KSDL: ಒಂದೇ ಭಾರಿಗೆ 21 ಹೊಸ ಉತ್ಪನ್ನ ಬಿಡುಗಡೆ, ಸಾವಿರಾರು ಕೋಟಿ ವಹೀವಾಟು, ವಿವರ

ಬೆಂಗಳೂರು, ಜನವರಿ 20: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (KSDL) ಉತ್ಪಾದಿಸಿರುವ 21 ನೂತನ ಉತ್ಪನ್ನಗಳನ್ನು ಮಾರುಕಟ್ಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬಿಡುಗಡೆ ಮಾಡಿದರು.

ಕೆಎಸ್‌ಡಿಎಲ್ ಸಂಸ್ಥೆಯಿಂದ ಬಿಡುಗಡೆಯಾದ ಒಟ್ಟು ಉತ್ಪನ್ನಗಳ ಪೈಕಿ ಮೈಸೂರು ಸ್ಯಾಂಡಲ್ ವೇವ್ಸ್ ಶ್ರೇಣಿಯ 10 ಬಗೆಯ ಪ್ರೀಮಿಯಂ ಮೈಸೂರು ಸ್ಯಾಂಡಲ್ ಸಾಬೂನುಗಳು, 3 ಬಗೆಯ ಶವರ್ ಜೆಲ್, 6 ತರಹದ ಸೋಪ್ ಕಿಟ್, ಹ್ಯಾಂಡ್ ವಾಶ್ ಮತ್ತು ಕುಡಿಯುವ ನೀರು ಸೇರಿವೆ.

KSDL 21 New Products Realesed by CM Siddaraiah, Rs 3000 Crore Transaction Expect, Know More

ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉತ್ಪನ್ನ ಬಿಡುಗಡೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 107 ವರ್ಷಗಳ ಇತಿಹಾಸ ಹೊಂದಿರುವ ಕೆಎಸ್ಡಿಎಲ್, ಒಂದೇ ಬಾರಿಗೆ 21 ಉತ್ಪನ್ನಗಳನ್ನು ಬಿಡುಗಡೆ ಮಾಡಿರುವುದು ಇದೇ ಮೊದಲ ಸಲ ಎಂದರು.

ಸಂಸ್ಥೆಯು ಈಗಿನ ತಲೆಮಾರಿನ ಯುವಜನರ ನಿರೀಕ್ಷೆಗೆ ತಕ್ಕಂತೆ ಶವರ್ ಜೆಲ್ ಸೇರಿದಂತೆ ಬಗೆಬಗೆಯ ಉತ್ಪನ್ನಗಳನ್ನು ಉತ್ಪಾದಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿ. ಇದರ ಜೊತೆಗೆ ಗುಣಮಟ್ಟಕ್ಕೆ ಆದ್ಯತೆ ಮುಂದುವರಿಯಬೇಕು ಎಂದು ಸಲಹೆ ನೀಡಿದರು.

182 ಕೋಟಿ ರೂ.ಗೆ ಲಾಭ ಏರಿಕೆ

ಕಳೆದ ಸಾಲಿನಲ್ಲಿ ಸಂಸ್ಥೆಯು 132 ಕೋಟಿ ರೂ. ಲಾಭ ಮಾಡಿತ್ತು. ಎಂಬಿ ಪಾಟೀಲರು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮೇಲೆ, ಕಳೆದ ಎಂಟು ತಿಂಗಳಲ್ಲಿ ಲಾಭವು 182 ಕೋಟಿ ರೂ.ಗಳಿಗೆ ಏರಿಕೆ ಆಗಿದೆ. ಮುಂಬರುವ ದಿನಗಳಲ್ಲಿ ಸಂಸ್ಥೆಯ ಉತ್ಪಾದನಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಲು ಅವರು ಹಲವು ಮಹತ್ವಾಕಾಂಕ್ಷಿ ಉಪಕ್ರಮಗಳನ್ನು ಕೈಗೊಂಡಿರುವುದು ಸ್ತುತ್ಯರ್ಹ ಸಂಗತಿಯಾಗಿದೆ ಎಂದು ಅವರು ಸಚಿವರ ಬೆನ್ನುತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

KSDL 21 New Products Realesed by CM Siddaraiah, Rs 3000 Crore Transaction Expect, Know More

ಹೈದರಾಬಾದಿನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪು ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ಮಾಡಿ, ಇಬ್ಬರನ್ನು ಬಂಧಿಸಿ, ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಉತ್ಕೃಷ್ಟ ಗುಣಮಟ್ಟಕ್ಕೆ ಹೆಸರಾಗಿರುವ ಕೆಎಸ್ಡಿಎಲ್ ಉತ್ಪನ್ನಗಳು ನಕಲಾಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿರುವುದನ್ನು ಅವರು ಶ್ಲಾಘಿಸಿದರು.

ರೂ.3000 ಕೋಟಿ ವಹೀವಾಟಿನ ಗುರಿ: ಸಚಿವರು

KSDL ಅಧ್ಯಕ್ಷರೂ ಆದ ಸಚಿವ ಎಂಬಿ ಪಾಟೀಲ ಮಾತನಾಡಿ, ಸಂಸ್ಥೆಯ ವಹಿವಾಟು ಸದ್ಯಕ್ಕೆ 1,400 ಕೋಟಿ ರೂ.ಗಳ ಆಚೀಚೆ ಇದೆ. ಇದನ್ನು ಎರಡು ವರ್ಷಗಳಲ್ಲಿ 3,000 ಕೋಟಿ ರೂ.ಗಳಾಗುವಂತೆ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಉತ್ಪಾದನೆಯ ಪ್ರಮಾಣವು ಇತ್ತೀಚೆಗೆ ಶೇ.25ರಷ್ಟು ಹೆಚ್ಚಾಗಿದೆ.

