KRS Dam: ಇನ್ನೂ ಭರ್ತಿಯಾಗಿರುವ ಕೆಆರ್‌ಎಸ್; ಪ್ರಮುಖ ಜಲಾಶಯಗಳ ನಿರಿನ ಮಟ್ಟ
ಈ ಬಾರಿ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದ ಕಾರಣ ನದಿಗಳು ತುಂಬಿ ಹರಿದಿದ್ದವು. ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು ರಾಜ್ಯದಲ್ಲಿ ಈ ಬಾರಿ ನೀರಿಗೆ ಸಮಸ್ಯೆ ಇಲ್ಲದಂತಾಗಿದೆ. ಡಿಸೆಂಬರ್ ಮುಗಿಯುತ್ತಾ ಬಂದಿದ್ದರೂ ರಾಜ್ಯದ ಹಲವು ಜಲಾಶಯಗಳಲ್ಲಿ ಇನ್ನೂ ಗರಿಷ್ಠ ಪ್ರಮಾಣದಲ್ಲಿ ನೀರು ಭರ್ತಿಯಾಗಿದೆ. ಈ ಬಾರಿ ಬೇಸಿಗೆಯಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ನಿರೀಕ್ಷೆ ಮಾಡಲಾಗಿದೆ.
ವಾಯುಭಾರ ಕುಸಿತದ ಪರಿಣಾಮ ಡಿಸೆಂಬರ್ ತಿಂಗಳಿನಲ್ಲೂ ಮಳೆ ಸುರಿದಿದೆ. ಪರಿಣಾಮ ಹಲವು ಜಲಾಶಯಗಳಿಗೆ ಡಿಸೆಂಬರ್ ನಲ್ಲೂ ಉತ್ತಮ ಒಳಹರಿವು ದಾಖಲಾಗಿದೆ. ದಕ್ಷಿಣ ಕರ್ನಾಟಕ ಭಾಗದ ಜೀವನಾಡಿಯಾಗಿರುವ ಕೆಆರ್ ಎಸ್ ಜಲಾಶಯ ಇನ್ನೂ ಗರಿಷ್ಠ ಮಟ್ಟದಲ್ಲಿ ಭರ್ತಿಯಾಗಿರುವುದು ಈ ಭಾಗದ ರೈತರಲ್ಲಿ ಸಂತಸ ಮೂಡಿಸಿದೆ. ಬೆಂಗಳೂರು ನಗರಕ್ಕೂ ಕೂಡ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿ ಕಾಡುವುದಿಲ್ಲ ಎನ್ನಲಾಗಿದೆ.

ಉತ್ತರ ಕರ್ನಾಟಕ ಭಾಗದ ಜಲಾಶಯಗಳಲ್ಲೂ ಉತ್ತಮ ಪ್ರಮಾಣದಲ್ಲಿ ನೀರು ಭರ್ತಿಯಾಗಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಪ್ರಮಾಣ ಎಷ್ಟಿದೆ ಎನ್ನುವ ಮಾಹಿತಿ ಇಲ್ಲಿದೆ.
ಭರ್ತಿಯಾಗಿದೆ ಕೃಷ್ಣರಾಜಸಾಗರ
ಕೆಆರ್ ಎಸ್ ಜಲಾಶಯದಲ್ಲಿ ಇಂದಿಗೂ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹವಾಗಿದೆ. 124.80 ಅಡಿ ಗರಿಷ್ಠ ಎತ್ತರ ಹೊಂದಿರುವ ಕೆಆರ್ ಎಸ್ 49.45 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿದ್ದು ಇಂದಿನ ನೀರಿನ ಮಟ್ಟ ಕೂಡ 49.45 ಟಿಎಂಸಿ ಆಗಿದೆ. 2658 ಕ್ಯೂಸೆಕ್ಸ್ ಒಳಹರಿವು ಇದ್ದು, 2100 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2859 ಅಡಿಯಾಗಿದ್ದು ಇಂದಿನ ನೀರಿನ ಮಟ್ಟ 2833.17 ಅಡಿಯಾಗಿದ್ದು, 8.50 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 3.69 ಟಿಎಂಸಿ ನೀರು ಸಂಗ್ರಹವಾಗಿದೆ.
ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 558.98 ಮೀಟರ್ / 124.57 ಟಿಎಂಸಿ
ಒಳಹರಿವು: 0
ಹೊರಹರಿವು: 4670 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 551.60 ಮೀಟರ್ / 122.50 ಟಿಎಂಸಿ
ಒಳಹರಿವು: 802 ಕ್ಯೂಸೆಕ್ಸ್
ಹೊರಹರಿವು: 8179 ಕ್ಯೂಸೆಕ್ಸ್
ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 591.50 ಮೀಟರ್ / 25.77 ಟಿಎಂಸಿ
ಒಳಹರಿವು: 0
ಹೊರಹರಿವು: 1342 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2279.89 ಅಡಿ / 16.98 ಟಿಎಂಸಿ
ಒಳಹರಿವು: 1013 ಕ್ಯೂಸೆಕ್ಸ್
ಹೊರಹರಿವು: 875 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2907.78 ಅಡಿ / 25.04 ಟಿಎಂಸಿ
ಒಳಹರಿವು: 1932 ಕ್ಯೂಸೆಕ್ಸ್
ಹೊರಹರಿವು: 3230 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1628.48 ಅಡಿ / 88.46 ಟಿಎಂಸಿ
ಒಳಹರಿವು: 780 ಕ್ಯೂಸೆಕ್ಸ್
ಹೊರಹರಿವು: 7475 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2154.29 ಅಡಿ / 66.93 ಟಿಎಂಸಿ
ಒಳಹರಿವು: 1131 ಕ್ಯೂಸೆಕ್ಸ್
ಹೊರಹರಿವು: 1131 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2164.63 ಅಡಿ / 42.95 ಟಿಎಂಸಿ
ಒಳಹರಿವು: 0
ಹೊರಹರಿವು: 147 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2074.57 ಅಡಿ / 31.15 ಟಿಎಂಸಿ
ಒಳಹರಿವು: 0
ಹೊರಹರಿವು: 2041 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 509.11 ಮೀಟರ್ / 99.75 ಟಿಎಂಸಿ
ಒಳಹರಿವು: 0
ಹೊರಹರಿವು: 11197 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 490.30 ಮೀಟರ್ / 29.32 ಟಿಎಂಸಿ
ಒಳಹರಿವು: 9471 ಕ್ಯೂಸೆಕ್ಸ್
ಹೊರಹರಿವು: 11423 ಕ್ಯೂಸೆಕ್ಸ್
ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2139.15 ಅಡಿ / 29.70 ಟಿಎಂಸಿ
ಒಳಹರಿವು: 693 ಕ್ಯೂಸೆಕ್ಸ್
ಹೊರಹರಿವು: 133 ಕ್ಯೂಸೆಕ್ಸ್












Click it and Unblock the Notifications