ಉದ್ಯೋಗ ಖಾತರಿಯಲ್ಲಿ ರಾಜ್ಯ ಉತ್ತಮ ಸಾಧನೆ ಮಾಡಿದೆ; ಈಶ್ವರಪ್ಪ
ಬೆಂಗಳೂರು, ಏಪ್ರಿಲ್ 11; ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯ 75ನೇ ಸ್ವಾತಂತ್ರ್ಯಾಚರಣೆ ಹಿನ್ನಲೆಯಲ್ಲಿ ಏಪ್ರಿಲ್ 11 ರಿಂದ 17ರ ತನಕ ನವದೆಹಲಿಯಲ್ಲಿ 'ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮಪಂಚಾಯತಿ'ಗಳ ಪಾತ್ರ ಎಂಬ ಬಗ್ಗೆ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಆಯೋಜಿಸಿದೆ.
ಸೋಮವಾರ ದೆಹಲಿಯ ವಿಜ್ಞಾನ ಭವನದಲ್ಲಿ 'ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯತಿ'ಗಳ ಪಾತ್ರ ರಾಷ್ಟ್ರೀಯ ಕಾರ್ಯಾಗಾರವನ್ನುಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉದ್ಘಾಟಿಸಿದರು.
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಕೆ. ಎಸ್. ಈಶ್ವರಪ್ಪ ಮಾತನಾಡಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ 2030ರ ವೇಳೆಗೆ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ 17 ಗುರಿಗಳನ್ನು ಅಂತಿಮಗೊಳಿಸಿದೆ. ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯವು ಸದರಿ ಗುರಿಗಳನ್ನು ಸ್ಥಳೀಕರಿಸಿ 9 ಗುರಿಗಳಿಗೆ ಪ್ರಾಮುಖ್ಯತೆ ನೀಡಿ ಇದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಹಂತದಲ್ಲಿ ಸಾಧನೆ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ.
ಯಾವುದೇ ಹಳ್ಳಿ ಅಥವಾ ವ್ಯಕ್ತಿ ಅಭಿವೃದ್ಧಿ ಪಥದಿಂದ ಹಿಂದುಳಿಯಬಾರದೆಂಬುದು ಇದರ ಪ್ರಮುಖ ಉದ್ದೇಶವಾಗಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಾಕಷ್ಟು ಅಭಿವೃದ್ಧಿ ಚಟುವಟಿಕೆಗಳನ್ನು ಈ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
73ನೇ ಸಂವಿಧಾನತಿದ್ದುಪಡಿಯ 29 ವಲಯಗಳನ್ನು ಪಂಚಾಯತ ರಾಜ್ ಸಂಸ್ಥೆಗಳಿಗೆ ಹಸ್ತಾಂತರಿಸುವುದು ಇವುಗಳಲ್ಲಿ ಅನೇಕ ಚಟುವಟಿಕೆಗಳು ನೇರವಾಗಿ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಪೂರಕವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ.
ಇವುಗಳಲ್ಲಿ ಪ್ರಮುಖವಾಗಿ ಪ್ರಸಕ್ತ ಸಾಲಿನಲ್ಲಿ ರಾಜ್ಯವು ಆರೋಗ್ಯ ಗ್ರಾಮ, ಮಕ್ಕಳ ಸ್ನೇಹಿ ಪಂಚಾಯತ್ ಮತ್ತು ಮಹಿಳಾ ಸ್ನೇಹಿ ಪಂಚಾಯತಿಗಳಿಗೆ ಒತ್ತು ಕೊಟ್ಟಿದ್ದು ಗ್ರಾಮ ಪಂಚಾಯಿತಿಗಳನ್ನು ಇವುಗಳಿಗೆ ಪೂರಕವಾಗಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿವೆ.
ಸಚಿವ ಕೆ. ಎಸ್. ಈಶ್ವರಪ್ಪ ಮಾತನಾಡಿ, "ಕರ್ನಾಟಕ ರಾಜ್ಯವು ಮಹಾತ್ಮ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಉತ್ತಮ ಸಾಧನೆ ಮಾಡಿದೆ" ಎಂದರು.
"ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿದ್ದು, ಮನೆ-ಮನೆಗೆ ಪೈಪ್ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸುತ್ತಿದ್ದು ಭಾರತಸರ್ಕಾರದ ಜಲ ಜೀವನ್ ಮಿಷನ್ ಇದಕ್ಕೆ ಉತ್ತೇಜನೆ ನೀಡಿದೆ" ಎಂದು ಹೇಳಿದರು.
"ರಾಜ್ಯವು ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳಾಗಿದ್ದು, ಘನ ಮತ್ತು ದ್ರವ ತ್ಯಾಜ್ಯ ಘಟಕಗಳನ್ನು ಪಂಚಾಯತಿಗಳ ಹಂತದಲ್ಲಿ ಸ್ಥಾಪಿಸಲು ಹೆಚ್ಚಿನ ಕ್ರಮವಹಿಸುತ್ತಿದೆ. ನೈಸರ್ಗಿಕ ಸಂಪನ್ಮೂಲಗಳಿಗೆ ಪೂರಕವಾಗಿ ರಾಜ್ಯದ 48 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ಅಭಿವೃದ್ಧಿಪಡಿಸಿದ್ದು, 608 ಕಲ್ಯಾಣಿ ಮತ್ತು ಪುಷ್ಕರಣಿಗಳಿಗೆ ಪುನರ್ಜೀವ ನೀಡಿದೆ" ಎಂದು ಸಚಿವರು ಹೇಳಿದರು.
"ಕರ್ನಾಟಕದ ಗ್ರಾಮ ಪಂಚಾಯಿತಿಗಳು ಗ್ರಾಮೀಣ ಪ್ರದೇಶದಲ್ಲಿ ಕೋವಿಡ್-19 ತಡೆಗಟ್ಟಲು ಹಾಗೂ ಪಟ್ಟಣ ಪ್ರದೇಶಗಳಿಂದ ಗ್ರಾಮಗಳಿಗೆ ವಲಸೆ ಬಂದವರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಕಳೆದ 2 ವರ್ಷಗಳಿಂದ ಸಾಕಷ್ಟು ಸಾಧನೆ ಮಾಡಿವೆ. ಇದರಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ರಚಿಸಿದ ಗ್ರಾಮ ಪಂಚಾಯಿತಿ ಟಾಸ್ಕ್ ಫೊರ್ಸ್ ಮಹತ್ವದ್ದಾಗಿದೆ" ಎಂದು ತಿಳಿಸಿದರು.
"ರಾಜ್ಯದ ಗ್ರಾಮ ಪಂಚಾಯಿತಿಗಳು ಶಿಕ್ಷಣ ಕ್ಷೇತ್ರದಲ್ಲಿಯೂ ಸಹ ಹೆಚ್ಚಿನ ಸಾಧನೆ ಮಾಡುತ್ತಿವೆ. ಪ್ರಮುಖವಾಗಿ ಗ್ರಾಮ ಪಂಚಾಯಿತಿ ಹಂತದ ಗ್ರಂಥಾಲಯಗಳನ್ನು ಡಿಜಿಟಲಿಕರಣ ಮಾಡುವ ಮುಖಾಂತರ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಪಡೆಯಲು ಸಹಕರಿಸುತ್ತಿವೆ" ಎಂದರು.
ಕರ್ನಾಟಕ ರಾಜ್ಯದಲ್ಲಿ ಸುಮಾರು 90 ಸಾವಿರ ಗ್ರಾಮ ಪಂಚಾಯಿತಿ ಸದಸ್ಯರುಗಳು ನೂತನವಾಗಿ ಆಯ್ಕೆಯಾಗಿದ್ದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯು ಅತ್ಯುತ್ತಮ ತರಬೇತಿ ನೀಡಿದ್ದು ಅಭಿನಂದನಾರ್ಹವಾಗಿದೆ.
ಕರ್ನಾಟಕ ರಾಜ್ಯದ ಸುಸ್ಥಿರ ಅಭಿವೃದ್ಧಿ ಗುರಿಗಳ ಸ್ಥಳೀಕರಣ ಮತ್ತು ಅವುಗಳ ಸಾಧನೆ ಮಾಡುವಲ್ಲಿ ಭಾರತ ಸರ್ಕಾರವು ಪಂಚಾಯರಾತಜ್ ಮಂತ್ರಾಲಯದೊಂದಿಗೆ ಕೈ ಜೋಡಿಸಿ ಕಾರ್ಯನಿರ್ವಹಿಸುವುದೆಂದು ತಿಳಿಸಲು ಹರ್ಷಿಸುತ್ತೇನೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications