ಯಾರೇನೇ ಅಂದ್ರೂ ಬ್ರಿಗೇಡ್ ಕೈಬಿಡಲ್ಲ: ಈಶ್ವರಪ್ಪ
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಯಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ನಿಂದ ಈಶ್ವರಪ್ಪ ಅವರಿಗೆ ಸ್ಪಷ್ಟ ಸೂಚನೆ ನೀಡಿದೆ ಎಂಬ ಸುದ್ದಿ ಹರಿದಾಡಿದ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಈಶ್ವರಪ್ಪ.
ಬೆಂಗಳೂರು, ಮಾರ್ಚ್ 3: ಯಾರು ಏನೇ ಅಂದರೂ ನಾನು ರಾಯಣ್ಣ ಬ್ರಿಗೇಡ್ ಸಂಘಟನೆಯನ್ನು ಕೈಬಿಡಲ್ಲ ಎಂದು ರಾಜ್ಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಯಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ನಿಂದ ಈಶ್ವರಪ್ಪ ಅವರಿಗೆ ಸ್ಪಷ್ಟ ಸೂಚನೆ ನೀಡಿದೆ ಎಂಬ ಸುದ್ದಿ ಹರಿದಾಡಿದ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಈಶ್ವರಪ್ಪ, ಯಾವುದೇ ಕಾರಣಕ್ಕೂ, ಯಾರು ಏನೇ ಹೇಳಿದರೂ ನಾನು ಬ್ರಿಗೇಡ್ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.[ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್ ಖಡಕ್ ವಾರ್ನಿಂಗ್]

ಇದೇ ವೇಳೆ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂಬ ಆಶಯ ವ್ಯಕ್ತಪಡಿಸಿದ ಈಶ್ವರಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ನಾವು 17 ಸಂಸತ್ ಸ್ಥಾನಗಳನ್ನು ಗೆದ್ದಿದ್ದೇವೆ. ಮುಂದೆಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.[ಈಶ್ವರಪ್ಪ ವಿಚಾರದಲ್ಲಿ ಅಮಿತ್ ಶಾ ತಲೆ ಕೆಟ್ಟು ಮೊಸರು ಗಡಿಗೆ]












Click it and Unblock the Notifications