ಬೆಂಗಳೂರಲ್ಲಿ ₹800 ಕೋಟಿ ಹೂಡಿಕೆ: ಬೊಮ್ಮಸಂದ್ರದಲ್ಲಿ ಹೊಸ PCB ಉತ್ಪಾದನಾ ಘಟಕ, ಪೂರ್ಣ ಮಾಹಿತಿ

ಟೆಕ್ಸಾಸ್, ಅಕ್ಟೋಬರ್ 04: ಅಮೆರಿಕದ ಮುಂಚೂಣಿ ಕಂಪನಿಯಾದ ಕ್ರಿಪ್ಟನ್ ಸೊಲ್ಯೂಷನ್ಸ್ ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನೂತನ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (PCB) ಉತ್ಪಾದನಾ ಘಟಕ ಆರಂಭಿಸಲು 100 ಮಿಲಿಯನ್ ಡಾಲರ್ (800 ಕೋಟಿ ರೂ.) ಬಂಡವಾಳ ಹೂಡಲು ಮುಂದೆ ಬಂದಿದೆ ಎಂದು ಎಂಬಿ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

ಅಮೆರಿಕಾ ಪ್ರವಾಸದಲ್ಲಿದ್ದ ಸಚಿವರು ಈ ಕುರಿತು ಮಂಗಳವಾರ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಹೂಡಿಕೆ ಜೊತೆಗೆ ಜತೆಗೆ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (PCB) ಉತ್ಪಾದನಾ ಘಟಕ ನಿರ್ಮಾಣವಾಗಲಿದೆ. ಈ ಕಂಪನಿಯು ಮೈಸೂರು ಮತ್ತು ಚಾಮರಾಜನಗರದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಪರಿಶೀಲಿಸಲು ಒಪ್ಪಿಕೊಂಡಿದೆ.

Krypton Solutions Plans Set Up Printed Circuit Board(PCB) Production Unit In Bengaluru Rs 800 Invest

ಕ್ರಿಪ್ಟನ್ ಸೊಲ್ಯೂಷನ್ಸ್ ಕಂಪನಿಯ ಅಧ್ಯಕ್ಷ ಮತ್ತು ಸಿಇಒ ಸುರೇಶ್ ಪಟೇಲ್ ಮತ್ತು ಇತರ ಉನ್ನತಾಧಿಕಾರಿಗಳೊಂದಿಗೆ ಸೋಮವಾರ ಸಚಿವರ ಚರ್ಚಿಸಿದರು. ಕಂಪನಿಯು ಸ್ಥಳೀಯ ಸಹಭಾಗಿತ್ವಕ್ಕೆ ಆಸಕ್ತಿ ಹೊಂದಿದೆ. ಕೌಶಲ್ಯಪೂರ್ಣ ಮಾನವ ಸಂಪನ್ಮೂಲದ ಖಾತ್ರಿಯನ್ನು ನಮ್ಮಿಂದ ಬಯಸಿದೆ ಎಂದರು.

ಘಟಕ ಆರಂಭದ ಪ್ರಾಥಮಿಕ ಚರ್ಚೆ ಪೂರ್ಣ

ಕಂಪನಿಯು ಟೆಕ್ಸಾಸ್ ನಲ್ಲಿ ಹೊಂದಿರುವ 40ಸಾವಿರ ಚದರ ಮೀಟರ್ ವಿಸ್ತೀರ್ಣದ ಉತ್ಪಾದನಾ ಘಟಕಕ್ಕೂ ಈ ಸಂದರ್ಭದಲ್ಲಿ ಭೇಟಿ ನೀಡಿದೆ. ಅಲ್ಲಿರುವ ಸೌಲಭ್ಯಗಳನ್ನು ವೀಕ್ಷಿಸಲಾಗಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆಬಂದರೆ, ಅಗತ್ಯ ಸೌಲಭ್ಯಗಳನ್ನು ತ್ವರಿತ ಗತಿಯಲ್ಲಿ ಒದಗಿಸಲಾಗುವುದು. ಈ ಸಂಬಂಧದ ಪ್ರಾಥಮಿಕ ಚರ್ಚೆ ಈಗಾಗಲೇ ಮುಗಿದಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಸೆಮಿಕಂಡಕ್ಟರ್ ಕ್ಷೇತ್ರದ ದೈತ್ಯ ಕಂಪನಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಜತೆಗೂ ಮಾತುಕತೆ ನಡೆಸಲಾಗಿದೆ. ಅದು ಬೆಂಗಳೂರಿನಲ್ಲಿರುವ ತನ್ನ ಆರ್ ಮತ್ತು ಡಿ ಕೇಂದ್ರದ ಚಟುವಟಿಕೆಗಳನ್ನು ವಿಸ್ತರಿಸುವ ಬದ್ಧತೆಯನ್ನು ತೋರಿದೆ. ಅಮೆರಿಕದ ಆಚೆಗೆ ಕಂಪನಿಯು ಹೊಂದಿರುವ ಅತಿದೊಡ್ಡ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವಾಗಿದೆ ಎಂದು ಹೇಳಿದರು.

Krypton Solutions Plans Set Up Printed Circuit Board(PCB) Production Unit In Bengaluru Rs 800 Invest

ವೈಟ್ ಫೀಲ್ಡ್‌ನ ಈ ಸ್ಥಳ ಸೂಕ್ತ

ಈ ಸಭೆಯಲ್ಲಿ ಅನಲಾಗ್ ಮತ್ತು ಎಂಬೆಡೆಡ್ ಸೆಮಿಕಂಡಕ್ಟರ್ ಕುರಿತ ಸಂಶೋಧನೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆಯೂ ಚರ್ಚಿಸಲಾಗಿದೆ. ಇದಕ್ಕೆ ಬೆಂಗಳೂರಿನ ವೈಟ್ ಫೀಲ್ಡಿನಲ್ಲಿರುವ ಸೆಮಿಕಂಡಕ್ಟರ್ ಸೂಕ್ತ ಸ್ಥಳವಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಇದಷ್ಟೇ ಅಲ್ಲದೇ ಹೂಡಿಕೆಗೆ ಇರುವ ಅಡಚಣೆಗಳನ್ನು ನಿವಾರಿಸಲು ರಾಜ್ಯ ಸರ್ಕಾರ ಹೊಂದಿರುವ ಬದ್ಧತೆಯನ್ನು ಅವರಿಗೆ ತಿಳಿಸಲಾಗಿದೆ. ಭೇಟಿಯ ಸಂದರ್ಭದಲ್ಲಿ ಕಂಪನಿಯು ಹೊಂದಿರುವ 300 ಎಂಎಂ ವೇಫರ್ ಫ್ಯಾಬ್ ಉತ್ಪಾದನಾ ಘಟಕವನ್ನು ವೀಕ್ಷಿಸಲಾಯಿತು.

REP ಲಾಜಿಕ್ ಕಂಪನಿ ಸಕ್ರಿಯ

ಈ ಎಲ್ಲ ಕಂಪನಿಗಳ ಜೊತೆಗೆ ಟೆಕ್ಸಾಸ್ ನಲ್ಲೇ ಕೇಂದ್ರ ಕಚೇರಿ ಹೊಂದಿರುವ REP ಲಾಜಿಕ್ ಕಂಪನಿಯೊಂದಿಗೂ ಚರ್ಚಿಸಲಾಯಿತು. ಸ್ಯಾಪ್ ಕೌಶಲ್ಯದಲ್ಲಿ ಪರಿಣಿತಿ ಹೊಂದಿರುವ ಅದು ಬೆಂಗಳೂರಿನ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ಕೆಲಸ ಮಾಡುವ ಉತ್ಸಾಹ ತೋರಿಸುತ್ತಿದೆ. ಈ ಕಂಪನಿಯು ಈಗಾಗಲೇ ಹೈದರಾಬಾದ್, ಚೆನ್ನೈ, ಸೇಲಂ ಮುಂತಾದ ಕಡೆ ಸಕ್ರಿಯವಾಗಿದೆ ಎಂದು ಸಚಿವರು ವಿವರಿಸಿದರು.

ಮಾತುಕತೆಯಲ್ಲಿ ಕ್ರಿಪ್ಟನ್ ಕಂಪನಿಯ ಪರವಾಗಿ ಸಿಒಒ ದೀಪಕ್ ಪಟೇಲ್, ಸಿಎಂಒ ಮಹೇಶ್ ಪಟೇಲ್, ಉಪಾಧ್ಯಕ್ಷ ಮುಕೇಶ್ ಪಟೇಲ್, ಆನಂದ್ ಪಟೇಲ್, ಹಿತೇಶ್ ಭಕ್ತಾ, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿಯ ಪರವಾಗಿ ಜನರಲ್ ಮ್ಯಾನೇಜರ್ ಅಮಿಚಾಯ್ ರೋನ್, ಉಪಾಧ್ಯಕ್ಷ ಸ್ಟೀವ್ ಬೋನರ್, ಇಆರ್ ಪಿಎಲ್ ಪರವಾಗಿ ಕಣ್ಣನ್ ಶ್ರೀನಿವಾಸನ್ ಭಾಗವಹಿಸಿದ್ದರು.

ರಾಜ್ಯ ಸರ್ಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಐಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+