KRS Dam: ರಾತ್ರೋರಾತ್ರಿ ನಿಲುವು ಬದಲು; ಕೆ.ಆರ್.ಎಸ್. ಬಳಿ ಟ್ರಯಲ್ ಬ್ಲಾಸ್ಟ್‌ಗೆ ಅಧಿಕಾರಿಗಳ ಸಿದ್ಧತೆ!

ಮಂಡ್ಯ , ಜುಲೈ 05: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗುತ್ತಿರುವಾಗಲೇ ರೈತರಿಗೆ ಆತಂಕ ಎದುರಾಗಿದೆ. ಕೆಆರ್‌ಎಸ್ ಬಳಿ ಟ್ರಯಲ್ ಬ್ಲಾಸ್ಟ್‌ ನಡೆಸುವ ವಿಚಾರದಲ್ಲಿ ನೀರಾವರಿ ಮತ್ತು ಗಣಿ ಇಲಾಖೆ ಅಧಿಕಾರಿಗಳು ಮೊಂಡಾಟ ಪ್ರದರ್ಶಿಸುತ್ತಿದ್ದು, ಪರೀಕ್ಷಾರ್ಥ ಸ್ಪೋಟ ನಡೆಸಿಯೆ ಸಿದ್ಧ ಎಂಬ ಹಠಕ್ಕೆ ಬಿದ್ದವರಂತೆ ಕಂಡುಬರುತ್ತಿದ್ದಾರೆ.

ಜುಲೈ 5ರ ಹೈಕೋರ್ಟ್ ನೀಡಬಹುದಾದ ನಿರ್ದೇಶನದಂತೆ ನಡೆಯುವುದಾಗಿ ನಿನ್ನೆಯಷ್ಟೇ ಹೇಳಿದ್ದ ನೀರಾವರಿ ಇಲಾಖೆ ಅಧಿಕಾರಿಗಳು ರಾತ್ರೋರಾತ್ರಿ ಪೊಲೀಸ್ ಕಾವಲಿನಲ್ಲಿ ಕುಳಿಗಳನ್ನು ನಿರ್ಮಿಸುವುದಕ್ಕೆ ಗಣಿ ಇಲಾಖೆ ಅಧಿಕಾರಿಗಳಿಗೆ ಬೆಂಬಲವಾಗಿ ನಿಂತಿದ್ದಾರೆ.

KRS Dam Officials prepare for trail blast near KRS

ಪಾಂಡವಪುರ ತಾಲೂಕಿನ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿರುವ ಗಣಿಗಾರಿಕೆ ಪ್ರದೇಶಗಳಲ್ಲಿ ಪರೀಕ್ಷಾರ್ಥ ಸ್ಪೋಟಕ್ಕೆ ಕುಳಿಗಳನ್ನು ನಿರ್ಮಿಸುವ ಕಾರ್ಯ ಭರದಿಂದ ಸಾಗಿದೆ. ಕೆ ಇಲಾಖೆ ಹಿರಿಯ ಭೂ ವಿಜ್ಞಾನಿ ರೇಷ್ಮಾ ಅವರು ಖುದ್ದು ನಿಂತು ಕುಳಿಗಳ ನಿರ್ಮಾಣದ ಮೇಲುಸ್ತುವಾರಿ ವಹಿಸಿದ್ದಾರೆ. ನೀರಾವರಿ ಇಲಾಖೆಯವರು ದೂರದಲ್ಲೇ ನಿಂತು ಪರೀಕ್ಷಾರ್ಥ ಸ್ಪೋಟಕ್ಕೆ ಪರೋಕ್ಷ ಬೆಂಬಲ ನೀಡುತ್ತಲೇ ಟ್ರಯಲ್ ಬ್ಲಾಸ್ಟ್‌ ವಿರೋಧಿಸುತ್ತಿರುವ ರೈತ ಹೋರಾಟಗಾರರಿಗೆ ಗಣಿ ಇಲಾಖೆ ಅಧಿಕಾರಿಗಳನ್ನು ಬೊಟ್ಟು ಮಾಡಿ ತೋರಿಸುತ್ತಿದ್ದಾರೆ.

