KRS Dam: ಕೃತ್ತಿಕಾ ಮಳೆ ಅಬ್ಬರ; ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಭಾರಿ ಹೆಚ್ಚಳ
ಮುಂಗಾರು ಆಗಮನಕ್ಕೆ ಮುನ್ನವೇ ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವುದು ಜನರಲ್ಲಿ ಸಂತಸ ತಂದಿದೆ. ಕಳೆದ ವರ್ಷ ಮಳೆ ಕೈಕೊಟ್ಟ ಕಾರಣ ಮತ್ತು ಭಾರಿ ಬಿಸಿಲಿನಿಂದ ಒಣಗಿದ್ದ ಹಳ್ಳ, ಕೊಳ್ಳ, ನದಿಗಳು ಮತ್ತೆ ಜೀವ ಪಡೆದುಕೊಳ್ಳುತ್ತಿವೆ.
ಕಳೆದ ವರ್ಷ ಬರಿದಾಗಿದ್ದ ಕೃಷ್ಣರಾಜ ಸಾಗರ (ಕೆಆರ್‌ಎಸ್) ಈ ವರ್ಷ ತುಂಬುವ ಮುನ್ಸೂಚನೆ ಸಿಕ್ಕಿದೆ. ಮುಂಗಾರು ಆಗಮನಕ್ಕೆ ಮುನ್ನವೇ ಜಲಾಶಯಕ್ಕೆ ಒಳಹರಿವು ಆರಂಭವಾಗಿದ್ದು, ದಿನಕಳೆದಂತೆ ಅದರ ಪ್ರಮಾಣ ಹೆಚ್ಚಾಗುತ್ತಿದೆ.

ಈ ವರ್ಷದಲ್ಲಿ ಇದೇ ಮೊದಲ ಬಾರಿ 1771 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಬುಧವಾರ 903 ಕ್ಯೂಸೆಕ್ ಇದ್ದ ಒಳಹರಿವು ಒಂದೇ ದಿನದಲ್ಲಿ ಬಹುತೇಕ ಎರಡು ಪಟ್ಟು ಹೆಚ್ಚಾಗಿದೆ.
ಮೇ 16, ಬೆಳಗ್ಗೆ 8 ಗಂಟೆಯವರೆಗೆ ಒಳಹರಿವು 1771 ಕ್ಯೂಸೆಕ್ ಇದ್ದರೆ ಒಟ್ಟು ಹೊರ ಹರಿವು 153 ಕ್ಯೂಸೆಕ್ ನೀರು ಬಿಡಲಾಗಿದೆ. 124.80 ಅಡಿ, 49.452 ಟಿಎಂಸಿ ಒಟ್ಟು ಸಂಗ್ರಹದ ಸಾಮರ್ಥ್ಯ ಹೊಂದಿದ್ದು, ಸದ್ಯ 80 ಅಡಿ 10.785 ಕ್ಯೂಸೆಕ್ ನೀರು ಸಂಗ್ರಹವಾಗಿದೆ.
#KRS Dam - Mandya
— ರವಿ ಕೀರ್ತಿ ಗೌಡ (@ravikeerthi22) May 16, 2024
16th May 2024 , 8 AM
FRL - 124.80 ft
PRL - 80 ft
Storage - 10.785 / 49.452 TMC
Inflow - 1771 cusecs
Outflow - River : 103 cusecs
Canal : 50 cusecs
Total Outflow - 153 cusecs
Storage - 21.81%
ಭಾರಿ ಮಳೆ ಮುನ್ಸೂಚನೆ
ಇನ್ನು ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಕೆಆರ್ ಎಸ್ ಮಾತ್ರವಲ್ಲದೆ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ಒಳಹರಿವು ಹೆಚ್ಚಾಗುವ ವಿಶ್ವಾಸವಿದೆ. ಕೆಆರ್ ಎಸ್ ಮಾತ್ರವಲ್ಲ ಹಾರಂಗಿ ಜಲಾಶಯಕ್ಕೂ ಕೂಡ ಒಳಹರಿವು ಪ್ರಮಾಣ ಹೆಚ್ಚಾಗಿದೆ.
ಮೇ 18 ರಿಂದ ಮೇ 20 ರವರೆಗೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸೂಚನೆ ಇದೆ.
ನಿರಂತರ ಮಳೆಯ ಕಾರಣ ಕಾವೇರಿ ನದಿಯಲ್ಲಿ ಹರಿವಿನ ಪ್ರಮಾಣ ಕೂಡ ಹೆಚ್ಚಳವಾಗಿದೆ. ಶಾಖದ ಅಲೆ, ಬಿಸಲಿನಿಂದ ಹಲವು ಕಡೆಗಳಲ್ಲಿ ಕಾವೇರಿ ನದಿ ಬತ್ತಿ ಹೋಗಿತ್ತು, ಈಗ ನಿಧಾನವಾಗಿ ಕಾವೇರಿ ಮೈದುಂಬಿಕೊಳ್ಳುತ್ತಿದ್ದು, ರೈತರು ಕೂಡ ಖುಷಿಯಾಗೊದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications