Get Updates
Get notified of breaking news, exclusive insights, and must-see stories!

KSET 2025: ಕೆಸೆಟ್ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದ KEA, ಅರ್ಜಿ ಆಹ್ವಾನ: ಪರೀಕ್ಷೆ ವೇಳಾಪಟ್ಟಿ

ಬೆಂಗಳೂರು, ಆಗಸ್ಟ್ 23: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2025) ನಡೆಸಲು ನಿರ್ಧರಿಸಿದೆ. ಈ ಸಂಬಂಧ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪರೀಕ್ಷೆ ಕುರಿತು ಅಧಿಸೂಚನೆ ಹೊರಡಿಸಿದೆ. ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಕೊನೆಗೊಳ್ಳುವ ದಿನಾಂಕ, ಪರೀಕ್ಷಾ ದಿನಾಂಕ ಪ್ರಕಟಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನವೆಂಬರ್ 02ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2025) ನಡೆಸಲಿದೆ. ಇದಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಇದೇ ತಿಂಗಳ ಆಗಸ್ಟ್ 28ರಿಂದ ಆರಂಭಿಸಲಿದೆ. ಅರ್ಹತೆ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸೆಪ್ಟಂಬರ್ 18 ರತನಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ ಎಂದು KEA ಕಾರ್ಯ ನಿರ್ವಾಹಕ ನಿರ್ದೇಶಕರಾದ ಎಚ್‌.ಪ್ರಸನ್ನ ಅವರು ತಿಳಿಸಿದ್ದಾರೆ.

KSET 2025 Exam Notification Released by KEA Check Exam Date Application Fees Details here

ಪ್ರವೇಶ್ ಪತ್ರ ಬಿಡುಗಡೆ ಯಾವಾಗ?

ಕೆಸೆಟ್ 2025 ಅರ್ಜಿ ಶುಲ್ಕ ಪಾವತಿಗೆ ಸೆಪ್ಟಂಬರ್ 19ರವರೆಗೆ ಅವಕಾಶ ನೀಡಲಾಗಿದೆ. ಅಕ್ಟೋಬರ್ 24ರಂದು ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವೇಳೆ ಪೋಸ್ಟ್ ಹಾಗೂ ಇತರ ಯಾವುದೇ ವಿಧದಲ್ಲಿ ಅರ್ಜಿ ಸಲ್ಲಿಸಿದರೆ ಸ್ವೀಕರಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿನ ವಿಶ್ವವಿದ್ಯಾಲಯ, ಪ್ರಥಮ ದರ್ಜೆ ಪದವಿ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ, ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹತೆ ಪಡೆಯಲು ಪ್ರತಿ ವರ್ಷದಂತೆ ಈ ವರ್ಷ ಕೂಡ ಕೆಸೆಟ್ ಪರೀಕ್ಷೆ ನಡೆಸಲಾಗುತ್ತಿದೆ. ಸ್ನಾತಕೋತ್ತರ ಪದವಿ ಪಡೆದವರು ಮಾತ್ರವೇ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಒಟ್ಟು 33 ವಿಷಯಗಳಲ್ಲಿ ಈ ಕೆಸೆಟ್ ಪರೀಕ್ಷೆ ಜರುಗಲಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲ್ಲಿ ನೀಡಲಾದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಇನ್ನೂ ಕನ್ನಡದಲ್ಲಿ ಅಧಿಸೂಚನೆ ಓದಬೇಕೆನ್ನುವ ಅಭ್ಯರ್ಥಿಗಳು ಈ https://cetonline.karnataka.gov.in/keawebentry456/kset2025/kset25kankannada.pdf ಗೆ ಭಟಿ ನೀಡಬೇಕು. ಇಂಗ್ಲಿಷ್‌ನಲ್ಲಿ ಅಧಿಸೂಚನೆ ತಿಳಿಯಬೇಕೆನ್ನುವವರು ಈ https://cetonline.karnataka.gov.in/keawebentry456/kset2025/kset25engenglish.pdf ಲಿಂಕ್‌ ಪ್ರವೇಶಿಸಿ ನೋಡಬಹುದಾಗಿದೆ ಎಂದು ಎಚ್.ಪ್ರಸನ್ನ ಅವರು ಹೇಳಿದ್ದಾರೆ.

ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: ಆಗಸ್ಟ್ 28

* ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಸೆಪ್ಟಂಬರ್ 18

* ಅರ್ಜಿ ಶುಲ್ಕ ಪಾವತಿ ದಿನಾಂಕ: ಸೆಪ್ಟಂಬರ್ 19

* ಪ್ರವೇಶ ಪತ್ರ ಬಿಡುಗಡೆ: ಅಕ್ಟೋಬರ್ 24

* ಪರೀಕ್ಷೆ ದಿನಾಂಕ: ನವೆಂಬರ್ 02

* ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ನಲ್ಲಿ ಮಾತ್ರವೇ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/ugcet2025 ಲಿಂಕ್ ಗೆ ಭೇಟಿ ನೀಡಬೇಕೆಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+