KRS Dam Water Level: 6 ವರ್ಷದಲ್ಲಿ ಕೆಆರ್‌ಎಸ್ ಕನಿಷ್ಠ ಸಂಗ್ರಹ - 80 ಅಡಿಗೆ ಕುಸಿದು ಅಣೆಕಟ್ಟೆಯ ನೀರಿನ ಮಟ್ಟ
ಮಂಡ್ಯ, ಮೇ 19: ಕಳೆದ ಆರು ವರ್ಷಕ್ಕೆ ಹೋಲಿಸಿದರೆ ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಹಾಲಿ ಜಲಾಶಯದಲ್ಲಿ 80.25 ಅಡಿಯಷ್ಟು ನೀರು ಮಾತ್ರ ಸಂಗ್ರಹವಾಗಿದೆ. 2019ರಲ್ಲಿ ಇದೇ ದಿನ ಜಲಾಶಯದಲ್ಲಿ 81.88 ಅಡಿ ನೀರು ಸಂಗ್ರಹವಾಗಿತ್ತು.
ಹಿಂದಿನ ವರ್ಷ ನಿರೀಕ್ಷೆಯಂತೆ ಮುಂಗಾರು ಮಳೆಯಾಗದ ಕಾರಣ ಜಲಾಶಯ ಭರ್ತಿಯಾಗಲಿಲ್ಲ. ಮಳೆ ಕೊರತೆಯಿಂದ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 114 ಅಡಿ ತಲುಪುವುದಕ್ಕಷ್ಟೇ ಶಕ್ತವಾಯಿತು. ಸುಪ್ರೀಂಕೋರ್ಟ್, ಪ್ರಾಧಿಕಾರಗಳ ಆದೇಶಗಳಂತೆ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸಿದ್ದರಿಂದ ಜಲಾಶಯದಲ್ಲಿ ನೀರನ್ನು ಉಳಿಸಿಕೊಳ್ಳಲು ಕಷ್ಟಪಡುವಂತಾಯಿತು.

ಪ್ರಸ್ತುತ ಕೆಆರ್‌ಎಸ್ ಜಲಾಶಯದಲ್ಲಿ 80.25 ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಅಣೆಕಟ್ಟೆಗೆ 1560 ಕ್ಯುಸೆಕ್‌ನಷ್ಟು ಒಳಹರಿವಿದ್ದರೆ 155 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 18 ಮೇ 2023ರಲ್ಲಿ 86.14 ಅಡಿ ನೀರಿದ್ದರೆ, 684 ಕ್ಯುಸೆಕ್ ಒಳಹರಿವು, 181 ಕ್ಯುಸೆಕ್ ಹೊರಹರಿವಿತ್ತು. 18 ಮೇ 2022ರಲ್ಲಿ ಅಣೆಕಟ್ಟೆಯಲ್ಲಿ 100.16 ಅಡಿ ನೀರು ಸಂಗ್ರಹವಾಗಿ ರೈತರು ಮತ್ತು ಸಾರ್ವಜನಿಕರಲ್ಲಿ ನಿರಾಳಭಾವ ಮೂಡಿಸಿತ್ತು. ಅಂದು ಜಲಾಶಯಕ್ಕೆ 2825 ಕ್ಯೂಸೆಕ್ ಒಳಹರಿವು, 1437 ಕ್ಯೂಸೆಕ್ ಹೊರಹರಿವಿತ್ತು.
18 ಮೇ 2021ರಲ್ಲಿ ಅಣೆಕಟ್ಟೆಯಲ್ಲಿ 87 ಅಡಿಯಷ್ಟು ನೀರಿದ್ದರೆ 675 ಕ್ಯೂಸೆಕ್ ಒಳಹರಿವು, 3743 ಕ್ಯೂಸೆಕ್ ಹೊರಹರಿವು ದಾಖಲಾಗಿತ್ತು. 18 ಮೇ 2020ರಲ್ಲಿ 95.18 ಅಡಿ ನೀರಿದ್ದು, 139 ಕ್ಯುಸೆಕ್ ಒಳಹರಿವು, 3856 ಕ್ಯೂಸೆಕ್ ಹೊರಹರಿವಿತ್ತು. 18 ಮೇ 2019ರಲ್ಲಿ 81.88 ಅಡಿ ನೀರು ಸಂಗ್ರಹವಾಗಿ 142 ಕ್ಯೂಸೆಕ್ ಒಳಹರಿವು, 351 ಕ್ಯುಸೆಕ್ ಹೊರಹರಿವು ದಾಖಲಾಗಿತ್ತು.