ಕಳೆದ ಎಂಟು ತಿಂಗಳಲ್ಲಿ ಸಂಶೋಧನೆ ನಡೆಸಿ, ದಾಖಲೆಯ ಕ್ಷಿಪ್ರ ಅವಧಿಯಲ್ಲಿ ಹೊಸ ಉತ್ಪನ್ನಗಳನ್ನು ಹೊರತರಲಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ತಾಂತ್ರಿಕ ಸಮಾಲೋಚಕ ರಜನೀಕಾಂತ್ ಅವರ ನೆರವು ನಿರ್ಣಾಯಕವಾಗಿದೆ. ಜೊತೆಗೆ, ಪಾರದರ್ಶಕ ಸಾಬೂನುಗಳು ಮತ್ತು ಸುಗಂಧಭರಿತ ಉತ್ಪನ್ನಗಳ ತಯಾರಿಕೆ ಕೂಡ ಸದ್ಯದಲ್ಲೇ ಆರಂಭವಾಗಲಿದೆ ಎಂದು ತಿಳಿಸಿದರು.

ಹೊಸ ತಂತ್ರಜ್ಞಾನ ಅಳವಡಿಕೆ

ಸಂಸ್ಥೆಯ ಉತ್ಪನ್ನಗಳ ನಕಲನ್ನು ತಡೆಯಲು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ. ಜೊತೆಗೆ ಅಮೆರಿಕ, ಯೂರೋಪ್ ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ KSDL ಉತ್ಪನ್ನಗಳಿಗೆ ಬೇಡಿಕೆ ಇದ್ದು, ಅಂತಾರಾಷ್ಟ್ರೀಯ ವಹಿವಾಟನ್ನು ಸದ್ಯದ 19 ಕೋಟಿ ರೂ.ಗಳಿಂದ 25 ಕೋಟಿ ರೂ.ಗಳಿಗೆ ಈ ವರ್ಷವೇ ಹೆಚ್ಚಿಸಿಕೊಳ್ಳುವ ಗುರಿ ಇಟ್ಟುಕೊಳ್ಳಲಾಗಿದೆ. ಜತೆಗೆ ಇಡೀ ಭಾರತದಲ್ಲಿ ಸಂಸ್ಥೆಯ ಮಾರುಕಟ್ಟೆ ಜಾಲವನ್ನು ಬೆಳೆಸಲಾಗುವುದು ಎಂದು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೆಎಸ್ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್, ತಾಂತ್ರಿಕ ಸಲಹೆಗಾರ ರಜನೀಕಾಂತ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು. ಕೆಎಸ್ಡಿಎಲ್ ಆಡಳಿತಾಧಿಕಾರಿ ಗಂಗಪ್ಪ ಸ್ವಾಗತಿಸಿದರು.

ಕೆಎಸ್‌ಡಿಎಲ್ ಉತ್ಪನ್ನಗಳ ಮಾಹಿತಿ

ಶನಿವಾರ ಮಾರುಕಟ್ಟೆಗೆ ಬಿಡುಗಡೆ ಮಾಡಲಾದ ಕೆಎಸ್ಡಿಎಲ್ ಹೊರತಂದಿರುವ ಮೈಸೂರು ಸ್ಯಾಂಡಲ್ ವೇವ್' ಶ್ರೇಣಿಯ ಪ್ರೀಮಿಯಂ ಸಾಬೂನುಗಳು ಜಾಗತಿಕ ಗುಣಮಟ್ಟದಿಂದ ಕೂಡಿವೆ.

ಈ ಶ್ರೇಣಿಯಲ್ಲಿ ವೆಜಿಟಬಲ್ ಆಯಿಲ್ ಮತ್ತು ಅರಿಶಿನವಿರುವ ವೇವ್ ಟರ್ಮರಿಕ್, ನಿಂಬೆಯ ಪರಿಮಳದ ವೇವ್ ಲೈಮ್, ಪುದೀನಾದ ಘಮ ಸೂಸುವ ವೇವ್ ಡಿಯೋ, ಕೇಸರಿ ಇರುವ ವೇವ್ ಮಿಲ್ಕ್ ಸ್ಯಾಫ್ರನ್, ಬಾದಾಮಿ ಎಣ್ಣೆಯ ಅಂಶವಿರುವ ವೇವ್ ಆಲ್ಮಂಡ್, ಶುದ್ಧ ಬೇವಿನೆಣ್ಣೆ, ತುಳಸಿ ಮತ್ತು ಅರಿಶಿನವಿರುವ ನೀಮ್ ಸೋಪ್, ಲೋಳೇಸರ ಮತ್ತು ಬಾದಾಮಿ ತೈಲದ ಅಂಶವಿರುವ ವೇವ್ ಅಲೋ ಸೋಪ್, ಮಲ್ಲಿಗೆಯ ಸುಗಂಧವಿರುವ ಜಾಸ್ಮೀನ್ ಕ್ರೀಮ್ ಸೋಪ್, ಔದ್ ಅರೇಬಿಯನ್ ಐಷಾರಾಮಿ ಸಾಬೂನು ಮತ್ತು ಸೀಗೇಕಾಯಿ, ಜಪಾಕುಸುಮ, ಭೃಂಗರಾಜ, ನೆಲ್ಲೀಕಾಯಿ ಹಾಗೂ ಬ್ರಾಹ್ಮೀ ಇರುವ ಮೈಸೂರು ಸ್ಯಾಂಡಲ್ ಶಿಕಾಕಾಯಿ ಸಾಬೂನುಗಳಿವೆ ಎಂದು ಸಚಿವ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+