ಕೆಎಸ್‌ಒಯು ಪದವೀಧರರು ಕೆಪಿಎಸ್ಸಿ ಎಕ್ಸಾಂ ಬರಿಬಹುದು
ಮೈಸೂರು, ಸೆಪ್ಟೆಂಬರ್. 26: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕೆಎಸ್‌ಒಯು) ಪದವೀಧರರಿಗೆ ಒಮ್ಮೆ ನಿಟ್ಟುಸಿರು ಬಿಡುವಂತೆ ಆಗಿದೆ. ಪ್ರಥಮ ಮತ್ತು ದ್ವಿತೀಯದರ್ಜೆ ಸಹಾಯಕರ (ಎಫ್‌ಡಿಎ, ಎಸ್‌ಡಿಎ) ನೇಮಕಾತಿ ಪರೀಕ್ಷೆ ಬರೆಯಲು ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಷರತ್ತುಬದ್ಧ ಪದವೀಧರರಿಗೆ ಷರತ್ತುಬದ್ಧ ಅನುಮತಿ ನೀಡಿದೆ.
ಈ ಬಗ್ಗೆ ವಿವರಣೆ ನೀಡಿರುವ ವಿಧಾನ ಪರಿಷತ್ ಸದಸ್ಯ, ಮುಕ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಗೋ. ಮಧುಸೂದನ, ಎಫ್‌ಡಿಎ, ಎಸ್‌ಡಿಎ ನೇಮಕಾತಿ ಪರೀಕ್ಷೆಗೆ ಕೆಎಸ್‌ಒಯು ಅಭ್ಯರ್ಥಿಗಳಿಗೆ ಅವಕಾಶ ಕೋರಿ ಕೆಪಿಎಸ್‌ಸಿ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿರುವ ಕಾರ್ಯದರ್ಶಿ ಮನೋಜ್‌ಕುಮಾರ್ ಮೀನಾ ಕೆಎಸ್‌ಒಯು ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂಬ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.[ಕೆಎಸ್ ಒಯು ಮಾನ್ಯತೆ ರದ್ದು : ಏಕೆ, ಏನು, ಮುಂದೇನು?]

ದಾಖಲೆ ಪರಿಶೀಲನೆ ವೇಳೆಗೆ ಕೆಎಸ್ಒಯು ಮಾನ್ಯತೆಯು ಪೂರ್ವಾನ್ವಯವಾಗುವಂತೆ ನವೀಕರಣಗೊಂಡಿದ್ದರೆ ಮಾತ್ರ ಆಯ್ಕೆಯಾದ ಕೆಎಸ್‌ಒಯು ಅಭ್ಯರ್ಥಿಗಳನ್ನು ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುವುದು ಎಂಬ ಷರತ್ತು ವಿಧಿಸಲಾಗಿದೆ ಎಂದು ತಿಳಿಸಿದರು.[ಎಫ್‌ಡಿಎ, ಎಸ್‌ಡಿಎ ಪರೀಕ್ಷೆ ವೇಳಾಪಟ್ಟಿ ಪ್ರಕಟ]
ಇದರ ಜತೆಗೆ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೂ ಕೆಎಸ್‌ಒಯು ಅಭ್ಯರ್ಥಿಗಳಿಗೂ ಬರೆಯಲು ಅವಕಾಶ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಯುಕ್ತ ಚಕ್ರವರ್ತಿ ಮೋಹನ್ ಅವರಿಗೆ ಕೋರಿಕೆ ಸಲ್ಲಿಸಲಾಗಿದೆ. ಈ ಬಗ್ಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕಿದೆ ಎಂದು ಹೇಳಿದರು.[ಲಗ್ನ ಪತ್ರಿಕೇಲಿ (ಎಂಎ) ಅಂತ ಬರೆಸಿಕೊಳ್ಳೋಣ ಅಂತಿದ್ದೆ!]
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕೆಎಸ್‌ಒಯು) ನಿಯಮಗಳನ್ನು ಪಾಲಿಸಿಲ್ಲ ಎಂದು ಯುಜಿಸಿ ಮಾನ್ಯತೆಯನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಯುಜಿಸಿ ಕ್ರಮದ ವಿರುದ್ಧ ವಿಶ್ವವಿದ್ಯಾಲಯ ನ್ಯಾಯಾಲಯದ ಮೆಟ್ಟಿಲು ಏರಿದೆ. ಆದರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸ್ಪಷ್ಟ ಚಿತ್ರಣ ಸಿಗುತ್ತಿಲ್ಲ.


Click it and Unblock the Notifications