ಆರು ವರ್ಷಗಳಿಂದ ಬೇಸಿಗೆಯಲ್ಲೂ ಜಲಾಶಯದಲ್ಲಿ ಉತ್ತಮ ನೀರಿನಮಟ್ಟ ಕಾಯ್ದುಕೊಂಡಿದ್ದ ಕೆಆರ್‌ಎಸ್ ಈ ವರ್ಷ ಕಳಾಹೀನ ಸ್ಥಿತಿ ತಲುಪಿದೆ. ಜಲಾಶಯದಲ್ಲಿ 10.897 ಟಿಎಂಸಿ ಅಡಿಯಷ್ಟು ನೀರು ಮಾತ್ರ ಸಂಗ್ರಹವಾಗಿದೆ. ಕುಡಿಯುವುದಕ್ಕೆ ಸಾಕಾಗುವಷ್ಟು ನೀರು ಮಾತ್ರ ಜಲಾಶಯದಲ್ಲಿ ಸಂಗ್ರಹವಾಗಿದೆ.
ಮಳೆ ಕೊರತೆಯಿಂದ ಈ ಬಾರಿ ಬೇಸಿಗೆ ಬೆಳೆಗಳಿಗೆ ನೀರು ಹರಿಸಲಿಲ್ಲ. ನಾಲಾ ಆಧುನೀಕರಣ ಕೈಗೆತ್ತಿಕೊಂಡಿದ್ದರಿಂದ ಆನ್ ಅಂಡ್ ಆ್ನಲ್ಲೂ ನೀರು ಹರಿಸುವುದಕ್ಕೆ ಮುಂದಾಗಲಿಲ್ಲ. ನೀರು ಹರಿಸಿ ಕೆರೆ-ಕಟ್ಟೆಗಳನ್ನೂ ತುಂಬಿಸಲಿಲ್ಲ. ಇದರ ಪರಿಣಾಮವಾಗಿ ಅಣೆಕಟ್ಟೆಯಲ್ಲಿ 80.25 ಅಡಿಯಷ್ಟು ನೀರು ಸಂಗ್ರಹವಾಗಿದೆ. ಇಲ್ಲದಿದ್ದರೆ ಐದಾರು ಅಡಿಗಳಷ್ಟು ನೀರು ಕಡಿಮೆಯಾಗುವ ಸಾಧ್ಯತೆಗಳಿದ್ದವು ಎಂದು ಹೇಳಲಾಗುತ್ತಿದೆ.
2019 ರಿಂದ 2022ರವರೆಗೆ ಪೂರ್ವ ಮುಂಗಾರು ಉತ್ತಮವಾಗಿತ್ತು. ಆ ಸಮಯದಲ್ಲಿ ಜಲಾಶಯದ ನೀರಿನ ಮಟ್ಟವೂ ಸಮಾಧಾನಕರವಾಗಿತ್ತು. ಈ ಬಾರಿ ಅಣೆಕಟ್ಟೆಯಲ್ಲಿ 80.25 ಅಡಿಯಷ್ಟು ಮಾತ್ರ ನೀರಿದೆ. ಈ ಬಾರಿಯ ಬೇಸಿಗೆಯಲ್ಲಿ ಕಂಡೂ ಕೇಳರಿಯದಷ್ಟು ರಣಬಿಸಿಲು ಹಾಗೂ ಉಷ್ಣಹವೆಯಿಂದ ಭೂಮಿಯ ತಾಪವೂ ಹೆಚ್ಚಿದೆ. ಇದರಿಂದ ಕೇರಳ, ಕೊಡಗು ಭಾಗದಲ್ಲಿ ಹೆಚ್ಚು ಮಳೆಯಾದರೂ ಭೂಮಿ ಹೆಚ್ಚಾಗಿ ನೀರನ್ನು ಹೀರಿಕೊಳ್ಳುತ್ತಿರುವುದರಿಂದ ಒಳಹರಿವಿನಲ್ಲಿ ಏರಿಕೆಯಾಗದಂತಾಗಿದೆ. ಇದು ರೈತರ ನಿರಾಸೆಗೂ ಕಾರಣವಾಗಿದೆ.
