ಕೇಂದ್ರ ಸಚಿವರನ್ನು ಭೇಟಿಯಾಗಿ ಹಲವು ಮನವಿ ಸಲ್ಲಿಸಿದ ಈಶ್ವರಪ್ಪ

ನವದೆಹಲಿ, ಜೂನ್ 24 : ಶಿವಮೊಗ್ಗ ಕ್ಷೇತ್ರದ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಅವರು ವಿವಿಧ ಕೇಂದ್ರ ಸಚಿವರನ್ನು ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿದರು. ವಿವಿಧ ಯೋಜನೆಗಳ ಬಗ್ಗೆ ಅವರು ಮನವಿಗಳನ್ನು ಸಲ್ಲಿಸಿದರು.

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ನವದೆಹಲಿ ಪ್ರವಾಸದಲ್ಲಿದ್ದಾರೆ. ಹಲವು ಕೇಂದ್ರ ಸಚಿವರನ್ನು ಅವರು ಭೇಟಿ ಮಾಡಿ ಕ್ಷೇತ್ರದ ವಿವಿಧ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.

ಆಯುಷ್ ಇಲಾಖೆ ರಾಜ್ಯ ಸಚಿವ ಶ್ರೀಪಾದ ನಾಯಕ್ ಅವರನ್ನು ಮೊದಲು ಕೆ.ಎಸ್.ಈಶ್ವರಪ್ಪ ಭೇಟಿ ಮಾಡಿದರು. ಬಳಿಕ ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

KS Eshwarappa meets union ministers

ಶ್ರೀಪಾದ ನಾಯಕ್ ಅವರನ್ನು ಭೇಟಿ ಮಾಡಿದ ಕೆ.ಎಸ್.ಈಶ್ವರಪ್ಪ ಅವರು ಮೊರಾರ್ಜಿ ದೇಸಾಯಿ ಇನ್ಸಿಟಿಟ್ಯೂಟ್ ಆಫ್‌ ಯೋಗಾದ ಶಾಖೆಯನ್ನು ಶಿವಮೊಗ್ಗದಲ್ಲಿ ತೆರೆಯಬೇಕು ಎಂದು ಮನವಿಯನ್ನು ಸಲ್ಲಿಸಿದರು.

KS Eshwarappa meets union ministers

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿದ ಕೆ.ಎಸ್.ಈಶ್ವರಪ್ಪ ಅವರು, ಶಿವಮೊಗ್ಗದ ರೈಲ್ವೆ ನಿಲ್ದಾಣ ಸಾಕಷ್ಟು ಅಭಿವೃದ್ದಿಯಾಗಿದೆ. ಶಿವಮೊಗ್ಗ ವಲಯಕ್ಕೆ ಹೆಚ್ಚಿನ ರೈಲುಗಳ ಸಂಚಾರ ಆರಂಭಿಸಬೇಕು ಎಂದು ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+