ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಗಳು : ಕೋಲಾರದಲ್ಲಿ ಆಲಿಕಲ್ಲು ಮಳೆಯಿಂದ ಬೆಳೆ ನಾಶ

|
Google Oneindia Kannada News

ಕೋಲಾರ, ಮೇ 4 : ಕೋಲಾರ ಜಿಲ್ಲೆಯಲ್ಲಿ ಶನಿವಾರ ಸುರಿದ ಆಲಿಕಲ್ಲು ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಸುಮಾರು 800 ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ರೈತರಿಗೆ 25 ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಸೋಮವಾರ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು, ಬಂಗಾರಪೇಟೆ ತಾಲೂಕಿನ ನಾಯಕನಹಳ್ಳಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಉಂಟಾದ ಬೆಳೆ ಹಾನಿಯ ಬಗ್ಗೆ ಪರಿಶೀಲನೆ ನಡೆಸಿದರು. ರೈತರಿಗೆ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ ಎಂದರು.

ಅಲಿಕಲ್ಲು ಮಳೆಯಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ಟೊಮೆಟೋ, ಪಪ್ಪಾಯಿ, ಮಾವು, ಹಿಪ್ಪು ನೇರಳೆ ಸೊಪ್ಪು, ಮೆಣಸಿನಕಾಯಿ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ಅವರು ಹೇಳಿದ್ದು, ಹಾನಿ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಅಲಿಕಲ್ಲು ಮಳೆಯಿಂದಾಗಿ ಆಗಿರುವ ಹಾನಿಯ ಬಗ್ಗೆ ವರದಿ ತಯಾರಿಸಲು ಕಂದಾಯ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ತಂಡ ಪ್ರತಿ ಗ್ರಾಮದಲ್ಲಿ ಉಂಟಾದ ಬೆಳೆ ಹಾನಿ ಬಗ್ಗೆ ರೈತರಿಂದ ಸಮಗ್ರ ಮಾಹಿತಿ ಪಡೆದು ವರದಿ ತಯಾರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಅಪಾರ ಬೆಳೆನಾಶ

ಕೋಲಾರ ಜಿಲ್ಲೆಯಲ್ಲಿ ಅಪಾರ ಬೆಳೆನಾಶ

ಶನಿವಾರ ರಾತ್ರಿ ಕೋಲಾರ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಸುಮಾರು 800 ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ರೈತರಿಗೆ 25 ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಬೆಳೆಹಾನಿ ಪರಿಶೀಲನೆ ನಡೆಸಿದ ಈಶ್ವರಪ್ಪ

ಬೆಳೆಹಾನಿ ಪರಿಶೀಲನೆ ನಡೆಸಿದ ಈಶ್ವರಪ್ಪ

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಬಂಗಾರಪೇಟೆ ತಾಲೂಕಿನ ನಾಯಕನಹಳ್ಳಿ, ಮಾವಳ್ಳಿ ಮುಂತಾದ ಹಳ್ಳಿಗಳಲ್ಲಿ ಉಂಟಾದ ಬೆಳೆ ಹಾನಿಯ ಬಗ್ಗೆ ಪರಿಶೀಲನೆ ನಡೆಸಿದರು.

ಮಾವಳ್ಳಿಯಲ್ಲಿ ಅಪಾರ ಪ್ರಮಾಣದ ಹಾನಿ

ಮಾವಳ್ಳಿಯಲ್ಲಿ ಅಪಾರ ಪ್ರಮಾಣದ ಹಾನಿ

ಬಂಗಾರಪೇಟೆ ತಾಲೂಕಿನ ಮಾವಳ್ಳಿಯಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಈ ಭಾಗದಲ್ಲಿ ರೈತರಿಗೆ ತೀವ್ರ ನಷ್ಟ ಉಂಟಾಗಿರುವುದರಿಂದ ಹೆಚ್ಚುವರಿ ಪರಿಹಾರಕ್ಕೆ ವರದಿ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ಅವರು ಹೇಳಿದ್ದಾರೆ.

ಮೂರು ಇಲಾಖೆಗಳ ಅಧಿಕಾರಿಗಳ ತಂಡ

ಮೂರು ಇಲಾಖೆಗಳ ಅಧಿಕಾರಿಗಳ ತಂಡ

ಆಲಿಕಲ್ಲು ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ವರದಿ ತಯಾರಿಸಲು ಕಂದಾಯ, ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ತಂಡ ಪ್ರತಿ ಗ್ರಾಮದಲ್ಲಿ ಉಂಟಾದ ಬೆಳೆ ಹಾನಿ ಬಗ್ಗೆ ರೈತರಿಂದ ಸಮಗ್ರ ಮಾಹಿತಿ ಪಡೆದು ವರದಿ ತಯಾರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಯಾವ-ಯಾವ ಬೆಳೆ ನಾಶ

ಯಾವ-ಯಾವ ಬೆಳೆ ನಾಶ

ಆಲಿಕಲ್ಲು ಮಳೆಯಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಆದರೆ, ಟೊಮೆಟೋ, ಪಪ್ಪಾಯಿ, ಮಾವು, ಹಿಪ್ಪು ನೇರಳೆ, ಮೆಣಸಿನಕಾಯಿ ಮುಂತಾದ ಬೆಳೆಗಳಿಗೆ ಹಾನಿ ಉಂಟಾಗಿದೆ.

English summary
Leader of opposition KS Eshwarappa inspects crop damage in Kolar district on Monday. Heavy rain lashed some parts of Bangarpet taluk on Saturday evening has destroyed crops worth Rs 25 core.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X