ಟ್ರಯಲ್ ಬ್ಲಾಸ್ಟ್‌ ವಿರೋಧಿಸಿ ಮಂಗಳವಾರ ಕೆಆರ್‌ಎಸ್ ಇಂಜಿನಿಯರಿಂಗ್ ಕಚೇರಿ ಎದುರು ರೈತಸಂಘ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ ಸಮಯದಲ್ಲಿ ನೀರಾವರಿ ಇಲಾಖೆ ಅಧೀಕ್ಷಕ ಇಂಜಿನಿಯರ್ ರಘುರಾಮ್ ಅವರು ಜು.5ರಂದು ಹೈಕೋರ್ಟ್‌ನಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಬರಲಿದ್ದು, ನ್ಯಾಯಾಲಯ ನೀಡಬಹುದಾದ ನಿರ್ದೇಶನವನ್ನು ಆಧರಿಸಿ ಮುಂದಿನ ಹೆಜ್ಜೆ ಇಡುವುದಾಗಿ ತಿಳಿಸಿದ್ದರು. ಅಧೀಕ್ಷಕ ಇಂಜಿನಿಯರ್ ಮಾತನ್ನು ನಂಬಿ ರೈತರು ಗೋ-ಬ್ಯಾಕ್ ಚಳವಳಿಯನ್ನು ತಾತ್ಕಾಲಿಕವಾಗಿ ವಾಪಸ್ ಪಡೆದುಕೊಂಡಿದ್ದರು.

ರಾಜಕೀಯ ಮತ್ತು ಗಣಿ ಮಾಲೀಕರ ಒತ್ತಡಕ್ಕೆ ಮಣಿದಂತೆ ಕಂಡುಬಂದಿರುವ ರಾತ್ರಿ ವೇಳೆಗೆ ನಿಲುವನ್ನು ಬದಲಿಸಿದ ನೀರಾವರಿ ಮತ್ತು ಗಣಿ ಇಲಾಖೆ ಅಧಿಕಾರಿಗಳು ರಾತ್ರೋರಾತ್ರಿ ಪೊಲೀಸ್ ರಕ್ಷಣೆಯನ್ನು ಪಡೆದುಕೊಂಡು ಬೇಬಿಬೆಟ್ಟದಲ್ಲಿ ಕುಳಿಗಳನ್ನು ನಿರ್ಮಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಟ್ರಯಲ್ ಬ್ಲಾಸ್ಟ್‌ ನಡೆಸಿ ಗಣಿಗಾರಿಕೆಗೆ ಅವಕಾಶ ಕಲ್ಪಿಸಿಕೊಡುವುದು ಎರಡೂ ಇಲಾಖೆಯವರ ಮುಖ್ಯ ಗುರಿಯಾಗಿದೆ ಎಂದು ರೈತಸಂಘದ ಕಾರ್ಯಕರ್ತರು ಆರೋಪಿಸಿದ್ದಾರೆ.

ರೈತಸಂಘದಿಂದ ಗೋ-ಬ್ಯಾಕ್ ಚಳವಳಿ

ರೈತರ ಕಣ್ಣಿಗೆ ಮಂಕುಬೂದಿ ಎರಚಿ ಒಳಗೊಳಗೆ ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ ನಡೆಸುತ್ತಿರುವ ವಿಷಯ ತಿಳಿದ ಹೋರಾಟಗಾರರು ಬುಧವಾರ ಬೆಳಗ್ಗೆ ಕೆಆರ್‌ಎಸ್ ಬಳಿ ಸೇರಿ ಗೋ-ಬ್ಯಾಕ್ ಚಳವಳಿ ನಡೆಸಿದರು. ಈ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿದ ನೀರಾವರಿ ಇಲಾಖೆ ಅಽಕಾರಿಗಳನ್ನು ಪ್ರಶ್ನಿಸಿದಾಗ, ಟ್ರಯಲ್ ಬ್ಲಾಸ್ಟ್‌ ಸಂಬಂಧ ನಾವು ಹೈಕೋರ್ಟ್ ನೀಡುವ ನಿರ್ದೇಶನವನ್ನು ಎದುರುನೋಡುತ್ತಿದ್ದೇವೆ. ಗಣಿ ಇಲಾಖೆಯವರು ಕುಳಿಗಳನ್ನು ನಿರ್ಮಿಸುತ್ತಿರುವ ವಿಚಾರ ನಮಗೆ ಗೊತ್ತಿಲ್ಲ. ಈ ವಿಚಾರವಾಗಿ ನೀವು ಅವರನ್ನೇ ಕೇಳಬೇಕು ಎಂಬ ಉತ್ತರ ಬಂದಿತು.

