ಆಗಸ್ಟ್‌ 9ರಿಂದ ಕೆ.ಎಸ್.ಈಶ್ವರಪ್ಪ ರಾಜ್ಯ ಪ್ರವಾಸ

Recommended Video

      ಆಗಸ್ಟ್ 9ರಿಂದ ಈಶ್ವರಪ್ಪನವರ ರಾಜ್ಯ ಪ್ರವಾಸ ಶುರು | Oneindia Kannada

      ಬೆಂಗಳೂರು, ಆಗಸ್ಟ್ 07 : ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡಲು ಬಿಜೆಪಿ ನಾಯಕರು ರಾಜ್ಯ ಪ್ರವಾಸ ಮಾಡಲಿದ್ದಾರೆ. ಮೂರು ತಂಡಗಳಲ್ಲಿ ನಾಯಕರು ಆಗಸ್ಟ್ 9ರಿಂದ ರಾಜ್ಯ ಪ್ರವಾಸವನ್ನು ಆರಂಭಿಸಲಿದ್ದಾರೆ.

      ಮಂಗಳವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಿವಮೊಗ್ಗ ನಗರ ಶಾಸಕ ಕೆ.ಎಸ್.ಈಶ್ವರಪ್ಪ ಅವರು, 'ಆಗಸ್ಟ್ 9ರಿಂದ ರಾಜ್ಯ ಪ್ರವಾಸ ಮಾಡಲಾಗುತ್ತದೆ' ಎಂದು ಹೇಳಿದರು.

      'ನಮ್ಮ ತಂಡದಲ್ಲಿ ಸಿ.ಟಿ.ರವಿ, ಲಕ್ಷ್ಮಣ ಸವದಿ ಮುಂತಾದ ನಾಯಕರಿದ್ದಾರೆ. ಹಾಸನ, ಚಾಮರಾಜನಗರ, ಮಂಗಳೂರು, ಕೊಡಗು ಜಿಲ್ಲೆಯಲ್ಲಿ ತಂಡ ಪ್ರವಾಸ ಮಾಡಲಿದೆ' ಎಂದು ಮಾಹಿತಿ ನೀಡಿದರು.

      ಬಿ.ಎಸ್.ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಗೋವಿಂದ ಕಾರಜೋಳ ಅವರ ತಂಡ, ಜಗದೀಶ್ ಶೆಟ್ಟರ್, ಆರ್.ಅಶೋಕ್, ಅರವಿಂದ ಲಿಂಬಾವಳಿ ಮುಂತಾದ ನಾಯಕರ ತಂಡವೂ ಆಗಸ್ಟ್ 9ರಿಂದ ರಾಜ್ಯ ಪ್ರವಾಸವನ್ನು ಕೈಗೊಳ್ಳಲಿದೆ.

      KS Eshwarappa state tour from August 9

      ವಿಶ್ವನಾಥ್ ವಿರುದ್ಧ ವಾಗ್ದಾಳಿ : ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ವಿರುದ್ಧ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು. 'ಎಚ್.ವಿಶ್ವನಾಥ್ ಕಾಂಗ್ರೆಸ್ ಬಿಟ್ಟ ಮೇಲೆ ಅವರಿಗೆ ಉದ್ಯೋಗವಿರಲಿಲ್ಲ. ದೇವೇಗೌಡರ ಹತ್ತಿರ ಹೋಗಿ ಶಾಸಕರಾಗಿದ್ದಾರೆ. ಈಗ ಬಿಜೆಪಿ ಬಗ್ಗೆ ಮಾತನಾಡುತ್ತಾರೆ' ಎಂದು ಲೇವಡಿ ಮಾಡಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+