ಕಳೆದೊಂದು ವಾರದಿಂದ ಪೂರ್ವ ಮುಂಗಾರು ಚುರುಕುಗೊಂಡಿರುವುದರಿಂದ ರೈತರು ಭೂಮಿಯನ್ನು ಉಳುಮೆ ಮಾಡುವ ಮೂಲಕ ಬಿತ್ತನೆಗೆ ಹದಗೊಳಿಸುತ್ತಿದ್ದಾರೆ. ಕೆರೆ-ಕಟ್ಟೆಗಳು ಖಾಲಿಯಾಗಿದ್ದರಿಂದ ಬಹುತೇಕ ರೈತರು ಕೆರೆಯ ಮಣ್ಣನ್ನು ಜಮೀನುಗಳಿಗೆ ಸಾಗಿಸಿಕೊಂಡು ಕೃಷಿ ಚಟುವಟಿಕೆಗೆ ಚುರುಕು ನೀಡುವುದಕ್ಕೆ ಸಿದ್ಧರಾಗಿದ್ದಾರೆ. ಹಲವರು ಹೊಸದಾಗಿ ಕೊಳವೆ ಬಾವಿಗಳನ್ನು ತೆಗೆಸುವುದರೊಂದಿಗೆ ಬೆಳೆಗೆ ನೀರಿನ ಸೌಕರ್ಯವನ್ನೂ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿಯ ಮುಂಗಾರು ಮಳೆಯ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ಕೃಷಿಯಲ್ಲಿ ತೊಡಗಿಕೊಳ್ಳುವುದಕ್ಕೆ ಉತ್ಸುಕಾಗಿದ್ದಾರೆ. ಉತ್ತಮ ಮಳೆ, ಅಣೆಕಟ್ಟೆ ಭರ್ತಿಯಾಗುವುದು, ನಾಲೆಗಳಿಗೆ ನೀರು ಬಿಡುಗಡೆಯಾಗುವ ದಿನಗಳಿಗಾಗಿ ಎದುರುನೋಡುತ್ತಿದ್ದಾರೆ.
70 ಅಡಿಗಿಂತಲೂ ಕಡಿಮೆ ಮಟ್ಟ
ಕಳೆದ 20 ವರ್ಷಗಳಲ್ಲಿ 4 ವರ್ಷ ಮೇ ತಿಂಗಳ 18ರಂದು ಜಲಾಶಯದ ನೀರಿನ ಮಟ್ಟ 70 ಅಡಿಗಳಿಗಿಂತಲೂ ಕೆಳಮಟ್ಟಕ್ಕೆ ಕುಸಿದಿತ್ತು. 2007 ಮೇ 18ರಂದು ಅಣೆಕಟ್ಟೆಯ ನೀರಿನ ಮಟ್ಟ 68.75 ಅಡಿ ಇದ್ದು, 153 ಕ್ಯೂಸೆಕ್ ಒಳಹರಿವು, 254 ಕ್ಯೂಸೆಕ್ ಹೊರಹರಿವು ದಾಖಲಾಗಿ ಅಣೆಕಟ್ಟೆಯಲ್ಲಿ 6.636 ಟಿಎಂಸಿ ಅಡಿ ನೀರು ದಾಖಲಾಗಿತ್ತು. ಅದಾದ ಬಳಿಕ 2013ರ ಮೇ 18ರಂದು ಜಲಾಶಯದಲ್ಲಿ 64.57 ಅಡಿ ನೀರು ದಾಖಲಾಗಿದ್ದು, 859 ಕ್ಯೂಸೆಕ್ ಒಳಹರಿವು, 767 ಕ್ಯೂಸೆಕ್ ಹೊರಹರಿವಿದ್ದು, 5.470 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
2017ರ ಮೇ 18ರಲ್ಲಿ 69.40 ಅಡಿ ನೀರಿದ್ದು, 183 ಕ್ಯೂಸೆಕ್ ಒಳಹರಿವು, 862 ಕ್ಯೂಸೆಕ್ ಹೊರಹರಿವಿನೊಂದಿಗೆ 6.835 ಟಿಎಂಸಿ ಅಡಿ ನೀರಿದ್ದರೆ, 2018ರ ಮೇ 18ರಲ್ಲಿ 69.52 ಅಡಿ ನೀರು ದಾಖಲಾಗಿ 343 ಕ್ಯೂಸೆಕ್ ಒಳಹರಿವು, 950 ಕ್ಯೂಸೆಕ್ ಹೊರಹರಿವಿನೊಂದಿಗೆ 6.872 ಟಿಎಂಸಿ ನೀರು ಸಂಗ್ರಹವಾಗಿತ್ತು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications