KS Eshwarappa : ರಾಜಕೀಯ ನಿವೃತ್ತಿ ಘೋಷಿಸಿ ನಡ್ಡಾ ಅವರಿಗೆ ಪತ್ರ ಬರೆದ ಕೆಎಸ್ ಈಶ್ವರಪ್ಪ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂರೆ ಬಿಜೆಪಿಯಲ್ಲಿ ಆತಂರಿಕ ಕಲಹಗಳು ಹೆಚ್ಚಾಗುತ್ತಿದೆ ಎಂದು ತೋರುತ್ತಿದೆ. ಯಾಕೆಂದರೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆಎಸ್ ಈಶ್ವರಪ್ಪ ರಾಜಕೀಯದಿಂದ ನಿವೃತ್ತಿ ಹೊಂದಲು ಬಯಸಿದ್ದಾರೆ. ಈ ಕುರಿತಾಗಿ ಸ್ವತ: ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಈಶ್ವರಪ್ಪ ಪತ್ರವನ್ನು ಬರೆದಿದ್ದಾರೆ.
ತಾವು ಸ್ವ-ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ಈಶ್ವರಪ್ಪ ಪತ್ರದಲ್ಲಿ ವಿನಂತಿಸಿದ್ದಾರೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಅಭಿನಂದನೆಗಳನ್ನು ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.

ಇದರಿಂದಾಗಿ ಕಳೆದ ಮೂರು ದಶಕಗಳಿಂದ ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟ ಶಿವಮೊಗ್ಗ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವುದು ಕೇಸರಿ ಪಕ್ಷಕ್ಕೆ ಈ ಬಾರಿ ಕಷ್ಟವಾಗಬಹುದು. ಅಷ್ಟಕ್ಕೂ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಲು ಕಾರಣವೇನಿರಬಹುದು ಎಂದು ನೋಡುವುದಾದರೆ-
2022 ರ ಆರಂಭದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ, ಮಾಲ್‌ನಲ್ಲಿ ವೀರ ಸಾವರ್ಕರ್ ಅವರ ಪೋಸ್ಟರ್ ಹಾಕಿದ ನಂತರ ಈ ಭಾಗದಲ್ಲಿ ಪ್ರಮುಖ ಕೋಮು ಸಮಸ್ಯೆಗಳನ್ನು ಕಂಡಿತು. ಈ ಅಡಚಣೆಗಳು ನಗರದಲ್ಲಿ ಆಗಾಗ್ಗೆ ಬಂದ್‌ಗಳಿಗೆ ಕಾರಣವಾಯಿತು, ವ್ಯಾಪಾರಗಳು ಮತ್ತು ಒಟ್ಟಾರೆ ಆರ್ಥಿಕ ವಾತಾವರಣದ ಮೇಲೆ ಪರಿಣಾಮ ಬೀರಿತು.
ಕೋಮು ಜ್ವಾಲೆಯನ್ನು ತಗ್ಗಿಸುವ ಬದಲು ಶಾಸಕ ಕೆ.ಎಸ್.ಈಶ್ವರಪ್ಪ ಅವರು ದ್ವೇಷದ ಪ್ರಚಾರ ಮಾಡುತ್ತಿದ್ದಾರೆ ಎಂದು ಆಯನೂರು ಮಂಜುನಾಥ್ ಆರೋಪಿಸಿದರು. ಕ್ಷೇತ್ರದಿಂದ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಂಜುನಾಥ್, ತಮಗೆ ಟಿಕೆಟ್ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈಶ್ವರಪ್ಪ ಅವರು ತಮ್ಮ ಪುತ್ರ ಕೆ.ಇ.ಕಾಂತೇಶ್‌ಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದು, ಎರಡನೇ ಹಂತದ ನಾಯಕರ ನಿರೀಕ್ಷೆಯ ಮೇಲೆ ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ.
ಕಾಂತೇಶ್‌ಗೆ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಆಯನೂರು ಮಂಜುನಾಥ್ ಬಹಿರಂಗವಾಗಿಯೇ ಸವಾಲು ಹಾಕಿದ್ದರು. ಈಶ್ವರಪ್ಪ ವಂಶ ರಾಜಕಾರಣವನ್ನು ಮುಂದುವರಿಸುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಯ ಆಂತರಿಕ ಕಲಹ ಕಾಂಗ್ರೆಸ್‌ನಲ್ಲಿ ನಿರೀಕ್ಷೆ ಹೆಚ್ಚಿಸಿದೆ, ಪಕ್ಷದಲ್ಲಿ 11 ಮಂದಿ ಆಕಾಂಕ್ಷಿಗಳಿದ್ದು, ಅಚ್ಚರಿಯ ನಡೆಯಲ್ಲಿ ಕೆಲವರು ಇತ್ತೀಚೆಗೆ ಬಹಿರಂಗವಾಗಿ ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಕೋರಿದ್ದಾರೆ. ತಮ್ಮ ಸ್ಪರ್ಧೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದೂ ಆಕಾಂಕ್ಷಿಗಳು ಹೇಳಿದ್ದಾರೆ.