ಅಣೆಕಟ್ಟು ಸುರಕ್ಷತಾ ಸಮಿತಿ ರಚನೆಯಾಗದೆ ಹಾಗೂ ಹೈಕೋರ್ಟ್ ಆದೇಶವಿಲ್ಲದಿದ್ದರೂ ಪರೀಕ್ಷಾರ್ಥ ಸ್ಪೋಟವನ್ನು ಏಕಮುಖವಾಗಿ ನಡೆಸುತ್ತಿರುವುದಕ್ಕೆ ಮುಂದಾಗಿರುವ ನೀರಾವರಿ ಮತ್ತು ಗಣಿ ಇಲಾಖೆ ಅಧಿಕಾರಿಗಳ ನಿಲುವನ್ನು ತೀವ್ರವಾಗಿ ಖಂಡಿಸಿದರಲ್ಲದೆ, ಗಣಿಗಾರಿಕೆಗಾಗಿ ಅಣೆಕಟ್ಟೆಯನ್ನು ಬಲಿಕೊಡುವುದಕ್ಕೆ ಮುಂದಾಗಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೆಆರ್‌ಎಸ್ ಬೃಂದಾವನ ಗೇಟ್ ಮುಂದೆ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಟ್ರಯಲ್ ಬ್ಲಾಸ್ಟ್‌ಗೆ ಬೆಂಬಲವಾಗಿ ನಿಂತಿದ್ದಾರೆಂದು ಆರೋಪಿಸಿ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು, ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಟ್ರಯಲ್ ಬ್ಲಾಸ್ಟ್‌ ನಿಲ್ಲಿಸಿ, ಅಣೆಕಟ್ಟೆ ಉಳಿಸಿ, ಟ್ರಯಲ್ ಬ್ಲಾಸ್ಟ್‌ ಬೇಡವೇ ಬೇಡ. ಗೋ ಬ್ಯಾಕ್.. ಗೋ ಬ್ಯಾಕ್ ತಜ್ಞರ ತಂಡ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು.

ಟ್ರಯಲ್ ಬ್ಲಾಸ್ಟ್‌ ಪರ ಪ್ರತಿಭಟನೆ

ಇದೇ ವೇಳೆ ಟ್ರಯಲ್ ಬ್ಲಾಸ್ಟ್‌ ನಡೆಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘ (ರೈತ ಬಣ) ಕಾರ್ಯಕರ್ತರು ಕೆಆರ್‌ಎಸ್ ಬಳಿ ಪ್ರತಿಭಟನೆ ನಡೆಸಿದರು. ಮಹಾರಾಜರ ಕಾಲದಿಂದಲೂ ಗಣಿಗಾರಿಕೆ ನಡೆದುಕೊಂಡು ಬಂದಿದ್ದು, ಕೆಆರ್‌ಎಸ್ ಅಣೆಕಟ್ಟೆಯ ಸುರಕ್ಷತೆಯ ಆತಂಕದಿಂದಾಗಿ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದು, ಗಣಿಗಾರಿಕೆಯಿಂದಾಗುವ ದುಷ್ಪರಿಣಾಮಗಳ ಸತ್ಯಾಸತ್ಯತೆಯನ್ನು ಅರಿಯಲು ಟ್ರಯಲ್ ಬ್ಲಾಸ್ಟ್‌ ಮಾಡಿ ನೈಜ ವರದಿಯನ್ನು ಸಾರ್ವಜನಿಕರ ಮುಂದಿಡುವ ಪ್ರಯತ್ನವಾಗಬೇಕಿದೆ ಎಂದು ಸಂಸ್ಥಾಪಕ ರಾಜ್ಯಾಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಒತ್ತಾಯಿಸಿದರು.

ಕೆಲವರು ರಾಜಕೀಯ ಕಾರಣಕ್ಕಾಗಿ ಟ್ರಯಲ್ ಬ್ಲಾಸ್ಟ್‌ಗೆ ಅಡ್ಡಿ ಉಂಟುಮಾಡುತ್ತಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರುವ ಮುನ್ನವೇ ಅದರ ಸಾಧಕ-ಬಾಧಕಗಳನ್ನು ಕಲ್ಪನೆ ಮಾಡಿಕೊಂಡು ಯಾವುದನ್ನೂ ತೀರ್ಮಾನಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+