KS EShwarappa Manifesto: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕೆಎಸ್ ಈಶ್ವರಪ್ಪ ಪ್ರಣಾಳಿಕೆ
ಬೆಂಗಳೂರು ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿಂದು ಲೋಕಸಭಾ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದರು. ಇತ್ತ ಬಿಜೆಪಿ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿರುವ ಕೆಎಸ್ ಈಶ್ವರಪ್ಪ ಕೂಡ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಆ ಪ್ರಣಾಳಿಕೆ ಮುಖ್ಯ ಅಂಶವನ್ನು ಕೆಎಸ್ಈ ಹೇಳಿಕೊಂಡಿದ್ದು ಬಿಜೆಪಿ ಕುಟುಂಬ ರಾಜಕಾರಣಕ್ಕೆ ಟಾಂಗ್ ಕೊಟ್ಟಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಈಶ್ವರಪ್ಪ ಅವರು, 'ಹಿಂದುತ್ವದ ಉಳಿವು, ಪಕ್ಷದ ಶುದ್ದೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಾಣಳಿಕೆ' ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಮುಂದಾಗಿರುವ ಕೆಎಸ್ ಈಶ್ವರಪ್ಪ ಕಮಲ ಪಾಳಯಕ್ಕೆ ದೊಡ್ಡ ಸವಾಲಾಗಿದ್ದಾರೆ.

ಕೆಎಸ್ ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದು ಎಲ್ಲರೂ ತಿಳಿದಿರುವ ವಿಚಾರ. ಅವರ ಪುತ್ರನಿಗೆ ಹಾವೇರಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಕೋಪಗೊಂಡ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಈಗಾಗಲೇ ನಾಮಪತ್ರ ಸಲ್ಲಿಸಿರುವ ಅವರು ಪ್ರಚಾರ ಕೂಡ ಆರಂಭಿಸಿದ್ದಾರೆ. ಅವರು ಪ್ರಚಾರದ ವೇಳೆ ಮೋದಿ ಫೋಟೋ ಬಳಸಿದ್ದರು ಎನ್ನುವ ಕಾರಣಕ್ಕೆ ಬಿಜೆಪಿ ಕಿಡಿ ಕಾರಿತ್ತು. ಈ ವಿಚಾರವಾಗಿ ಕೆಎಸ್ ಈಶ್ವರಪ್ಪ ಕೋರ್ಟ್ ಮೆಟ್ಟಿಲೂ ಕೂಡ ಹತ್ತಿದ್ದಾರೆ.
ರಾಜ್ಯ @BJP4Karnataka ಮಾನ್ಯ ಅಧ್ಯಕ್ಷ @BYVijayendra ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, @narendramodi @AmitShah ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ.
— K S Eshwarappa (Modi Ka Parivar) (@ikseshwarappa) April 14, 2024
ಈ ನಡುವೆ ಟ್ವೀಟ್ ಮಾಡಿರುವ ಅವರು ಬಿಎಸ್ ಯಡಿಯೂರಪ್ಪ ಹಾಗೂ ಮಕ್ಕಳ ವಿರುದ್ಧ ಗುಡುಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರೇ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, ನರೇಂದ್ರ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಬರೆದಿದ್ದಾರೆ.
ಕೆಎಸ್ ಈಶ್ವರಪ್ಪ ಟ್ವೀಟ್‌ಗೆ ತಿರುಗೇಟು ನೀಡಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ, 'ಇಷ್ಟು ದಿನ ಹೀಗೆ ಅನಿಸಿರಲಿಲ್ಲ. ಅವರಿಗೆ ಈಗ ಅನಿಸತೊಡಗಿದೆ. ಯಾಕೆಮದರೆ ಅವರ ಪುತ್ರನಿಗೆ ಟಿಕೆಟ್ ಸಿಗಲಿಲ್ಲ ಅನ್ನೋ ಬೇಸರ. ಟಿಕೆಟ್ ಯಾರಿಗೆ ಕೊಡಬೇಕು ಅನ್ನೋದು ಹೈಕಮಾಂಡ್ ನಿರ್ಧಾರ. ಅದನ್ನು ಅವರು ಸ್ವಾಗತಿಸಬೇಕು. ಅದನ್ನು ಬಿಟ್ಟು ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ಅವರೇನೇ ಮಾತನಾಡಿದರೂ ಆಶೀರ್ವಾದವಾಗಿ ಸ್ವೀಕರಿಸುತ್ತೇನೆ' ಎಂದು ಸುದ್ದಿಗಾರರಿಗೆ ಹೇಳಿದರು.












Click it and Unblock the Notifications