KRS Dam: ಬೇಸಿಗೆ ಆರಂಭಕ್ಕೆ ಮುನ್ನ ರಾಜ್ಯದ ಜಲಾಶಯಗಳಲ್ಲಿ ಎಷ್ಟಿದೆ ನೀರು?
ಜನವರಿ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುತ್ತಿದ್ದು ದಿನದಿಂದ ದಿನಕ್ಕೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ನೀರಿನ ಅಗತ್ಯ ಹೆಚ್ಚಲಿದೆ. 2024ರಲ್ಲಿ ಉತ್ತಮ ಮಳೆಯಾದ ಕಾರಣ ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದವು. ಈ ಬಾರಿ ನೀರಿನ ವಿವಾದ ತಣ್ಣಗಾಗಲಿದೆ ಎಂದೇ ಹೇಳಲಾಗಿದೆ.
ಡಿಸೆಂಬರ್ ಕೊನೆಯವರೆಗೂ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದು, ಜಲಾಶಯಗಳ ನೀರಿನ ಮಟ್ಟ ಕಾಪಾಡಿಕೊಳ್ಳಲು ಸಹಕಾರಿಯಾಗಿತ್ತು. ಕೆಆರ್ ಎಸ್ ಜಲಾಶಯದಲ್ಲಿ ಈ ವರ್ಷ ದಾಖಲೆ ಮಟ್ಟದಲ್ಲಿ ಗರಿಷ್ಠ ನೀರಿನ ಸಂಗ್ರಹವಾಗಿತ್ತು.

ಈಗ ಎಲ್ಲಾ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದೆ. ಆದರೂ ಬೇಸಿಗೆಯಲ್ಲಿ ನೀರಿನ ಕೊರತೆಯಾಗುವ ಸಾಧ್ಯತೆ ಕಡಿಮೆಯಿದೆ. ಆದರೂ ನೀರನ್ನು ಜವಾಬ್ದಾರಿಯುತವಾಗಿ ಬಳಕೆ ಮಾಡಿದರೆ ಮಾತ್ರ ಕೊರತೆಯನ್ನು ತಪ್ಪಿಸಬಹುದು.
ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 552.24 ಮೀಟರ್ / 99.21 ಟಿಎಂಸಿ
ಒಳಹರಿವು: 0
ಹೊರಹರಿವು: 7084 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 548.38 ಮೀಟರ್ / 94.11 ಟಿಎಂಸಿ
ಒಳಹರಿವು: 490 ಕ್ಯೂಸೆಕ್ಸ್
ಹೊರಹರಿವು: 7392 ಕ್ಯೂಸೆಕ್ಸ್
ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 588.44 ಮೀಟರ್ / 20.70 ಟಿಎಂಸಿ
ಒಳಹರಿವು: 0
ಹೊರಹರಿವು: 7084 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2902.50 ಅಡಿ / 21.355 ಟಿಎಂಸಿ
ಒಳಹರಿವು: 59 ಕ್ಯೂಸೆಕ್ಸ್
ಹೊರಹರಿವು: 356 ಕ್ಯೂಸೆಕ್ಸ್
ಕೆಆರ್ ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ: 124.80 ಅಡಿ / 49.45ಟಿಎಂಸಿ
ಇಂದಿನ ನೀರಿನ ಮಟ್ಟ: 119.08 ಅಡಿ / 41.890 ಟಿಎಂಸಿ
ಒಳಹರಿವು: 409 ಕ್ಯೂಸೆಕ್ಸ್
ಹೊರಹರಿವು: 1683 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2278.77 ಅಡಿ / 16.347 ಟಿಎಂಸಿ
ಒಳಹರಿವು: 61 ಕ್ಯೂಸೆಕ್ಸ್
ಹೊರಹರಿವು: 500 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2147.04 ಅಡಿ / 58.43 ಟಿಎಂಸಿ
ಒಳಹರಿವು: 160 ಕ್ಯೂಸೆಕ್ಸ್
ಹೊರಹರಿವು: 3719 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1615.25 ಅಡಿ / 49.01 ಟಿಎಂಸಿ
ಒಳಹರಿವು: 0
ಹೊರಹರಿವು: 10149 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2151.90 ಅಡಿ / 34.12 ಟಿಎಂಸಿ
ಒಳಹರಿವು: 0
ಹೊರಹರಿವು: 2824 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2066.43 ಅಡಿ / 22.25 ಟಿಎಂಸಿ
ಒಳಹರಿವು: 0
ಹೊರಹರಿವು: 2241 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 515.12 ಮೀಟರ್ / 74.50 ಟಿಎಂಸಿ
ಒಳಹರಿವು: 0
ಹೊರಹರಿವು: 16470 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 491.27 ಮೀಟರ್ / 29.07 ಟಿಎಂಸಿ
ಒಳಹರಿವು: 11485 ಕ್ಯೂಸೆಕ್ಸ್
ಹೊರಹರಿವು: 11485 ಕ್ಯೂಸೆಕ್ಸ್
ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2140 ಅಡಿ / 30.42 ಟಿಎಂಸಿ
ಒಳಹರಿವು: 0 ಕ್ಯೂಸೆಕ್ಸ್
ಹೊರಹರಿವು: 145 ಕ್ಯೂಸೆಕ್ಸ್












Click it and Unblock the Notifications