ಕಳೆದ ಹಲವಾರು ಚುನಾವಣೆಗಳಲ್ಲಿ, ಬಿಜೆಪಿಯು ಪ್ರಮುಖ ಸಮುದಾಯಗಳಾದ ಬ್ರಾಹ್ಮಣರು, ಲಿಂಗಾಯತರು, ಒಕ್ಕಲಿಗರು ಮತ್ತು ಇತರ ಸಣ್ಣ ಸಮುದಾಯಗಳಾದ ಕ್ಷತ್ರಿಯರು, ದಾರ್ಜಿ ಮರಾಠರು, ಮಾರ್ವಾಡಿಗಳು ಮತ್ತು ತಮಿಳರ ಬೆಂಬಲವನ್ನು ಗಳಿಸಲು ಹಿಂದೂ ಕಾರ್ಡ್ ಅನ್ನು ಆಡಿದರು. ಕ್ಷೇತ್ರದಲ್ಲಿ ಮುಸ್ಲಿಂ ಮತ್ತು ಎಸ್‌ಸಿ/ಎಸ್‌ಟಿ ಮತದಾರರು ಗಣನೀಯ ಸಂಖ್ಯೆಯಲ್ಲಿದ್ದಾರೆ.
ನಮ್ಮ ಪಕ್ಷ ಲಿಂಗಾಯತ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಇಡೀ ಸಮುದಾಯ ನಮ್ಮೊಂದಿಗೆ ಬರುವದರಿಂದ ಗೆಲುವಿನ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಹೆಸರು ಹೇಳಲಿಚ್ಛಿಸದ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಭವಿಷ್ಯ ನುಡಿದಿದ್ದಾರೆ. ಕಳೆದ ನಾಲ್ಕು ದಶಕಗಳಲ್ಲಿ ಬಿಜೆಪಿಯ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ 1999ರಲ್ಲಿ ಕಾಂಗ್ರೆಸ್‌ನ ಎಚ್‌ಎಂ ಚಂದ್ರಶೇಖರಪ್ಪ ಮಾತ್ರ ಗೆದ್ದಿದ್ದರು.
ಇಷ್ಟು ಮಾತ್ರವಲ್ಲದೆ ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಶಾಸಕರು ಮತ್ತು ಸಂಸದರ ಮಕ್ಕಳಿಗೆ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ಅಸಮ್ಮತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಬಿಜೆಪಿಯ ಮೊದಲ ಪಟ್ಟಿಯನ್ನು ಸಿದ್ದ ಪಡಿಸಲು ರಾಜ್ಯ ನಾಯಕರು ಮತ್ತೆ ಚರ್ಚೆ ನಡೆಸುತ್ತಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ. ಇದರಿಂದಾಗಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲು ಒಂದು ಅಥವಾ ಎರಡು ದಿನ ವಿಳಂಬವಾಗುವ ನಿರೀಕ್ಷೆಯಿದೆ. ಮಾತ್ರವಲ್ಲದೆ ಕೆಲವು ಸ್ಥಾನಗಳಿಗೆ ಹೊಸ ಮುಖಗಳು ಕಾಣಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿದೆ.
ಭಾನುವಾರ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ, ಹಾಲಿ ಶಾಸಕರು ಅಥವಾ ಸಂಸದರ ಮಕ್ಕಳಿಗೆ ಸ್ಥಾನ ನೀಡುವುದಕ್ಕೆ ಅಸಮ್ಮತಿ ಸೂಚಿಸಿದ ಪ್ರಧಾನಿ ಮೋದಿ, ಬದಲಿಗೆ ಪಕ್ಷದ ಕಾರ್ಯಕರ್ತರಿಗೆ ಸ್ಥಾನ ನೀಡಲು ಆದ್ಯತೆ ನೀಡುವುದಾಗಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಈಶ್ವರಪ್ಪ ಅವರು ತಮ್ಮ ಪುತ್ರ ಕೆ.ಇ.ಕಾಂತೇಶ್‌ಗೆ ಟಿಕೆಟ್ ಸಿಗುವ ಸಾಧ್ಯತೆಗಳಿಲ್ಲದೆ ನಿರಾಸೆ ಹೊಂದಿದ್ದಾರೆ ಎನ್ನಲಾಗುತ್ತಿದೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications