Unblock the Notifications