2017 ಕೆ–ಸೆಟ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಬೆಂಗಳೂರು, ಅಕ್ಟೋಬರ್ 10 : ಮೈಸೂರು ವಿಶ್ವವಿದ್ಯಾಲಯ ಆಯೋಜಿಸುತ್ತಿರುವ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಬಾರಿ 39 ವಿಷಯಗಳಿಗೆ ಪರೀಕ್ಷೆ ನಡೆಯಲಿದ್ದು, ಕೆ-ಸೆಟ್ ಪರೀಕ್ಷೆಗೆ ಅಕ್ಟೋಬರ್ 9ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇನ್ನು ಡಿಸೆಂಬರ್ 31ರಂದು ಪರೀಕ್ಷೆ ನಡೆಯಲಿದೆ.
ಕೆ-ಸೆಟ್ ಪರೀಕ್ಷೆ ಬರೆಯಲು ಬೇಕಾಗಿರುವ ಅರ್ಹತೆಗಳು:
* ಕೆ-ಸೆಟ್ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ 55ರಷ್ಟು ಅಂಕ ಪಡೆದಿರಬೇಕು. ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ ಹಾಗೂ ಅಂಗವಿಕಲ ಅಭ್ಯರ್ಥಿಗಳು ಶೇ 50 ಅಂಕ ಗಳಿಸಿರಬೇಕು.
* ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 1,050 ರು, ಹಿಂದುಳಿದ ವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 850 ಹಾಗೂ ಎಸ್ಸಿ, ಎಸ್ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 550 ರು. ಶುಲ್ಕ ನಿಗದಿಪಡಿಸಲಾಗಿದೆ.
* ಪರೀಕ್ಷೆ ನಡೆಯುವ ಕೇಂದ್ರಗಳು: ಬೆಂಗಳೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ತುಮಕೂರು.
ಕೆ-ಸೆಟ್ ವೇಳಾಪಟ್ಟಿ:
* ಅ.9ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅ.31 ಅರ್ಜಿ ಸಲ್ಲಿಸಲು ಕೊನೆ ದಿನ ವಾಗಿದೆ.
*150 ದಂಡ ಸಹಿತ ಅರ್ಜಿ ಸಲ್ಲಿಸಲು ನವೆಂಬರ್ 7 ಕೊನೆ ದಿನ.
* ನ.10 ಬ್ಯಾಂಕ್ ಚಲನ್ ಹಾಗೂ ಕೇಳಲಾಗಿರುವ ಅಗತ್ಯ ದಾಖಲೆಗಳೊಂದಿಗೆ ಮೂಲಪ್ರತಿಗಳನ್ನು ನೋಡಲ್ ಕೇಂದ್ರಗಳಿಗೆ ತಲುಪಿಸಲು ಅಂತಿಮ ದಿನ.
*ಡಿ.31- ಅರ್ಹತಾ ಪರೀಕ್ಷೆ ನಡೆಯಲಿದೆ.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications