ಭಗವಾನ್ ವಿರುದ್ಧದ ಪ್ರಕರಣ ಹೈಗ್ರೌಂಡ್ಸ್‌ಗೆ ವರ್ಗಾವಣೆ
ಬೆಂಗಳೂರು, ಸೆಪ್ಟೆಂಬರ್. 23: ಪ್ರೊ. ಕೆಎಸ್ ಭಗವಾನ್ ಅವರ ಮೇಲೆ ಉಪ್ಪಿನಂಗಡಿಯಲ್ಲಿ ದಾಖಲಾಗಿರುವ ಪ್ರಕರಣ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ವರ್ಗಾವಣೆಯಾಗಲಿದೆ. ಈ ಬಗ್ಗೆ ಬೆಂಗಳೂರು ಕೇಂದ್ರ ವಿಭಾಗದ ಎಸಿಪಿ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಪ್ರಕರಣದಲ್ಲಿ ಭಗವಾನ್ ಸೇರಿದಂತೆ ಮೂವರನ್ನು ಆರೋಪಿತರನ್ನಾಗಿ ಹೆಸರಿಸಲಾಗಿದೆ. ಭಗವಾನ್ ಮೊದಲ ಆರೋಪಿಯಾದರೆ, ಸಾಹಿತಿ ಚಂಪಾ ಅವರನ್ನು ಎರಡನೇ ಆರೋಪಿಯಾಗಿ ಹೆಸರಿಸಲಾಗಿದೆ.[ಭಗವಾನ್ ವಿರುದ್ಧ ಉಪ್ಪಿನಂಗಡಿಯಲ್ಲಿ ಎಫ್ಐಆರ್ ದಾಖಲು]

ಹಿಂದೂಗಳ ಪ್ರವಿತ್ರ ಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತದ ಬಗ್ಗೆ ತುಚ್ಛವಾಗಿ ಮಾತಾಡಿದ್ದಲ್ಲದೆ, ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೋಮು ಭಾವನೆ ಕೆರಳಿಸಿದ್ದಾರೆ ಎಂದು ಆರೋಪಿಸಿ ಪ್ರೊ. ಕೆ.ಎಸ್. ಭಗವಾನ್ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹೊಸಮೂಲೆ ಮನೆಯ ಶ್ಯಾಮ ಸುದರ್ಶನ್ ಭಟ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ಸೆಪ್ಟೆಂಬರ್ 21 ರಂದು ದೂರು ನೀಡಿದ್ದರು.
'ರಾಮಾಯಣದ ಶ್ರೀರಾಮ ತಂದೆಗೆ ಹುಟ್ಟಿದ ಮಗನಲ್ಲ, ಹಿಂದೂ ದೇವತೆಗಳು ವ್ಯಭಿಚಾರಿಗಳು, ಮಹಾಭಾರತ ಓದಬೇಡಿ, ಭಗವದ್ಗೀತೆ ಓದಿದವರು ಭಯೋತ್ಪಾದಕರಾಗುತ್ತಾರೆ, ಉಪನಿಷತ್ತು ಕೆಟ್ಟ ಗ್ರಂಥ, ಹಿಂದೂ ದೇವಸ್ಥಾನಗಳು ಕೇವಲ ಹಣ ಮಾಡುವ ಯಂತ್ರಗಳಾಗಿವೆ' ಇತ್ಯಾದಿಯಾಗಿ ಕೆರಳಿಸುವಂಥ ಹೇಳಿಕೆ ನೀಡಿದ್ದಾರೆ ಎಂದು ಶ್ಯಾಮ ಸುದರ್ಶನ್ ಭಟ್ ಅವರು ಆರೋಪಿಸಿದ್ದರು.[ಹೇ ಭಗವಾನ್! ಯಾರು? ಏನು? ಎತ್ತ? ಏನಿದೆಲ್ಲ?]
ಭಗವಾನ್ ಅವರಿಗೆ ಸಾಹಿತ್ಯ ಅಕಾಡೆಮಿ ಘೋಷಣೆ ಮಾಡಿರುವ ಪ್ರಶಸ್ತಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭವಾಗಿದೆ. ಅಲ್ಲದೇ ಟ್ವಿಟ್ಟರ್ ನಲ್ಲಿಯೂ ಸಹ ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಪಾಲರಿಗೆ ಮತ್ತು ಸಾಹಿತ್ಯ ಅಕಾಡೆಮಿಗೆ ಇಮೇಲ್ ಕಳುಹಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications