KRS Dam: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ; ಕೆಆರ್‌ಎಸ್, ಕಬಿನಿ ಜಲಾಶಯಗಳ ಒಳಹರಿವು ಎಷ್ಟಿದೆ?

ಜೂನ್ 1ರಿಂದ ರಾಜ್ಯದ ಹಲವು ಕಡೆಗಳಲ್ಲಿ ವ್ಯಾಪಕ ಮಳೆ ಶುರುವಾಗಿದೆ. ಇನ್ನೂ ಒಂದು ವಾರ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಕೂಡ ಮುಂದಿನ ಜೂನ್ 10ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಜೂನ್ 2, 5 ಮತ್ತು 6 ರಂದು ಈ ಪ್ರದೇಶದಲ್ಲಿ ಮಿಂಚು, ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಉಳಿದ ದಿನಗಳು ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

KRS Dam Heavy Rain Alert for Kaveri Basin Area KRS Kabini Dam Inflow on rise

ಮೇ ತಿಂಗಳಲ್ಲಿ ಸುರಿದ ಮುಂಗಾರು ಪೂರ್ವ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ಕರ್ನಾಟಕದ ಜಲಾಶಯಗಳಿಗೆ ಅಲ್ಪಪ್ರಮಾಣದ ನೀರು ಹರಿದುಬಂದಿದೆ. ನೀರಿಲ್ಲದೆ ಬಣಗುಡುತ್ತಿದ್ದ ಜಲಾಶಯಗಳಿಗೆ ಒಳಹರಿವು ಆರಂಭವಾಗಿದ್ದು, ಈ ವಾರ ಮಳೆ ವ್ಯಾಪಕವಾಗಿ ಸುರಿದರೆ, ಒಳಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಕಬಿನಿ ಒಳಹರಿವು ಹೆಚ್ಚಳ

ಶನಿವಾರಕ್ಕೆ ಹೋಲಿಕೆ ಮಾಡಿದರೆ ಕಬಿನಿ ಜಲಾಶಯದ ಒಳಹರಿವು ಅಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಶನಿವಾರ 186 ಕ್ಯೂಸೆಕ್ಸ್ ಇದ್ದ ಒಳಹರಿವು ಭಾನುವಾರ 430 ಕ್ಯೂಸೆಕ್ಸ್‌ಗೆ ಹೆಚ್ಚಾಗಿದೆ.

ಉಳಿದಂತೆ ಹಾರಂಗಿ, ಹೇಮಾವತಿ ಜಲಾಶಯದ ಒಳಹರಿವು ಅಲ್ಪ ಪ್ರಮಾಣದಲ್ಲಿ ಕಡಿಮೆ ಆಗಿದ್ದರೆ, ಕೆಆರ್ ಎಸ್ ಜಲಾಶಯದ ನೀರಿವು ಹರಿವು ಸ್ಥಿರತೆ ಕಾಯ್ದುಕೊಂಡಿದೆ. ಮುಂಗಾರು ಆರಂಭಕ್ಕೆ ಮುನ್ನವೇ ವಿವಿಧ ಜಲಾಶಯಗಳಲ್ಲಿ ಒಳಹರಿವು ಆರಂಭವಾಗಿರುವುದು ರೈತರಲ್ಲಿ ಸಂತಸ ತಂದಿದೆ.

ಕಳೆದ ವರ್ಷ ಬರಗಾಲ ಮತ್ತು ತೀವ್ರ ಬಿಸಿಲಿನಿಂದ ರೈತರು ನೀರಿಲ್ಲದೆ ನಷ್ಟ ಅನುಭವಿಸಿದ್ದರು. ಈ ಬಾರಿ ಮುಂಗಾರು ಆರಂಭಕ್ಕೆ ಮುನ್ನವೇ ಉತ್ತಮ ಮಳೆಯಾಗುತ್ತಿದ್ದು, ಈ ಬಾರಿಯಾದರು ಜಲಾಶಯ ತುಂಬಿದರೆ ಬೆಳೆ ಬೆಳೆಯುವ ಯೋಜನೆಯಲ್ಲಿದ್ದಾರೆ ರೈತರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+