KRS Dam: ಭರ್ಜರಿ ಮಳೆ: ಒಂದೇ ವಾರದಲ್ಲಿ 98 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ: ಸಂಪೂರ್ಣ ಮಾಹಿತಿ ಇಲ್ಲಿದೆ

ಮಂಡ್ಯ, ಜುಲೈ 03: ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷಮುಂಗಾರು ಅಬ್ಬರ ಜೋರಾಗಿದೆ. ಕರ್ನಾಟಕದಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಕಳೆದ ಬಾರೀ ಮಳೆಯಾಗದ ಹಿನ್ನೆಲೆ ರೈತರು ಕಂಗಾಲಾಗಿದ್ದು, ಇದೀಗ ಉತ್ತಮ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಕೆರೆ, ಕುಂಟೆ, ಹಳ್ಳ-ಕುಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆಎರ್‌ಎಸ್ (KRS) ಡ್ಯಾಂ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಒಂದೇ ವಾರದಲ್ಲಿ 11 ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಕೆಆರ್‌ಎಸ್ ನೀರಿನ ಮಟ್ಟ 98 ಅಡಿಗೆ ತಲುಪಿದೆ.

KRS Dam krs water level reached 98 feet in a single week

ಇನ್ನೂ ಕಳೆದ ವಾರದ ಹಿಂದಷ್ಟೇ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 87 ಅಡಿಗೆ ಕುಸಿದಿತ್ತು. ಇದೀಗ ಕಾವೇರಿ ಜಲಾನಯನ ಪ್ರದೇಶವು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ಕೆಆರ್‌ಎಸ್‌ಗೆ ನೀರು ಹರಿದು ಬರುತ್ತಿದೆ. ಮಳೆ ಮತ್ತಷ್ಟು ಜೋರಾದರೆ ಕೆಲವೇ ದಿನದಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ. ಸದ್ಯ ಕೆ ಆರ್‌ ಎಸ್‌ ಡ್ಯಾಂನಲ್ಲಿ ಸುಮಾರು 21.987 ಟಿಎಂಸಿ ನೀರು ಸಂಗ್ರಹವಾಗಿದೆ. ಒಬ್ಬೋಬ್ಬರಿ ಒಂದು ವಾರದಲ್ಲಿ 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದ್ದು, ದಿನೇ ದಿನೇ ನೀರಿನ ಮಟ್ಟ ಹೆಚ್ಚಳದಿಂದ ರೈತರಲ್ಲಿ ಸಂತಸ ಮನೆ ಮಾಡಿದೆ.

ಇಂದಿನ ಕೆಆರ್‌ಎಸ್ ನೀರಿನ ಮಟ್ಟ

* ಗರಿಷ್ಠ ಮಟ್ಟ - 124.80 ಅಡಿಗಳು
* ಇಂದಿನ ಮಟ್ಟ - 98.10 ಅಡಿಗಳು
* ಗರಿಷ್ಠ ಸಾಮರ್ಥ್ಯ - 49.452 ಟಿಎಂಸಿ
* ಇಂದಿನ ಸಾಮರ್ಥ್ಯ - 21.978 ಟಿಎಂಸಿ
* ಒಳ ಹರಿವು - 14,135 ಕ್ಯೂಸೆಕ್
* ಹೊರ ಹರಿವು - 532 ಕ್ಯೂಸೆಕ್

ಜುಲೈ 02 ರಂದು ಕೆಆರ್‌ಎಸ್ ನೀರಿನ ಮಟ್ಟ

* ಗರಿಷ್ಠ ಮಟ್ಟ - 124.80 ಅಡಿ.
* ಇಂದಿನ ಮಟ್ಟ - 96.50 ಅಡಿ.
* ಗರಿಷ್ಠ ಸಾಮರ್ಥ್ಯ - 49.452 ಟಿಎಂಸಿ
* ಇಂದಿನ ಸಾಮರ್ಥ್ಯ- 20.191 ಟಿಎಂಸಿ
* ಒಳ ಹರಿವು - 8,787 ಕ್ಯೂಸೆಕ್
* ಹೊರ ಹರಿವು - 526 ಕ್ಯೂಸೆಕ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+